ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಆರಗ ಜ್ಞಾನೇಂದ್ರ ದಿಢೀರ್ ಭೇಟಿ
Team Udayavani, Jul 12, 2022, 11:30 AM IST
ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ಕಾರಾಗೃಹಕ್ಕೆ ಧಿಡೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ದಿಢೀರ್ ಭೇಟಿ ನೀಡಿರುವ ಸಚಿವರು, ಕೆಲವು ಹೈ ಸೆಕ್ಯೂರಿಟಿ ಬ್ಯಾರಕ್ ಗಳ ಪರಿಶೀಲನೆ ಹಾಗೂ ಮೊಬೈಲ್ ಅಥವಾ ಇನ್ನಿತರ ನಿಷೇಧಿತ ವಸ್ತುಗಳನನ್ನು ಜೈಲಿನೊಳಗೆ ಸಾಗಿಸಲಾಗಿದೆಯೇ ಎಂಬುದರ ಬಗ್ಗೆ ವಿಚಾರಣೆ ಮಾಡುವುದಲ್ಲದೆ, ಸ್ವತಃ ತಪಾಸಣೆ ನಡೆಸುತ್ತಿದ್ದಾರೆ.
ಇದೇ ವೇಳೆ ಕಾರಾಗೃಹದಲ್ಲಿ ಮಹಿಳಾ ಕೈದಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಚಿವರು ಕೈದಿಗಳ ಜತೆಗೆ ಸಂವಾದ ನಡೆಸಲಿದ್ದಾರೆ.
ಇದನ್ನೂ ಓದಿ:ನೆರೆಹಾನಿ: ಇಡೀ ರಾಜ್ಯ ಸರ್ಕಾರ ರಸ್ತೆಗಿಳಿದು ಕೆಲಸ ಮಾಡುತ್ತಿದೆ ಎಂದ ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.