ಖಾಸಗಿ ಆಸ್ಪತ್ರೆಗಳಲ್ಲಿನ ಶೇ. 50 ರಷ್ಟು ಹಾಸಿಗೆ ಸ್ವಾಧೀನಕ್ಕೆ ಕಾರ್ಯಾಚರಣೆ: ಬೊಮ್ಮಾಯಿ
ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಎಂಟು ತಂಡಗಳ ರಚನೆ - ಗೃಹ ಸಚಿವ ಬಸವರಾಜ ಬೊಮ್ಮಾಯಿ
Team Udayavani, Apr 22, 2021, 4:26 PM IST
ಬೆಂಗಳೂರು: ದಿನೇದಿನೇ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ಶೇ. 50ರಷ್ಟು ಹಾಸಿಗೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಂಟಿ ಕಾರ್ಯಾಚರಣೆ ಮಾಡುವಂತೆ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹಾಗೂ ಬೆಂಗಳೂರಿನ ಉಪ ಪೊಲೀಸ್ ಆಯುಕ್ತರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಈ ಕಟ್ಟುನಿಟ್ಟಿನ ಆದೇಶ ಮಾಡಿದರು.
ಇದನ್ನೂ ಓದಿ:ಮೇ 4ರವರೆಗೆ ರಾಜ್ಯದಲ್ಲಿ ಅಗತ್ಯ ಸೇವೆ ಬಿಟ್ಟು ಎಲ್ಲವೂ ಬಂದ್!
ಬೆಂಗಳೂರು ನಗರವನ್ನು 8 ವಲಯಗಳನ್ನಾಗಿ ವಿಂಗಡನೆ ಮಾಡಲಾಗಿದೆ. ಒಂದೊಂದು ವಲಯಕ್ಕೆ ಒಬ್ಬ ಉಪ ಪೊಲೀಸ್ ಆಯುಕ್ತ ಹಾಗೂ ಬಿಬಿಎಂಪಿ ಜಂಟಿ ಆಯುಕ್ತರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಮುಂದಿನ ಮೂರು ನಾಲ್ಕು ದಿನಗಳಲ್ಲಿ ತಮ್ಮ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಬೇಕು. ಆಸ್ಪತ್ರೆಯಲ್ಲಿರುವ ವಾಸ್ತವ ಸ್ಥಿತಿಯನ್ನು ತಿಳಿದುಕೊಳ್ಳಲು ತಪಾಸಣೆ ಮಾಡಬೇಕು. ಅಲ್ಲಿ ಖಾಲಿ ಇರುವ ಬೆಡ್ ಗಳ ಬಗ್ಗೆ ಮಾಹಿತಿ ಪಡೆಯಬೇಕು. ಪ್ರತಿಯೊಂದು ಆಸ್ಪತ್ರೆ ಸರ್ಕಾರಕ್ಕೆ ಶೇ. 50ರಷ್ಟು ಹಾಸಿಗೆಗಳನ್ನು ಬಿಟ್ಟುಕೊಡುವಂತೆ ನೋಡಿಕೊಳ್ಳಬೇಕು. ಇದುವರೆಗೆ ಖಾಸಗಿ ಆಸ್ಪತ್ರೆಗಳು 7000 ಬೆಡ್ ಗಳನ್ನು ಸರ್ಕಾರಕ್ಕೆ ನೀಡಿವೆ. ಆದರೆ ಇನ್ನೂ 4000 ಹಾಸಿಗೆಗಳನ್ನು ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಬೇಕಾಗಿದೆ. ಅದರಲ್ಲಿಯೂ ಆಕ್ಸಿಜನ್ ಇರುವ ಹಾಸಿಗೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಜಂಟಿ ಕಾರ್ಯಾಚರಣೆ ಮೂಲಕ ಆಕ್ಸಿಜನ್ ಇರುವ ಬೆಡ್ ಗಳನ್ನು ಪಡೆದುಕೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಬೊಮ್ಮಾಯಿ ತಾಕೀತು ಮಾಡಿದರು.
ಲಾಕ್ ಡೌನ್ ಮಾದರಿ ಬಿಗಿ ಕ್ರಮ: ಕಳೆದ ಬಾರಿಯ ಲಾಕ್ಡೌನ್ ಸಂದರ್ಭದಲ್ಲಿ ಕೈಗೊಳ್ಳಲಾಗಿದ್ದ ಬಿಗಿ ಕ್ರಮಗಳನ್ನು ನಾಳೆ ರಾತ್ರಿಯಿಂದ ಆರಂಭವಾಗಲಿರುವ ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿಯೂ ಜಾರಿಗೊಳಿಸಿ. ಮುಖ್ಯ ಮತ್ತು ಸಣ್ಣ ರಸ್ತೆಗಳಿಗೆ ಬ್ಯಾರಿಕೇಡ್ ಗಳನ್ನು ಅಳವಡಿಸಿ. ವಾಹನ ಸಂಚಾರ ನಿರ್ಬಂಧಿಸಿ. ಅನವಶ್ಯಕವಾಗಿ ಬೆಂಗಳೂರಿಗೆ ಬರುವವರನ್ನು ನಿರ್ಬಂಧಿಸಿ. ವಿನಾಕಾರಣ ತಿರುಗಾಡಲು ಜನರಿಗೆ ಅವಕಾಶ ನೀಡಬೇಡಿ. ಕಾನೂನು ಉಲ್ಲಂಘನೆ ಮಾಡುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ವಿನಾಕಾರಣ ಓಡಾಡುವ ಜನ ಬಳಸುವ ವಾಹನಗಳನ್ನು ಸೀಜ್ ಮಾಡಿ. ಒಳ್ಳೆ ಮಾತಿನಲ್ಲಿ ಕೇಳದಿದ್ದರೆ ಕಠಿಣ ಕ್ರಮ ಜರುಗಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಾರಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಮದುವೆ ಸಮಾರಂಭ ನಡೆಯುತ್ತಿವೆ. ಕಲ್ಯಾಣ ಮಂಟಪ ಹಾಗೂ ಸಭಾ ಮಂದಿರಗಳ ಮಾಲೀಕರ ಜೊತೆಗೆ ಮಾತನಾಡಿ. ಅವರಿಂದ ಕಾನೂನು ಉಲ್ಲಂಘನೆ ಆಗದಿರುವ ಕುರಿತು ಮುಚ್ಚಳಿಕೆಯನ್ನು ಪಡೆಯಿರಿ. ಕಾನೂನು ಉಲ್ಲಂಘನೆ ಮಾಡುವ ಛತ್ರ ಹಾಗೂ ಕಲ್ಯಾಣ ಮಂಟಪಗಳನ್ನು ಮುಲಾಜಿಲ್ಲದೆ ಬಂದ್ ಮಾಡಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸಚಿವ ಬೊಮ್ಮಾಯಿ ಕಟ್ಟುನಿಟ್ಟಿನ ಅಪ್ಪಣೆ ಮಾಡಿದರು.
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಪೊಲೀಸರ ಜವಾಬ್ದಾರಿ. ಹೀಗಾಗಿ ಪೊಲೀಸ್ ಸಿಬ್ಬಂದಿಯ ಸುರಕ್ಷತೆಗೆ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಪೊಲೀಸ್ ಠಾಣೆಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸುವ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ಪೊಲೀಸ್ ಸಿಬ್ಬಂದಿಗೆ ಒದಗಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.