ಚಾಮರಾಜನಗರ ಪ್ರಕರಣದ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ: ಸಚಿವ ಬಸವರಾಜ ಬೊಮ್ಮಾಯಿ
Team Udayavani, May 3, 2021, 2:06 PM IST
ಬೆಂಗಳೂರು: ಚಾಮರಾಜನಗರ ಆಸ್ಪತ್ರೆಯಲ್ಲಿ ರೋಗಿಗಳ ಸಾವಿನ ಪ್ರಕರಣ ಕುರಿತು ಸಮಗ್ರ ತನಿಖೆ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಸೋಮವಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಹಮ್ಮಿಕೊಂಡಿದ್ದ ರಾಸಾಯನಿಕ ಸಿಂಪರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದ ಹಿನ್ನೆಲೆಯಲ್ಲಿ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಇವರ ಸಾವಿಗೆ ನಿಜವಾಗಿಯೂ ಇದ್ದ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ. ಇದು ಅತ್ಯಂತ ದುಃಖಕರ ಸಂಗತಿ. ಈ ಘಟನೆ ಸಂಭವಿಸಬಾರದಾಗಿತ್ತು ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಇದನ್ನೂ ಓದಿ:ಆಮ್ಲಜನಕ ಸರಬರಾಜಿನಲ್ಲಿ ವ್ಯತ್ಯಯಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ: ಸುರೇಶ್ ಕುಮಾರ್
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ. ಪ್ರಕರಣದ ಕುರಿತು ಸತ್ಯಾಸತ್ಯತೆ ಏನು ಎಂಬುದನ್ನು ತಿಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಆಕ್ಸಿಜನ್ ಬೇಡಿಕೆ ಹೆಚ್ಚುತ್ತಿದೆ. ಆದರೂ ಕೂಡ ನಮ್ಮ ಇತಿಮಿತಿಯಲ್ಲಿ ಆಕ್ಸಿಜನ್ ಪೂರೈಕೆಯನ್ನು ಎಲ್ಲಾ ಆಸ್ಪತ್ರೆಗಳಿಗೂ ಮಾಡಲಾಗುತ್ತದೆ. ಆ ಮೂಲಕ ಪರಿಸ್ಥಿತಿಯನ್ನು ಸಾಧ್ಯವಾದಷ್ಟು ನಿಭಾಯಿಸಲಾಗುತ್ತಿದೆ ಎಂದು ಗೃಹ ಸಚಿವ ಬೊಮ್ಮಾಯಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.