ನಾಳೆಯಿಂದ “ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮ: ಪರಂ
Team Udayavani, Sep 22, 2017, 8:56 AM IST
ಬೆಂಗಳೂರು: ರಾಜ್ಯ ಕಾಂಗ್ರೆಸ್ ಮುಂದಿನ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟು ಕೊಂಡು ಈಗಿನಿಂದಲೇ ಮತದಾರರೊಂದಿಗೆ ನೇರ ಸಂಪರ್ಕ ಇಟ್ಟುಕೊಳ್ಳಲು “ಮನೆ ಮನೆಗೆ ಕಾಂಗ್ರೆಸ್’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸೆಪ್ಟೆಂಬರ್ 23ರಂದು ಅಧಿಕೃತ ಚಾಲನೆ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಮಹದೇವ ಪುರ ವಿಧಾನಸಭಾ ಕ್ಷೇತ್ರದಿಂದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತಿದೆ. ರಾಜ್ಯದ 224 ಕ್ಷೇತ್ರಗಳಲ್ಲಿಯೂ ಏಕ ಕಾಲಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್ 15 ರೊಳಗೆ ಮನೆ ಮನೆಗೆ ಭೇಟಿ ನೀಡಿ ಮತದಾರರನ್ನು ತಲುಪಬೇಕು. ಅದರ ಜತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 4 ವರ್ಷದಲ್ಲಿ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿದೆ. ಈಗ ಅವುಗಳನ್ನು ಜನರಿಗೆ ತಲುಪಿರುವ ಬಗ್ಗೆ ಮಾಹಿತಿ ಪಡೆಯಲು ಬೂತ್ ಮಟ್ಟದಿಂದಲೇ ಜನರಿಂದ ಮಾಹಿತಿ ಪಡೆಯಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಈಗಾಗಲೇ ಕಾಂಗ್ರೆಸ್ ರಾಜ್ಯದ 224 ಕ್ಷೇತ್ರಗಳಲ್ಲಿ 54,246 ಬೂತ್‌ಗಳಿಗೆ ಪ್ರತಿ ಬೂತ್ ನಲ್ಲಿಯೂ 13ರ ರಿಂದ 20 ಜನರ ಸಮಿತಿ ರಚಿಸಲಾಗಿದೆ. ಪ್ರತಿ ಬೂತ್‌ಗೂ ಅಧ್ಯಕ್ಷ ಹಾಗೂ ಬೂತ್ ಮಟ್ಟದ ಏಜೆಂಟ್ ಇರಲಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ಸೂಚನೆ ಮೇರೆಗೆ ಬೂತ್ ಲೆವೆಲ್ ಏಜೆಂಟರನ್ನು ನೇಮಿಸಲಾಗಿದೆ. ರಾಜ್ಯದಲ್ಲಿ 6.5 ಲಕ್ಷ ಬೂತ್ ಮಟ್ಟದ ಕಾರ್ಯಕರ್ತರಿದ್ದಾರೆ. ಅವರೆಲ್ಲರ
ಪೂರ್ವಾಪರ ದಾಖಲೆಗಳನ್ನು ಪಕ್ಷ ಸಂಗ್ರಹಿಸಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.