ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಉನ್ನತೀಕರಿಸಲು ಹೆಚ್ಚಿನ ಆದ್ಯತೆ : ಆರಗ ಜ್ಞಾನೇಂದ್ರ
Team Udayavani, Aug 25, 2021, 2:21 PM IST
ಬೆಂಗಳೂರು : ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಉನ್ನತೀಕರಿಸಲು ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಕೋರಮಂಗಲದ ಕೆಎಸ್‍ಆರ್ ಪಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಪಬ್ಲಿಕ್ ಶಾಲೆಯ ಶಿಶು ವಿಹಾರ, ಆಡಳಿತ ಕಚೇರಿಯ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದನ್ನೂ ಓದಿ : ರಾಜ್ಯದ ಹಿತಕ್ಕೆ ಮಾರಕವಾದ ಸಮರ್ಥ ನಾಯಕತ್ವ ಕೊರತೆ : ಎಚ್.ಡಿ.ಕುಮಾರಸ್ವಾಮಿ
ಸಂಚಾರಿ ಫೋರೆನ್ಸಿಕ್ ಪ್ರಯೋಗಾಲಯಗಳಿಗೂ ಕೂಡ ಇಂದು ಚಾಲನೆ ನೀಡಲಾಗಿದೆ. ಆಡುಗೋಡಿಯಲ್ಲಿ ಪೊಲೀಸ್ ಇಲಾಖೆಯ ನೂರು ಎಕರೆ ಜಾಗವಿದ್ದು, ಅಲ್ಲಿ ಮತ್ತೊಂದು ಪೊಲೀಸ್ ಪಬ್ಲಿಕ್ ಶಾಲೆ ಪ್ರಾರಂಭಿಸುವ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು.
ಪೊಲೀಸರ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪೊಲೀಸ್ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ನಾಗರಿಕರು ನೆಮ್ಮದಿಯ ಬದುಕು ನಡೆಸಲು ಹಗಲಿರುಳು ಪೊಲೀಸರು ಎಚ್ಚರವಾಗಿದ್ದು, ರಕ್ಷಣೆ ಮಾಡಬೇಕಾಗಿದೆ ಎಂದಿದ್ದಾರೆ.
ರಾಷ್ಟ್ರದ ಗಡಿ ಕಾಯುವ ಸೈನಿಕರಿಗೆ ತಮ್ಮ ಶತ್ರುಗಳ ಬಗ್ಗೆ ಅರಿವಿರುತ್ತದೆ. ಆದರೆ, ನಾಡಿನಲ್ಲಿ ಸೇವೆ ಸಲ್ಲಿಸುವ ಪೊಲೀಸರಿಗೆ ಅಂಥ ಮಾಹಿತಿ ಇರುವುದಿಲ್ಲ. ಒಂದು ರೀತಿಯಲ್ಲಿ ಸವಾಲಿನ ಕೆಲಸವನ್ನು ಪೊಲೀಸರು ನಿಭಾಯಿಸಬೇಕಾಗಿದೆ. ಪೊಲೀಸರು ಮತ್ತು ಅವರ ಕುಟುಂಬದವರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ರಾಜ್ಯದಲ್ಲಿ ಮಾದಕ ವಸ್ತು ಮುಲೋತ್ಪಾಟನೆ ಮಾಡಲು ನಿರ್ಧಾರ ಮಾಡಲಾಗಿದೆ. ಯುವಕರು ಮಾದಕ ವಸ್ತುಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್, ರಾಜ್ಯ ಅಪರ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್‍ಕುಮಾರ್, ಡಾ.ಎ.ಎಸ್.ಎನ್.ಮೂರ್ತಿ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.
ಇದನ್ನೂ ಓದಿ : ‘ನಾನು ತಪ್ಪು ಮಾಡಲ್ಲ, ತಲೆಯೂ ಬಾಗಿಸೋಲ್ಲ’: DSS ಅಧ್ಯಕ್ಷ ರಘು ವಿರುದ್ಧ ಜಗ್ಗೇಶ್ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.