ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಅನ್ವಯ ಆಗದು
Team Udayavani, Aug 18, 2022, 9:55 PM IST
ಬೆಂಗಳೂರು: ರಾಜ್ಯ ಸರಕಾರದ ಮಧಾಹ್ನದ ಬಿಸಿಯೂಟ ಯೋಜನೆಯಡಿ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾರಕರು ಹಾಗೂ ಸಹಾಯಕ ಅಡುಗೆ ತಯಾರಕರು ಕನಿಷ್ಠ ವೇತನ ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಬಿಸಿಯೂಟ ತಯಾರಕರಿಗೆ ಕನಿಷ್ಠ ವೇತನ ಕಾಯ್ದೆ-1948ರಡಿ ಸೂಕ್ತ ವೇತನ ನಿಗದಿಪಡಿಸಲು ಕೋರಿ 2018ರಲ್ಲಿ ಸಾಮಾಜಿಕ ಕಾರ್ಯಕರ್ತೆ ಡಾ| ನೌಹೇರಾ ಶೇಕ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸಿದ ಹಂಗಾಮಿ ಮುಖ್ಯ ನ್ಯಾ| ಆಲೋಕ್ ಆರಾಧೆ ಹಾಗೂ ನ್ಯಾ| ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಬಿಸಿಯೂಟ ತಯಾರಕರು ಕನಿಷ್ಠ ವೇತನ ಕಾಯ್ದೆ ವ್ಯಾಪ್ತಿಗೆ ಒಳಪಡುವುದಿಲ್ಲ. ಹಾಗಾಗಿ ಕನಿಷ್ಠ ವೇತನ ಪಡೆದುಕೊಳ್ಳಲು ಅವರು ಅರ್ಹರಲ್ಲ ಎಂದು ಅಭಿಪ್ರಾಯಪಟ್ಟಿದೆ.
ಕನಿಷ್ಠ ವೇತನ ಕಾಯ್ದೆಯಲ್ಲಿ ಉಲ್ಲೇಖೀಸಲಾಗಿರುವ ಅಧಿಸೂಚಿತ ಉದ್ಯೋಗಗಳಿಗೆ ಮಾತ್ರ ಕಾಯ್ದೆಯ ನಿಯಮಗಳು ಅನ್ವಯಿಸುತ್ತವೆ. ಬಿಸಿಯೂಟ ಯೋಜನೆಯಡಿ ದಿನಕ್ಕೆ ನಾಲ್ಕು ಗಂಟೆಯ ಸೀಮಿತ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವವರಿಗೆ ಕನಿಷ್ಠ ವೇತನ ಕಾಯ್ದೆಯ ನಿಯಮಗಳು ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
ಅಲ್ಲದೆ, ಕರ್ನಾಟಕ ಕನಿಷ್ಠ ವೇತನ ನಿಯಮಗಳು-1958ರ ಪ್ರಕಾರ ದಿನದ ಕೆಲಸದ ಅವಧಿ 9 ಗಂಟೆಯಾಗಿರಬೇಕು. ಈ ಮಾನದಂಡ ಮುಖ್ಯ ಅಡುಗೆ ತಯಾರಕರ ಮತ್ತು ಅಡುಗೆ ತಯಾರಕರ ವಿಚಾರದಲ್ಲಿ ಪಾಲನೆಯಾಗಿಲ್ಲ. ಹಾಗಾಗಿ ಅವರಿಗೆ ಕನಿಷ್ಠ ವೇತನ ನೀಡಬೇಕೆಂಬ ವಿಚಾರವು ಕಾಯ್ದೆಯ ನಿಯಮಗಳ ವ್ಯಾಪ್ತಿಗೆ ಬರುವುದಿಲ್ಲ ಮತ್ತು ಅವರಿಗೆ ಕನಿಷ್ಠ ವೇತನ ಕಾಯ್ದೆಯಡಿ ಸೂಕ್ತ ಕನಿಷ್ಠ ವೇತನ ವಿತರಿಸಲು ಸರಕಾರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.