ಅಕ್ರಮ ವಲಸಿಗರಿಗೆ ದಾಖಲೆ ಕೊಡಿಸುವ ಜಾಲವೇ ಇದೆ: ಗೃಹ ಸಚಿವ ಆರಗ ಜ್ಞಾನೇಂದ್ರ
Team Udayavani, Nov 26, 2021, 2:20 PM IST
ಬೆಂಗಳೂರು: ಸಿಸಿಬಿ ಪೊಲೀಸರು ಇವತ್ತು ಐದು ಜನ ಬಾಂಗ್ಲಾ ಅಕ್ರಮ ವಲಸಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ವಲಸಿಗರ ಬಗ್ಗೆ ಸರ್ಕಾರ ಎಚ್ಚರಿಕೆ ವಹಿಸಿದೆ. ಅಕ್ರಮ ವಲಸಿಗರ ಪಟ್ಟಿ ಮಾಡಲು ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡಲಾಗಿದೆ. ಅವರ ಪಟ್ಟಿ ಮಾಡಿ ಅವರನ್ನು ಡಿಟೆಂಷನ್ ಸೆಂಟರ್ ತಂದು ಹಾಕಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಅಕ್ರಮ ವಲಸಿಗರು ದೇಶದ ಭದ್ರತೆಗೆ ಅಪಾಯಕಾರಿ. ಅವರು ಹೇಗೆ ಬಂದಿದ್ದಾರೆ, ಯಾರು ಕಳೆದುಕೊಂಡು ಬಂದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಅಕ್ರಮ ವಲಸಿಗರು ಕಟ್ಟಡ ಕೆಲಸ ,ಕಾಫಿ ಎಸ್ಟೇಟ್ ಕೆಲಸಕ್ಕೆ ಬಂದಿದ್ದಾರೆ. ಅವರನ್ನು ಯಾರು ಕರೆದುಕೊಂಡು ಬರುತ್ತಾರೆ ಎನ್ನುವುದನ್ನು ಮೂಲಕ್ಕೆ ಕೈಹಾಕಿ ತನಿಖೆ ನಡೆಸುತ್ತೇವೆ. ಅವರನ್ನು ವಶಕ್ಕೆ ಪಡೆದು ಬಾಯಿ ಬಿಡಿಸುವ ಕೆಲಸ ಆಗಲಿದೆ ಎಂದರು.
ಇದನ್ನೂ ಓದಿ:ಟೆಂಡರ್ ಗಳಲ್ಲಿ ಪರ್ಸೆಂಟೇಜ್ ಜಾಸ್ತಿಯಾಗಿದ್ದು ಕಾಂಗ್ರೆಸ್ ಕಾಲದಲ್ಲಿ: ಸಿಎಂ
ಅಸ್ಸಾಂ ಭಾಗದಲ್ಲಿ ಅಕ್ರಮ ವಲಸಿಗರಿಗೆ ದಾಖಲೆ ಕೊಡಿಸುವ ಜಾಲವೇ ಇದೆ. ಕೇಂದ್ರಕ್ಕೆ ಹಾಗೂ ಆಯಾ ರಾಜ್ಯಕ್ಕೆ ಈ ಬಗ್ಗೆ ತಿಳಿಸಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.