3.79 ಲಕ್ಷ ವಲಸೆ ಕಾರ್ಮಿಕರು ತವರಿಗೆ
Team Udayavani, Jun 19, 2020, 6:33 AM IST
ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನೀತಿಯಂತೆ ಈವರೆಗೆ 267 ಶ್ರಮಿಕ್ ವಿಶೇಷ ರೈಲುಗಳ ಮೂಲಕ ಹೊರ ರಾಜ್ಯದ 3.79 ಲಕ್ಷ ವಲಸೆ ಕಾರ್ಮಿಕರನ್ನು ಅವರ ತವರು ರಾಜ್ಯಗಳಿಗೆ ಕಳಿಸಿಕೊಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಈ ಕುರಿತು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಗುರುವಾರ ರಾಜ್ಯ ಸರ್ಕಾರ ಸಲ್ಲಿರುವ ಲಿಖೀತ ಹೇಳಿಕೆಯಲ್ಲಿ ಈ ಮಾಹಿತಿ ನೀಡಲಾಗಿದೆ. ಹೊರ ರಾಜ್ಯದ ವಲಸೆ ಕಾರ್ಮಿಕರನ್ನು ಅವರ ತವರು ರಾಜ್ಯಗಳಿಗೆ ಕಳಿಸಿಕೊಡಲು ರಾಜ್ಯ ಸರ್ಕಾರ ಯೋಜನಾಬದ್ಧ ವ್ಯವಸ್ಥೆ ಮಾಡಿದೆ.
ತನ್ನ ಸ್ವಂತ ಊರಿಗೆ ತೆರಳ ಬಯಸುವ ಪ್ರತಿಯೊಬ್ಬ ವಲಸೆ ಕಾರ್ಮಿಕರಿಗೆ ಅವರ ತವರು ರಾಜ್ಯಕ್ಕೆ ಸುರಕ್ಷಿತವಾಗಿ ಕಳಿಸಿಕೊಡುವ ಜವಾ ಬ್ದಾರಿ ರಾಜ್ಯ ಸರ್ಕಾರದ ಮೇಲಿದೆ. ಆದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಈವರೆಗೆ (ಜೂ.16) ರಾಜ್ಯದ ವಿವಿಧ ಜಿಲ್ಲೆಗಳಿಂದ 267 ಶ್ರಮಿಕ್ ವಿಶೇಷ ರೈಲುಗಳ ಮೂಲಕ 3, 79, 195 ವಲಸೆ ಕಾರ್ಮಿಕರನ್ನು ಕಳಿಸಿಕೊಡಲಾಗಿದೆ.
ಅದೇ ರೀತಿ ಜೂ.16ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸ್ಸಾಂ, ತ್ರಿಪುರಾ, ನಾಗಲ್ಯಾಂಡ್, ಮಣಿಪುರ ಸೇರಿದಂತೆ ಈಶಾನ್ಯ ರಾಜ್ಯಗಳಿಗೆ 23 ಶ್ರಮಿಕ್ ವಿಶೇಷ ರೈಲುಗಳಲ್ಲಿ 34, 815 ವಲಸೆ ಕಾರ್ಮಿಕರು ಅವರ ಸ್ವಂತ ಊರುಗಳಿಗೆ ತೆರಳಿದ್ದಾರೆ ಎಂದು ಸರ್ಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.