ಚರ್ಚೆಗೆ ಗ್ರಾಸವಾದ ಮಧ್ಯರಾತ್ರಿ ಬಿಜೆಪಿ ಕಾರ್ಯಕರ್ತನ ಮನೆ ತಪಾಸಣೆ
Team Udayavani, Nov 18, 2017, 9:51 AM IST
ವಿಧಾನಸಭೆ: ಚಿಕ್ಕಮಗಳೂರಿನಲ್ಲಿ ರಾತ್ರಿ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರ ಮನೆಗೆ ಹೋಗಿ ತಪಾಸಣೆ ನಡೆಸುತ್ತಿರುವ ವಿಚಾರ ವಿಧಾನಸಭೆಯಲ್ಲಿ ಸ್ವಲ್ಪ ಹೊತ್ತು ಬಿಸಿಯೇರಿದ ಚರ್ಚೆಗೆ ಕಾರಣವಾಯಿತು.
ಶೂನ್ಯ ವೇಳೆಯಲ್ಲಿ ಶುಕ್ರವಾರ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಸಿ.ಟಿ.ರವಿ, ಚಿಕ್ಕಮಗಳೂರಿನಲ್ಲಿ ಗುರುವಾರ ರಾತ್ರಿ ಪೊಲೀಸರು ಬಿಜೆಪಿ ಕಾರ್ಯಕರ್ತರ ಮನೆಗೆ ಹೋಗಿ ಎಬ್ಬಿಸಿ ಅವರ ಫೋಟೋ ತೆಗೆಸಿಕೊಂಡು ಬಂದಿದ್ದಾರೆ. ಅವರೇನು ಡಕಾಯಿತರೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಗೃಹ ಸಚಿವ ರಾಮಲಿಂಗಾರೆಡ್ಡಿ, ಈ ಘಟನೆಗೆ ಕಾರಣ ಗೊತ್ತಿಲ್ಲ. ಅಧಿಕಾರಿಗಳ ಜತೆ ಮಾತನಾಡಿ ಸೋಮವಾರ ಮಾಹಿತಿ ನೀಡುತ್ತೇನೆ. ಆದರೆ, ದತ್ತಮಾಲಾ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು
ಕೆಲವೊಂದು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಇದರಿಂದ ಆಕ್ರೋಶಗೊಂಡ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಕೆ.ಜಿ. ಬೋಪಯ್ಯ, “ಹೇಳ್ಳೋರು ಕೇಳ್ಳೋರು ಇಲ್ಲವೇ? ಮಧ್ಯ ರಾತ್ರಿ ಮನೆಗೆ ನುಗ್ಗಿ ಫೋಟೋ ತೆಗೆಸಿಕೊಳ್ಳುವುದೆಂದರೆ ಏನರ್ಥ ‘ ಎಂದು ಕಿಡಿಕಿಡಿಯಾದರು. ಅಷ್ಟರಲ್ಲಿ ಸಚಿವರ ನೆರವಿಗೆ ಬಂದ ಸಿಎಂ ಸಿದ್ದರಾಮಯ್ಯ, ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮ ಕೈಗೊಳ್ಳ ಬೇಕು ಎಂಬುದು ಸಚಿವರ ಮಾತಿನ ಅರ್ಥ. ಪ್ರಕರಣದಲ್ಲಿ ಲೋಪ ಆಗಿದ್ದರೆ ಕ್ರಮ ಕೈಗೊಳ್ಳಲಾಗುವುದು. ಎಂದರು.
ನನ್ನ ಏಳೂವರೆ ವರ್ಷದ ಸಭಾಪತಿ ಅವಧಿಯಲ್ಲಿ ಸದನದಲ್ಲಿ ಪ್ರಶ್ನೋತ್ತರ ಅವಧಿ ಸುಮಾರು ಎರಡೂ ಮುಕ್ಕಾಲು ತಾಸು
ಸುದೀರ್ಘವಾಗಿ ನಡೆದಿರುವುದು ದಾಖಲೆ. ಸದಸ್ಯರ ಪ್ರಶ್ನೆ, ಭಾವನೆಗಳ ವ್ಯಕ್ತಪಡಿಸಲು ಸಮಯ ಸಾಲದಾಗುತ್ತಿದ್ದು, ಸರ್ಕಾರ ಸದನ ನಡೆಸುವ ದಿನಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ಅವಶ್ಯಕ.
●ಡಿ.ಎಚ್.ಶಂಕರಮೂರ್ತಿ, ಸಭಾಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.