ರಾಜ್ಯದಲ್ಲಿ ಸದ್ಯಕ್ಕೆ ಯಥಾಸ್ಥಿತಿ ಮುಂದುವರಿಯಲಿದೆ : ಗೃಹ ಸಚಿವ ಬಸವರಾಜ ಬೊಮ್ಮಾಯಿ
Team Udayavani, Apr 25, 2021, 2:17 PM IST
ಬೆಂಗಳೂರು: ಸದ್ಯಕ್ಕೆ ವೀಕೆಂಡ್ ಕರ್ಫ್ಯೂ ಮಾತ್ರ ಜಾರಿಯಲ್ಲಿರುತ್ತದೆ. ಅದನ್ನು ವಾರದ ದಿನಗಳಿಗೂ ವಿಸ್ತರಿಸುವ ಊಹಾಪೋಹಗಳ ಕುರಿತು ವ್ಯಾಖ್ಯಾನ ಮಾಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ಫ್ಯೂ ವಿಸ್ತರಣೆ ಬಗ್ಗೆ ಇದುವರೆಗೆ ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿಸಿದರು.
ವೀಕೆಂಡ್ ಕರ್ಫ್ಯೂ ರಾಜ್ಯಾದ್ಯಂತ ಯಶಸ್ವಿಯಾಗಿದೆ. ಜನ ಸಹಕರಿಸಿದ್ದಾರೆ. ಇದು ಕೋವಿಡ್ ನಿಯಂತ್ರಣಕ್ಕೂ ಸಹಕಾರಿಯಾಗಿದೆ. ಆದರೆ ವೀಕೆಂಡ್ ಕರ್ಫ್ಯೂ ವಿಸ್ತರಣೆ ಕುರಿತು ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆಯಾಗಿಲ್ಲ. ಶನಿವಾರ ಸಂಜೆ ಮುಖ್ಯಮಂತ್ರಿಗಳ ಜೊತೆ ನಡೆದ ಸಭೆಯಲ್ಲಿಯೂ ಈ ಕುರಿತು ಚರ್ಚೆ ಆಗಿಲ್ಲ. ಸದ್ಯಕ್ಕೆ ಯಥಾಸ್ಥಿತಿ ಮುಂದುವರಿಯಲಿದೆ ಎಂದು ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಇದನ್ನೂ ಓದಿ:ಬಿಎಸ್ ವೈ ಅವರೇ ಈ ಕೆಲಸಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು: ಸಿದ್ದರಾಮಯ್ಯ
ಕೇಂದ್ರ ಸರ್ಕಾರ ನಾವು ಕೇಳಿರುವುದಕ್ಕಿಂತಲೂ ಹೆಚ್ಚಿನ ಅಂದರೆ 800 ಟನ್ ಆಮ್ಲಜನಕವನ್ನು ನೀಡಿದೆ. ಇದು ಸದ್ಯದ ಪರಿಸ್ಥಿತಿಯಲ್ಲಿ ಆಮ್ಲಜನಕದ ಬೇಡಿಕೆ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ. ಬರುವ ದಿನಗಳಲ್ಲಿ ಎಲ್ಲರಿಗೂ ಆಕ್ಸಿಜನ್ ಸಿಗಲಿದೆ ಎಂದರು.
ಎಪ್ರಿಲ್ 30ರವರೆಗೆ ರಾಜ್ಯ ಸರ್ಕಾರದ ಬಳಿ 50000 ರೆಮ್‌ಡಿಸಿವಿರ್ ಔಷಧಿಯ ಸಂಗ್ರಹ ಇತ್ತು. ಕೇಂದ್ರ ಸರ್ಕಾರ 1.22 ಲಕ್ಷ ರೆಮ್ ಡಿಸಿವಿರ್ ಔಷಧವನ್ನು ಪೂರೈಸುವ ಭರವಸೆ ನೀಡಿದೆ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದರು.
ಇದನ್ನೂ ಓದಿ: ಮಹಿಳೆಯರು ಋತುಚಕ್ರದ ಐದು ದಿನಗಳ ಮೊದಲು ಮತ್ತು ನಂತರ ಕೋವಿಡ್ ಲಸಿಕೆ ಪಡೆಯಬಹುದೆ?
ಮೇ 1 ರನಂತರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಮೊದಲ ಡೋಸ್ ನೀಡಲಾಗುವುದು. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗುತ್ತದೆ. ಲಸಿಕೆಯ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.