High Court; ಜೈಲಿನಲ್ಲಿ ಮನೆ ಊಟ: ಇಂದು ದರ್ಶನ್ ಅರ್ಜಿ ವಿಚಾರಣೆ
Team Udayavani, Jul 31, 2024, 6:45 AM IST
ಬೆಂಗಳೂರು: ತಮಗೆ ಮನೆ ಊಟ ನಿರಾಕರಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಹಾಗೂ ಮನೆಯಿಂದ ಊಟ, ಬಟ್ಟೆ ಮತ್ತು ಹಾಸಿಗೆ ತರಿಸಿಕೊಳ್ಳಲು ಅನುಮತಿ ನೀಡಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ಸೂಚಿಸುವಂತೆ ಕೋರಿ ನಟ ದರ್ಶನ್ ಪರ ವಕೀಲರು ಹೈಕೋರ್ಟ್ಗೆ ಮಂಗಳವಾರ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ.
ಈ ವಿಚಾರವಾಗಿ ದರ್ಶನ್ ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರು ಮತ್ತು ಕಾಮಾಕ್ಷಿಪಾಳ್ಯದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಈ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕ ಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ನಿಗದಿಯಾಗಿದೆ.
ಜೈಲು ಊಟ ಸೇರುತ್ತಿಲ್ಲ. ಆದ್ದರಿಂದ ಮನೆ ಊಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ದರ್ಶನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಮೊದಲು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ
ಮನವಿ ಸಲ್ಲಿಸಿಕೊಳ್ಳಿ ಎಂದು ಹೈಕೋರ್ಟ್ ಹೇಳಿತ್ತು. ಮ್ಯಾಜಿಸ್ಟ್ರೇಟ್ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು. ಹೊಸ ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.