ಪೊಲೀಸರ ಮೇಲಿನ ಹಲ್ಲೆ ಘಟನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಖಂಡನೆ
ಪೊಲೀಸ
Team Udayavani, Dec 7, 2021, 6:54 PM IST
ಬೆಂಗಳೂರು: ಬೆಂಗಳೂರಿನ ಯಲಹಂಕದ ನ್ಯೂ ಟೌನ್ ಪ್ರದೇಶದಲ್ಲಿ, ಸೋಮವಾರ ನೈಟ್ ರೌಂಡ್ಸ್ ಕರ್ತವ್ಯದ ಮೇಲಿದ್ದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಖಂಡಿಸಿದ್ದಾರೆ.
ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿ, ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಿರ್ದೇಶನ ನೀಡಿದ್ದಾರೆ.
ಸಚಿವರು ಇಂದು, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್, ಅವರನ್ನು ಸಂಪರ್ಕಿಸಿ, ವಿಷಯವನ್ನು ಪ್ರಸ್ತಾಪಿಸಿ “ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಘಟನೆಯ ದೃಶ್ಯಾವಳಿಗಳನ್ನು ನೋಡಿದ್ದೇನೆ, ಸಬ್ ಇನ್ಸ್ಪೆಕ್ಟರ್ ಹಾಗೂ ಇಬ್ಬರು ಕಾನ್ಸ್ಟೇಬಲ್ ಗಳ ಮೇಲೆ ಕೆಲವು ಪುಂಡರಿಂದ ನಡೆದ ಹಲ್ಲೆ ಘಟನೆ, ಖಂಡನೀಯ ” ಎಂದು ತಿಳಿಸಿದರು.
“ಈ ರೀತಿಯಾಗಿ ಕಾನೂನನ್ನು ಕೈಗೆ ತೆಗೆದುಕೊಂಡು ಜನರಿಗೆ ರಕ್ಷಣೆ ನೀಡುವ ಪೊಲೀಸರ ಮೇಲೆಯೇ ಹಲ್ಲೆ ನಡೆದ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಳ್ಳಬೇಕು” ಎಂದೂ ಸಚಿವರು ಸೂಚಿಸಿದರು.
ಹಲ್ಲೆಗೊಳಗಾದ ಪೊಲೀಸರಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತಯೂ ಸಚಿವರು, ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.