ವಸತಿ ವಿಜಿಲ್ ಆ್ಯಪ್ ಅಭಿವೃದ್ಧಿ
Team Udayavani, Jan 15, 2020, 3:04 AM IST
ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಕ್ರಮ, ದುರ್ಬಳಕೆ ತಡೆದು ಪಾರದರ್ಶಕತೆ ತರಲು “ವಸತಿ ವಿಜಿಲ್’ ಆ್ಯಪ್ ಅಭಿವೃದ್ಧಿಪಡಿಸಿ ಬಳಸಲಾಗುತ್ತಿದೆ ಎಂದು ಸಚಿವ ವಿ.ಸೋಮಣ್ಣ ಹೇಳಿದರು.
ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ರಾಜೀವ್‌ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಪ್ರಸಾದ್, ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಪಿಡಿಒಗಳು, ತನಿಖಾ ತಂಡದವರು ಜಂಟಿ ಸಮೀಕ್ಷೆ ನಡೆಸಲಿದ್ದಾರೆ. ಪಿಡಿಒ, ತನಿಖಾ ತಂಡ ಹಾಗೂ ಫಲಾನುಭವಿಗಳು ಜಂಟಿಯಾಗಿ ಮನೆ ನಿರ್ಮಾಣ ಸ್ಥಳದಲ್ಲಿರುವ ಛಾಯಾಚಿತ್ರ ಸೆರೆ ಹಿಡಿದು ಆ್ಯಪ್‌ನಡಿ ಅಪ್‌ಲೋಡ್ ಮಾಡಬೇಕಾಗುತ್ತದೆ ಎಂದು ತಿಳಿಸಿದರು.
ಬಳಿಕ ಅದನ್ನು ಮೇಲಿನ ಹಂತಗಳಲ್ಲಿ ಪರಿಶೀಲನೆ ನಡೆಸಲಾಗುತ್ತದೆ. ಅಂತಿಮವಾಗಿ ನಿಯಮಾನುಸಾರ ಇರುವ ಮನೆಗಳ ವಿವರವನ್ನು ಗ್ರಾಮೀಣ ಪ್ರದೇಶದಲ್ಲಿ ಜಿಪಂ ಸಿಇಒ ಹಾಗೂ ನಗರ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳು ನೀಡಲಿದ್ದಾರೆ. ಅದರ ಆಧಾರದ ಮೇಲೆ ನಿಗಮ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಿದೆ.
ಅಧಿಕಾರ ವಿಕೇಂದ್ರೀಕರಣದ ಮೂಲಕ ಪಾರದರ್ಶಕತೆಗೆ ಒತ್ತು ನೀಡಲಾಗಿದೆ ಎಂದು ಹೇಳಿದರು. ಕಳೆದ ನ.16ರಿಂದ ವಸತಿ ವಿಜಿಲ್ ಮೊಬೈಲ್ ಆ್ಯಪ್ ಮೂಲಕ ಮನೆಗಳ ಪರಿಶೀಲನೆ ಕಾರ್ಯ ನಡೆದಿದೆ. ನಗರ ಪ್ರದೇಶದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜಿಪಂ ಸಿಇಒಗಳ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಿ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು.
19ಕ್ಕೆ ಶಿವಕುಮಾರ ಶ್ರೀಗಳ ಸಂಸ್ಮರಣೋತ್ಸವ
ಬೆಂಗಳೂರು: ಸಿದ್ಧಗಂಗಾ ಕ್ಷೇತ್ರದ ಡಾ.ಶಿವಕುಮಾರ ಸ್ವಾಮೀಜಿಯವರ ಪ್ರಥಮ ಪುಣ್ಯ ಸಂಸ್ಮರಣೋತ್ಸವ ಜ.19ರಂದು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ನಡೆಯಲಿದೆ. ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ವಿ.ಸೋಮಣ್ಣ, ಡಾ.ಶಿವಕುಮಾರ ಸ್ವಾಮೀಜಿಯವರ ಪ್ರಥಮ ಪುಣ್ಯ ಸಂಸ್ಮರಣೋತ್ಸವ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಜ.19ರಂದು ಮಠದಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಬೇಲಿಮಠದ ಶಿವರುದ್ರ ಸ್ವಾಮೀಜಿ, ದೇಗುಲಮಠದ ಮುಮ್ಮಡಿ ನಿರ್ವಾಣ ಸ್ವಾಮೀಜಿ ಉಪಸ್ಥಿತರಿರಲಿದ್ದು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆಂದರು.
ದೆಹಲಿ ಉದ್ಯಮಿ ಮುಖೇಶ್ ಗರ್ಗ್, ದೆಹಲಿ ಉಗ್ರ ನಿಗ್ರಹ ದಳದ ಅಧ್ಯಕ್ಷ ಮಣೀಂದರ್ ಜೀತ್‌ಸಿಂಗ್ ಬಿಟ್ಟ ಅವರನ್ನು ಇದೇ ವೇಳೆ ಸನ್ಮಾನಿಸಲಾಗುವುದು. ಕಳೆದ ವರ್ಷ ಮಠದಲ್ಲಿ 10 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ಆಶ್ರಯ ಪಡೆದಿದ್ದರು. ಇದೀಗ ವಿದ್ಯಾರ್ಥಿ ಗಳ ಸಂಖ್ಯೆ 12 ಸಾವಿರಕ್ಕೆ ಏರಿಕೆಯಾಗಿದ್ದು, ನೋಂದಣಿ ಹೆಚ್ಚಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು
ಕೆಪಿಎಸ್ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.