ಮನೆ ಕೆಲಸಗಾರರ ಕಲ್ಯಾಣ ಮಂಡಳಿ: ಸರಕಾರಕ್ಕೆ ಪ್ರಸ್ತಾವ
Team Udayavani, Jun 1, 2022, 12:03 AM IST
ಬೆಂಗಳೂರು: ಮನೆಕೆಲಸದಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರಿಗಾಗಿ ಪ್ರತ್ಯೇಕ ಕಲ್ಯಾಣ ಮಂಡಳಿಯನ್ನು ಸ್ಥಾಪಿಸುವ ಹಾಗೂ ಲೈಂಗಿಕ ಕಾರ್ಯಕರ್ತೆಯರಿಗೆ ಪುನರ್ ವಸತಿ ಕಲ್ಪಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಅವರು ಸರಕಾರಕ್ಕೆ ಪ್ರಸ್ತಾವನೆ ಬರೆದಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಕೆಲಸದಲ್ಲಿ ತೊಡಗಿಸಿ ಕೊಂಡ ಮಹಿಳೆಯರಿಗೆ ವೃತ್ತಿಯ ಅಭದ್ರತೆ ಕಾಡುತ್ತಿದೆ. ಕೋವಿಡ್ ವೇಳೆ ಮನೆ ಕೆಲಸವನ್ನು ಕಳೆದುಕೊಂಡ ಒಂದು ಹೊತ್ತಿನ ತುತ್ತಿಗೆ ಪರದಾಡುತ್ತಿದ್ದರು. ಅವರಿಗೆ ಸರಕಾರದಿಂದ ಅಥವಾ ಮನೆಯ ಮಾಲಕರಿಂದ ಯಾವುದೇ ರೀತಿಯಾದ ಪರಿಹಾರ ಸಿಕ್ಕಿಲ್ಲ. ಇದರಿಂದ ಅನೇಕರು ಮಹಿಳೆಯರು ತಮ್ಮ ಜೀವ ಕಳೆದುಕೊಳ್ಳಲು ಮುಂದಾಗಿದ್ದರು ಎಂದು ಬೇಸರ ವ್ಯಕ್ತಪಡಿಸಿದರು.
ಎನ್‌ಜಿಒ ಮನವಿ
ಕಳೆದ ಎರಡು ವರ್ಷಗಳಿಂದ ರಾಜ್ಯದ ಎನ್‌ಜಿಒ ಹಾಗೂ ಹತ್ತಾರು ಮಹಿಳಾ ಪರವಾಗಿ ಕೆಲಸ ಮಾಡುವ ಸಂಸ್ಥೆಗಳು ಮಹಿಳಾ ಆಯೋಗ್ಯಕ್ಕೆ ಮಹಿಳಾ ಮನೆ ಕೆಲಸ ಮಾಡುವವರಿಗೆ ಕಲ್ಯಾಣ ಮಂಡಳಿ ಸ್ಥಾಪಿಸುವಂತೆ ಮನವಿ ಮಾಡಿದ್ದರು. ಕೆಆರ್‌ಪುರಂ ಮನೆ ಕಳ್ಳತನದ ವಿಷಯಕ್ಕೆ ಸಂಬಂಧಿಸಿದಂತೆ ಮನೆಕೆಲಸದಾಕೆಯ ದೂರು ನೀಡಿದ್ದು, ಈ ವೇಳೆ ಪೊಲೀಸರು ಆಕೆ ಮನೆ ತಪಾಸಣೆ ಹಾಗೂ ವಿಚಾರಣೆಗೆ ಒಳಪಡಿಸಿದಾಗ ಆಕೆ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿತ್ತು. ಈ ಘಟನೆಯ ಬಳಿಕ ಸಭೆ ನಡೆಸಿ ಕಲಾÂಣ ಮಂಡಳಿಯ ಅವಶ್ಯಕತೆ ಅರಿತುಕೊಂಡು ಸರಕಾರಕ್ಕೆ ಮನೆ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಪ್ರತ್ಯೇಕ ಕಲ್ಯಾಣ ಮಂಡಳಿ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದುಹೇಳಿದರು.
ಲೈಂಗಿಕ ಕಾರ್ಯಕರ್ತೆಯರಿಗೆ ಪುನರ್ವಸತಿ-ಪ್ರಸ್ತಾವ
ಲೈಂಗಿಕ ಕಾರ್ಯರ್ತೆಯರನ್ನು ಪೊಲೀಸರು ಘನತೆಯಿಂದ ನಡೆಸಿಕೊಳ್ಳಬೇಕು. ದಾಳಿ ಅಥವಾ ವಿಚಾರಣೆ ವೇಳೆ ಅವಾಚ್ಯವಾಗಿ ನಿಂದಿಸಿ, ದೈಹಿಕ ಹಿಂಸೆ ನೀಡಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ತೀರ್ಪು ಸ್ವಾಗತಾರ್ಹ. ಲೈಂಗಿಕ ಕಾರ್ಯಕರ್ತೆಯರು ವೃತ್ತಿಯಿಂದ ಹೊರ ಬರಲು ಯತ್ನಿಸುವವರಿಗೆ ಸರಕಾರದ ಸಹಾಯ ಅಗತ್ಯವಾಗಿ ಬೇಕಾಗಿದೆ. ಅವರ ಜೀವನ ರೂಪಿಸಿಕೊಳ್ಳಲು ಪುನರ್ವಸತಿ ಕಲ್ಪಿಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.