ನಿರಾಶ್ರಿತರಿಗೆ ಮನೆ ನಿರ್ಮಾಣ ಮೊದಲ ಆದ್ಯತೆ: ಸೋಮಣ್ಣ
Team Udayavani, Sep 17, 2019, 3:05 AM IST
ಬೆಂಗಳೂರು: ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಲಕ್ಷಾಂತರ ಜನರು ಮನೆಗಳನ್ನು ಕಳೆದುಕೊಂಡಿದ್ದು, ನಿರಾಶ್ರಿತರಿಗೆ ಮನೆ ನಿರ್ಮಾಣ ಮಾಡಲು ಮೊದಲ ಆದ್ಯತೆ ನೀಡಲು ವಸತಿ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಾವೇರಿ ಭವನದಲ್ಲಿ ಗೃಹ ಮಂಡಳಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಮೈಸೂರು ದಸರಾ ಉಸ್ತುವಾರಿ ವಹಿಸಿಕೊಂಡಿರುವುದರಿಂದ ದಸರಾ ಮುಗಿದ ತಕ್ಷಣ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ನಿರಾಶ್ರಿತರಿಗೆ ಮನೆ ನಿರ್ಮಾಣ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲು ತೀರ್ಮಾನಿಸಿದ್ದು, ಅದಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೈಗೆತ್ತಿಕೊಂಡಿರುವ ಯೋಜನೆಗಳನ್ನು ಶೀಘ್ರ ಹಾಗೂ ಪಾರದರ್ಶಕವಾಗಿ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಂಡಳಿಯಲ್ಲಿ ಮನೆ, ನಿವೇಶನ ಪಡೆಯಲು ಅರ್ಜಿ ಸಲ್ಲಿಸಿರುವ ಗ್ರಾಹಕರಿಗೆ ತೊಂದರೆಯಾಗದಂತೆ ಉತ್ತಮ ಸೇವೆ ನೀಡುವಂತೆ ನಿರ್ದೇಶನ ನೀಡಿದ್ದಾರೆ.
ಸಭೆಯ ನಂತರ ಮಾತನಾಡಿದ ಸಚಿವ ವಿ ಸೋಮಣ್ಣ, ದಸರಾ ಬಳಿಕ ಉತ್ತರ ಕರ್ನಾಟಕದಲ್ಲೇ ಒಂದು ತಿಂಗಳು ಓಡಾಡಿ ಅಗತ್ಯ ಇರುವ ಕೆಲಸ ಮಾಡುತ್ತೇವೆ. ನನ್ನದು ಒಂದು ಸ್ಟೈಲ್ ಇದೆ. ಅದೇ ಸ್ಟೈಲ್ ನಲ್ಲಿ ಅಧಿಕಾರಿಗಳಿಗೆ ಕೆಲಸ ಮಾಡಲು ಹೇಳಿದ್ದೇನೆ. ಜನಸಾಮಾನ್ಯರ ಹತ್ತಿರಕ್ಕೆ ಕರ್ನಾಟಕ ಗೃಹಮಂಡಳಿಯನ್ನು ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.