![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 16, 2020, 3:04 AM IST
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧದ ನೆಪದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಕೃತ್ಯಗಳು, ಅಕ್ರಮ ಬಾಂಗ್ಲಾ ನುಸುಳುಕೋರರ ಸಮಸ್ಯೆ, ಹಿಂದೂ ಕಾರ್ಯಕರ್ತರ ಬರ್ಬರ ಹತ್ಯೆಯ ಷಡ್ಯಂತ್ರ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಧರ್ಮಶಿಕ್ಷಣ ನೀಡಲು ಹಿಂದೂ ಜನಜಾಗೃತಿ ಸಮಿತಿ ಜ.18 ಮತ್ತು 19ರಂದು ಹಿಂದೂರಾಷ್ಟ್ರ ಅಧಿವೇಶನ ಹಮ್ಮಿಕೊಂಡಿದೆ.
ಮಾಗಡಿ ಮುಖ್ಯ ರಸ್ತೆಯ ಕಾಮಾಕ್ಷಿಪಾಳ್ಯದ ಧನಂಜಯ ಪ್ಯಾಲೇಸ್‌ನಲ್ಲಿ ಜ.18ರ ಬೆಳಗ್ಗೆ ಅಧಿವೇಶನ ಉದ್ಘಾಟನೆಯಾ ಗಲಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಇಸ್ಲಾಮಿಕ್ ಭಯೋತ್ಪಾದನೆ, ಹಿಂದೂ ಧರ್ಮದ ಅಪಮಾನ ಮಾಡುವ ಷಡ್ಯಂತ್ರ, ದೇವಸ್ಥಾನಗಳ ಸರ್ಕಾರೀಕರಣ, ಮತಾಂತರ, ಲವ್ ಜಿಹಾದ್, ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸುವುದು ಮೊದಲಾದ ಸಮಸ್ಯೆಗಳ ಮೇಲೆ ಕಾನೂನಾತ್ಮಕ ಮತ್ತು ಸಂಘಟನಾತ್ಮಕ ಪರಿಹಾರ ಕಂಡುಕೊಳ್ಳಲು ಈ ಅಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂ ಶಿಕ್ಷಣ ಮತ್ತು ರಾಷ್ಟ್ರದ ಬಗ್ಗೆ ಜನಜಾಗೃತಿ ಮಾಡಲು ದಕ್ಷಿಣ ಕರ್ನಾಟಕ 12 ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುವ 100 ಕ್ಕೂ ಅಧಿಕ ಹಿಂದೂ ಸಂಘಟನೆಗಳ 500 ಕ್ಕೂ ಅಧಿಕ ಹಿಂದೂ ಸಂಘಟನೆಯ ಪದಾಧಿಕಾರಿಗಳು, 100 ಕ್ಕೂ ಅಧಿಕ ರಾಷ್ಟ್ರ ಪ್ರೇಮಿ ವಕೀಲರ, ಸಾಮಾಜಿಕ ಹೋರಾಟಗಾರರು ಮತ್ತು ಹಿಂದೂ ಧಾರ್ಮಿಕ ಮುಖಂಡರು, ಉದ್ಯಮಿಗಳು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಮಾಹಿತಿಗೆ ಮೊ. 7204082609 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.