“ಮನೆ -ಮನೆ’ ಜಗಳ! ಮಕ್ಕಳ ಸಮೀಕ್ಷೆ: ಇಲಾಖೆಗಳ ಅಂತರ್‌ಕಲಹ

Team Udayavani, Dec 26, 2020, 6:35 AM IST

“ಮನೆ -ಮನೆ’ ಜಗಳ! ಮಕ್ಕಳ ಸಮೀಕ್ಷೆ: ಇಲಾಖೆಗಳ ಅಂತರ್‌ಕಲಹ  ಬೆಂಗಳೂರು: ಹಳ್ಳಿಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು “ಮನೆ-ಮನೆ’ ಸಮೀಕ್ಷೆ ನಡೆಸುವ ವಿಚಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ನಡುವೆ “ಮನೆ ಜಗಳ’ ನಡೆಯುತ್ತಿದೆ.  ಇಲಾಖೆಗಳ ನಡುವಿನ ಜಗಳಕ್ಕೆ ಕಾರಣ ಸಮೀಕ್ಷೆಗೆ ಅಂಗನ ವಾಡಿ ಕಾರ್ಯಕರ್ತೆಯರನ್ನು ನಿಯೋಜಿ ಸಿರು ವುದು. ಹೈಕೋರ್ಟ್‌ ಆದೇಶ ದಂತೆ ಮನೆ- ಮನೆ ಸಮೀಕ್ಷೆ ನಡೆಸಬೇಕಾಗಿದೆ ಎಂದು ಗ್ರಾಮೀಣಾಭಿ ವೃದ್ಧಿ ಇಲಾಖೆ ಹೇಳಿ ದರೆ, ನಮ್ಮ ಇಲಾಖೆಯ ಅಧೀನದಲ್ಲಿ ಬರುವ ಅಂಗನ ವಾಡಿ ಕಾರ್ಯಕರ್ತೆಯರನ್ನು ಈ ಸಮೀಕ್ಷೆಗೆ ನಿಯೋಜಿಸಿರುವುದು ನಮ್ಮ ಗಮನಕ್ಕೇ ಬಂದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೇಳುತ್ತಿದೆ. ಇದರ ನಡುವೆ ನಮ್ಮದಲ್ಲದ ಕೆಲಸಕ್ಕೆ ನಮ್ಮನ್ನು ಯಾಕೆ ನಿಯೋಜಿಸಿದ್ದೀರಿ ಎಂದು ಕಾರ್ಯಕರ್ತೆಯರು ಪ್ರಶ್ನಿಸತೊಡಗಿದ್ದಾರೆ.  ಇಲಾಖೆಗಳ ನಡುವಿನ ಗೊಂದಲ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಿಂದೇಟು ಹಾಕುತ್ತಿರುವುದರ ಪರಿಣಾಮ ಮಕ್ಕಳನ್ನು ಗುರುತಿಸುವ ಸಮೀಕ್ಷೆಗೆ ಗರ ಬಡಿದಂತಾಗಿದೆ. ಡಿ. 15ರಿಂದ ಮನೆ-ಮನೆ ಸಮೀಕ್ಷೆ ಆರಂಭಗೊಂಡು 2021ರ ಜ. 15ಕ್ಕೆ ಪೂರ್ಣಗೊಳ್ಳಬೇಕಿತ್ತು. ಆದರೆ ಇನ್ನೂ ಆರಂಭವಾಗಿಲ್ಲ.   ಶಿಕ್ಷಕರ ಕೆಲಸ ನಮ್ಮ ಹೆಗಲಿಗೇಕೆ? ಮಕ್ಕಳನ್ನು ಮರಳಿ ಶಾಲೆಗೆ ಕರೆತರುವುದು ಶಿಕ್ಷಣ ಇಲಾಖೆ ಜವಾಬ್ದಾರಿ, ಅದನ್ನು ಶಿಕ್ಷಕರು ಮಾಡಬೇಕು. ಈಗಾಗಲೇ ಕೊರೊನಾ ಹಿನ್ನೆಲೆ ಯಲ್ಲಿ ಅನೇಕ ಕೆಲಸಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ವಹಿಸಲಾಗಿದೆ. ಈಗ ಹೆಚ್ಚುವರಿಯಾಗಿ ಸಮೀಕ್ಷೆ ಕಾರ್ಯ ನೀಡ ಲಾಗಿದೆ. ಇದು ಸರಿಯಲ್ಲ ಎಂದು ಅಂಗನವಾಡಿ ಕಾರ್ಯಕರ್ತೆಯರು ಹೇಳುತ್ತಿದ್ದಾರೆ.  ನಿರ್ದೇಶನಗಳ ಗೊಂದಲ 2019ರ ಡಿಸೆಂಬರ್‌ನಲ್ಲಿ ಸಮೀಕ್ಷೆ ನಡೆಸುವುದಾಗಿ ಸರಕಾರ ಹೈಕೋರ್ಟ್‌ಗೆ ಭರವಸೆ ಕೊಟ್ಟಿದ್ದರೂ ಕೊರೊನಾದಿಂದಾಗಿ ನನೆಗುದಿಗೆ ಬಿದ್ದಿತ್ತು. 0-18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸುವುದು ಸ್ಥಳೀಯ ಸಂಸ್ಥೆ (ಗ್ರಾ.ಪಂ)ಗಳ ಜವಾಬ್ದಾರಿ ಎಂದು ಹೇಳಿದ್ದ ಹೈಕೋರ್ಟ್‌, ಸಮೀಕ್ಷೆಗೆ ಶಿಕ್ಷಕರನ್ನು ಬಳಸಬಾರದು ಎಂದು 2019ರ ಡಿ. 18ರ ಆದೇಶದಲ್ಲಿ ಹೇಳಿತ್ತು. ಆದರೆ ಯೋಜಿತ ಕಾರ್ಯಕ್ರಮಗಳಿಗಲ್ಲದೆ ಬೇರೆ ಕೆಲಸಗಳಿಗೆ ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಬಾರದು ಎಂದು ನ್ಯಾ| ಎನ್‌.ಕೆ. ಪಾಟೀಲ್‌ ಸಮಿತಿ 2013ರಲ್ಲಿ ಹೇಳಿತ್ತು. ಕೇಂದ್ರ ಮತ್ತು ರಾಜ್ಯ ಸರಕಾರಗಳೂ ಇದೇ ನಿಲುವು ಹೊಂದಿವೆ. ಈ ಇಬ್ಬಗೆಯ ಆದೇಶ, ನಿಲುವು ಕೂಡ ಗೊಂದಲಕ್ಕೆ ಕಾರಣವಾಗಿವೆ.  ಹೈಕೋರ್ಟ್‌ ಆದೇಶದಂತೆ 0-18 ವರ್ಷದೊಳಗಿನ ಮಕ್ಕಳನ್ನು ಗುರುತಿಸಲು ಮನೆ-ಮನೆ ಸಮೀಕ್ಷೆ ಕಾರ್ಯ ನಡೆಸಲಾಗು ತ್ತಿದೆ. ಅಂಗನವಾಡಿ ಕಾರ್ಯಕರ್ತೆಯರ ದೂರುಗಳು ನಮ್ಮ ಗಮನಕ್ಕೆ ಬಂದಿಲ್ಲ. -ಎಲ್‌.ಕೆ. ಅತೀಕ್‌, ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ  ಇಲಾಖೆ  ಅಂಗನವಾಡಿ ಕಾರ್ಯಕರ್ತೆಯರನ್ನು ಸಮೀಕ್ಷೆಗೆ ಗ್ರಾಮೀಣಾಭಿ ವೃದ್ಧಿ ಇಲಾಖೆ ನಿಯೋಜಿಸಿರುವುದು ಗಮನಕ್ಕೆ ಬಂದಿಲ್ಲ.  – ಪೆದ್ದಪ್ಪಯ್ಯ, ಆಯುಕ್ತರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ   ಸಮೀಕ್ಷೆಯಿಂದ ನಮ್ಮನ್ನು ಕೈಬಿಡದಿದ್ದರೆ ಕಾನೂನು ಹೋರಾಟದ ಜತೆಗೆ ಬೀದಿ ಹೋರಾಟ ನಡೆಸಲಾಗುವುದು. -ಎಂ. ಜಯಮ್ಮ , ಪ್ರ. ಕಾರ್ಯದರ್ಶಿ,  ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಒಕ್ಕೂಟ   ರಫೀಕ್‌ ಅಹ್ಮದ್‌

ಸಾಂದರ್ಭಿಕ ಚಿತ್ರ

ಬೆಂಗಳೂರು: ಹಳ್ಳಿಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು “ಮನೆ-ಮನೆ’ ಸಮೀಕ್ಷೆ ನಡೆಸುವ ವಿಚಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ನಡುವೆ “ಮನೆ ಜಗಳ’ ನಡೆಯುತ್ತಿದೆ.

ಇಲಾಖೆಗಳ ನಡುವಿನ ಜಗಳಕ್ಕೆ ಕಾರಣ ಸಮೀಕ್ಷೆಗೆ ಅಂಗನ ವಾಡಿ ಕಾರ್ಯಕರ್ತೆಯರನ್ನು ನಿಯೋಜಿ ಸಿರು ವುದು. ಹೈಕೋರ್ಟ್‌ ಆದೇಶ ದಂತೆ ಮನೆ- ಮನೆ ಸಮೀಕ್ಷೆ ನಡೆಸಬೇಕಾಗಿದೆ ಎಂದು ಗ್ರಾಮೀಣಾಭಿ ವೃದ್ಧಿ ಇಲಾಖೆ ಹೇಳಿ ದರೆ, ನಮ್ಮ ಇಲಾಖೆಯ ಅಧೀನದಲ್ಲಿ ಬರುವ ಅಂಗನ ವಾಡಿ ಕಾರ್ಯಕರ್ತೆಯರನ್ನು ಈ ಸಮೀಕ್ಷೆಗೆ ನಿಯೋಜಿಸಿರುವುದು ನಮ್ಮ ಗಮನಕ್ಕೇ ಬಂದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೇಳುತ್ತಿದೆ. ಇದರ ನಡುವೆ ನಮ್ಮದಲ್ಲದ ಕೆಲಸಕ್ಕೆ ನಮ್ಮನ್ನು ಯಾಕೆ ನಿಯೋಜಿಸಿದ್ದೀರಿ ಎಂದು ಕಾರ್ಯಕರ್ತೆಯರು ಪ್ರಶ್ನಿಸತೊಡಗಿದ್ದಾರೆ.

ಇಲಾಖೆಗಳ ನಡುವಿನ ಗೊಂದಲ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಿಂದೇಟು ಹಾಕುತ್ತಿರುವುದರ ಪರಿಣಾಮ ಮಕ್ಕಳನ್ನು ಗುರುತಿಸುವ ಸಮೀಕ್ಷೆಗೆ ಗರ ಬಡಿದಂತಾಗಿದೆ. ಡಿ. 15ರಿಂದ ಮನೆ-ಮನೆ ಸಮೀಕ್ಷೆ ಆರಂಭಗೊಂಡು 2021ರ ಜ. 15ಕ್ಕೆ ಪೂರ್ಣಗೊಳ್ಳಬೇಕಿತ್ತು. ಆದರೆ ಇನ್ನೂ ಆರಂಭವಾಗಿಲ್ಲ.

ಶಿಕ್ಷಕರ ಕೆಲಸ ನಮ್ಮ ಹೆಗಲಿಗೇಕೆ?
ಮಕ್ಕಳನ್ನು ಮರಳಿ ಶಾಲೆಗೆ ಕರೆತರುವುದು ಶಿಕ್ಷಣ ಇಲಾಖೆ ಜವಾಬ್ದಾರಿ, ಅದನ್ನು ಶಿಕ್ಷಕರು ಮಾಡಬೇಕು. ಈಗಾಗಲೇ ಕೊರೊನಾ ಹಿನ್ನೆಲೆ ಯಲ್ಲಿ ಅನೇಕ ಕೆಲಸಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ವಹಿಸಲಾಗಿದೆ. ಈಗ ಹೆಚ್ಚುವರಿಯಾಗಿ ಸಮೀಕ್ಷೆ ಕಾರ್ಯ ನೀಡ ಲಾಗಿದೆ. ಇದು ಸರಿಯಲ್ಲ ಎಂದು ಅಂಗನವಾಡಿ ಕಾರ್ಯಕರ್ತೆಯರು ಹೇಳುತ್ತಿದ್ದಾರೆ.

ನಿರ್ದೇಶನಗಳ ಗೊಂದಲ
2019ರ ಡಿಸೆಂಬರ್‌ನಲ್ಲಿ ಸಮೀಕ್ಷೆ ನಡೆಸುವುದಾಗಿ ಸರಕಾರ ಹೈಕೋರ್ಟ್‌ಗೆ ಭರವಸೆ ಕೊಟ್ಟಿದ್ದರೂ ಕೊರೊನಾದಿಂದಾಗಿ ನನೆಗುದಿಗೆ ಬಿದ್ದಿತ್ತು. 0-18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸುವುದು ಸ್ಥಳೀಯ ಸಂಸ್ಥೆ (ಗ್ರಾ.ಪಂ)ಗಳ ಜವಾಬ್ದಾರಿ ಎಂದು ಹೇಳಿದ್ದ ಹೈಕೋರ್ಟ್‌, ಸಮೀಕ್ಷೆಗೆ ಶಿಕ್ಷಕರನ್ನು ಬಳಸಬಾರದು ಎಂದು 2019ರ ಡಿ. 18ರ ಆದೇಶದಲ್ಲಿ ಹೇಳಿತ್ತು. ಆದರೆ ಯೋಜಿತ ಕಾರ್ಯಕ್ರಮಗಳಿಗಲ್ಲದೆ ಬೇರೆ ಕೆಲಸಗಳಿಗೆ ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಬಾರದು ಎಂದು ನ್ಯಾ| ಎನ್‌.ಕೆ. ಪಾಟೀಲ್‌ ಸಮಿತಿ 2013ರಲ್ಲಿ ಹೇಳಿತ್ತು. ಕೇಂದ್ರ ಮತ್ತು ರಾಜ್ಯ ಸರಕಾರಗಳೂ ಇದೇ ನಿಲುವು ಹೊಂದಿವೆ. ಈ ಇಬ್ಬಗೆಯ ಆದೇಶ, ನಿಲುವು ಕೂಡ ಗೊಂದಲಕ್ಕೆ ಕಾರಣವಾಗಿವೆ.

ಹೈಕೋರ್ಟ್‌ ಆದೇಶದಂತೆ 0-18 ವರ್ಷದೊಳಗಿನ ಮಕ್ಕಳನ್ನು ಗುರುತಿಸಲು ಮನೆ-ಮನೆ ಸಮೀಕ್ಷೆ ಕಾರ್ಯ ನಡೆಸಲಾಗು ತ್ತಿದೆ. ಅಂಗನವಾಡಿ ಕಾರ್ಯಕರ್ತೆಯರ ದೂರುಗಳು ನಮ್ಮ ಗಮನಕ್ಕೆ ಬಂದಿಲ್ಲ.
-ಎಲ್‌.ಕೆ. ಅತೀಕ್‌, ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಇಲಾಖೆ

ಅಂಗನವಾಡಿ ಕಾರ್ಯಕರ್ತೆಯರನ್ನು ಸಮೀಕ್ಷೆಗೆ ಗ್ರಾಮೀಣಾಭಿ ವೃದ್ಧಿ ಇಲಾಖೆ ನಿಯೋಜಿಸಿರುವುದು ಗಮನಕ್ಕೆ ಬಂದಿಲ್ಲ.
– ಪೆದ್ದಪ್ಪಯ್ಯ, ಆಯುಕ್ತರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಸಮೀಕ್ಷೆಯಿಂದ ನಮ್ಮನ್ನು ಕೈಬಿಡದಿದ್ದರೆ ಕಾನೂನು ಹೋರಾಟದ ಜತೆಗೆ ಬೀದಿ ಹೋರಾಟ ನಡೆಸಲಾಗುವುದು.
-ಎಂ. ಜಯಮ್ಮ , ಪ್ರ. ಕಾರ್ಯದರ್ಶಿ,  ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಒಕ್ಕೂಟ

 ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.