ಪೊಲೀಸರಿಗೆ 20 ಸಾವಿರ ವಸತಿಗೃಹ ನಿರ್ಮಾಣ: ಗೃಹ ಸಚಿವ
Team Udayavani, Mar 23, 2022, 6:45 AM IST
ಬೆಂಗಳೂರು: ರಾಜ್ಯದಲ್ಲಿ ಪೊಲೀಸರಿಗೆ ಗುಣಮಟ್ಟದ ಮತ್ತು ಸುಸಜ್ಜಿತ ವಸತಿ ಸೌಲಭ್ಯ ಕಲ್ಪಿಸಲು 20 ಸಾವಿರ ವಸತಿಗೃಹಗಳನ್ನು ನಿರ್ಮಿಸಲಾಗುತ್ತಿದೆ.
ಅಲ್ಲದೇ 200 ಕೋಟಿ ರೂ. ವೆಚ್ಚದಲ್ಲಿ ಈ ವರ್ಷ 100 ಪೊಲೀಸ್ ಠಾಣೆಗಳನ್ನು ಕಟ್ಟಲಾಗುತ್ತಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ಜಾಗದ ವಿವಾದ ಅಂತ್ಯಕ್ಕೆ ಬಂದಿದೆ. ಪೊಲೀಸರ ಭತ್ತೆ ಹಾಗೂ ಗಳಿಕೆ ರಜೆಗಳಲ್ಲಿನ ವ್ಯತ್ಯಾಸದ ಬಗ್ಗೆ ಸಹಾನೂಭೂತಿ ಇದೆ. ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಮಾನವೀಯ ನೆಲೆ-ಪರಿಗಣನೆ
ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿ ಮತ್ತು ಡಿ ದರ್ಜೆ ನೌಕರರ ವರ್ಗಾವಣೆ ನಿಯಮಗಳು ಪೊಲೀಸ್ ಸೇವೆಗೆ ಸೇರಿಕೊಳ್ಳುವ ಮಾಜಿ ಸೈನಿಕರಿಗೂ ಅನ್ವಯವಾಗುತ್ತವೆ. ಜೆಡಿಎಸ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ವಿಷಯ ಪ್ರಸ್ತಾವಿಸಿ, ಹತ್ತಾರು ವರ್ಷಗಳ ಕಾಲ ಮನೆ, ಕುಟುಂಬದಿಂದ ದೂರ ಇದ್ದು ದೇಶಕ್ಕೆ ಸೇವೆ ಸಲ್ಲಿಸಿ ತಾಯ್ನಾಡಿಗೆ ಬಂದು ಪೊಲೀಸ್ ಸೇವೆಗೆ ಸೇರಿಕೊಳ್ಳುವ ನಿವೃತ್ತ ಸೈನಿಕರಿಗೆ ವರ್ಗಾವಣೆ ಅವಧಿಯನ್ನು 7 ವರ್ಷ ಇದ್ದದ್ದನ್ನು ಸಡಿಲಗೊಳಿಸಿ ಅವರ ತವರು ಜಿಲ್ಲೆಯಲ್ಲಿ ಕೆಲಸ ಮಾಡಲು ಅನುಕೂಲ ಮಾಡಿಕೊಡಬೇಕು. ಕಾನೂನು-ನಿಯಮಗಳಿಗಿಂತ ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ಪರಿಗಣಿಸಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ:ನಾವೂ ಹಿಂದೂಗಳೇ, ಭಗವದ್ಗೀತೆ ಬಗ್ಗೆ ಹೊಟ್ಟೆ ಉರಿ ಇಲ್ಲ: ಡಿಕೆಶಿ
ವಿನಾಯಿತಿ ನೀಡಲಾಗುತ್ತದೆ
ಇದಕ್ಕೆ ಉತ್ತರಿಸಿದ ಗೃಹ ಸಚಿವರು, ಸಿ ಮತ್ತು ಡಿ ದರ್ಜೆ ನೌಕರರ ವರ್ಗಾವಣೆಗೆ ನೇಮಕಾತಿ ಹೊಂದಿದ ದಿನಾಂಕದಿಂದ ಕನಿಷ್ಟ 7 ವರ್ಷಗಳ ಸೇವಾವಧಿ ನಿಗದಿಗೊಳಿಸಲಾಗಿರುತ್ತದೆ. ಆದರೆ, ಪತಿ-ಪತ್ನಿ ಪ್ರಕರಣ, ಎರಡು ವರ್ಷಗಳಲ್ಲಿ ವಯೋನಿವೃತ್ತಿ ಹೊಂದುವ ಪ್ರಕರಣಗಳಲ್ಲಿ 7 ವರ್ಷದಿಂದ ವಿನಾಯಿತಿ ನೀಡಲಾಗಿರುತ್ತದೆ. ಈ ನಿಯಮವು ಪೊಲೀಸ್ ಸೇವೆಗೆ ಸೇರುವ ಮಾಜಿ ಸೈನಿಕರಿಗೂ ಅನ್ವಯವಾಗುತ್ತದೆ ಎಂದರು.
ಜಿಲ್ಲಾಮಟ್ಟದಲ್ಲೇ ನೇಮಕ
ಪೊಲೀಸ್ ನೇಮಕಾತಿಯನ್ನು ಜಿಲ್ಲಾ, ವಲಯ ಮತ್ತು ಕಮಿಷನರೇಟ್ ಮಟ್ಟದಲ್ಲಿ ನಡೆಸಲಾಗುತ್ತದೆ. ಮಾಜಿ ಸೈನಿಕರು ಸಹ ತಮ್ಮ ಸ್ವಂತ ಜಿಲ್ಲೆಗಳಿಗೆ ಅನುಕೂಲವಾಗುವಂತೆ ಅರ್ಜಿ ಸಲ್ಲಿಸಬಹುದು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.