ಕಾಂಗ್ರೆಸ್ ನವರು ಮೊದಲಿನಿಂದ ಓಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡೇ ಬಂದಿದ್ದಾರೆ: ಗೃಹ ಸಚಿವ
Team Udayavani, Apr 5, 2022, 11:39 AM IST
ವಿಧಾನ ಸೌಧ: ಎಲ್ಲವನ್ನೂ ಕೂಡ ನಿಯಮದ ಅಡಿಯಲ್ಲೇ ಮಾಡಬೇಕಾಗುತ್ತದೆ. ಒಂದು ಬಸ್ ಓಡಿಸುವುದಕ್ಕೂ ಕೂಡ ಒಂದು ಡೆಸಿಬಲ್ ಲಿಮಿಟ್ ಅಂತ ಇರುತ್ತದೆ. ಸುಪ್ರಿಂ ಕೋರ್ಟ್ ಆದೇಶ ಪ್ರಕಾರವೇ ನಡೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಸ್ವಾತಂತ್ರ್ಯ ಬಂದಾಗಿನಿಂದ ಓಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡೇ ಬಂದಿದ್ದಾರೆ. ಓಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡೇ ಸಿಂಹಾಸನದ ಮೇಲೆ ಕೂತಿದ್ದಾರೆ. ಹಿಜಾಬ್, ಹಲಾಲ್ ವಿಚಾರಗಳಲ್ಲಿ ಕಾಂಗ್ರೆಸ್ ತನ್ನ ನಿಲುವು ಏನು ಅನ್ನುವುದನ್ನು ಸ್ಪಷ್ಟವಾಗಿ ಹೇಳಬೇಕಲ್ಲ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ ಕಸರತ್ತು: ದೆಹಲಿಗೆ ಸಿಎಂ ಪ್ರಯಾಣ
ಡಿಕೆಶಿವಕುಮಾರ್ ಈ ಬಗ್ಗೆ ಮಾತನಾಡಬೇಡಿ ಅಂತ ಹೇಳುತ್ತಾರೆ ಅಂದ್ರೆ ಏನರ್ಥ? ಕಾಂಗ್ರೆಸ್ ಗೆ ಓಟ್ ಬ್ಯಾಂಕ್ ಸ್ವಲ್ಪ ಅಲುಗಾಡಿದರೂ ಒತ್ತಡ ಆಗಿಬಿಡುತ್ತದೆ ಎಂದರು.
ಸ್ಥಳೀಯ ಪೊಲೀಸರು ಎಲ್ಲಿ ಸುಪ್ರಿಂ ಕೋರ್ಟ್ ಆದೇಶ ಉಲ್ಲಂಘನೆ ಆಗಿದೆ ಅಂಥ ನೋಡಿಕೊಳ್ಳುತ್ತಾರೆ. ಲಾ ಆ್ಯಂಡ್ ಆರ್ಡರ್ ಉಲ್ಲಂಘನೆ ಆಗದಂತೆ ನೋಡಿಕೊಳ್ಳುತ್ತೇವೆ. ಸಭೆ ನಡೆಸುವುದು ನೊಟೀಸ್ ನೀಡುವುದು ಎಲ್ಲವೂ ಸ್ಥಳೀಯ ಪೊಲೀಸರು ಮಾಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.