ಫಾರಂ 7 ಇಲ್ಲದೆ ಮತದಾರರ ಪಟ್ಟಿಯಿಂದ 27 ಲಕ್ಷ ಹೆಸರು ತೆಗೆದಿದ್ದು ಹೇಗೆ?: ಡಿ ಕೆ ಶಿವಕುಮಾರ್
Team Udayavani, Nov 22, 2022, 1:12 PM IST
ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ತೆಗೆಯುವುದಕ್ಕೆ ಅಥವಾ ಸೇರಿಸುವುದಕ್ಕೆ ಫಾರಂ 7 ಅತ್ಯಗತ್ಯ. ಈ ಅರ್ಜಿಗಳು ಇಲ್ಲದೆ 27 ಲಕ್ಷ ಹೆಸರು ತೆಗೆದಿದ್ದು ಹೇಗೆ? ಇವುಗಳಿಗೆ ಸಹಿ ಹಾಕಿದವರು ಯಾರು? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೇರೆ ಸಮಯದಲ್ಲಿ ಚಿಲುಮೆ ಸಂಸ್ಥೆಗೆ ಬೇರೆ ಕೆಲಸವನ್ನು ಸರ್ಕಾರ ನೀಡಿರಬಹುದು. ಆದರೆ ಅವುಗಳಿಗೂ ಈ ಚುನಾವಣೆ ಪ್ರಕ್ರಿಯೆಗೂ ಬಹಳ ವ್ಯತ್ಯಾಸವಿದೆ ಎಂದು ಹೇಳಿದರು.
ಚುನಾವಣಾ ಆಯೋಗ ಅಧಿಕಾರಿಗಳ ಭೇಟಿಗೆ ಇಂದು ಸಮಯಾವಕಾಶ ಕೇಳಲಾಗಿತ್ತು. ಹಿರಿಯ ಅಧಿಕಾರಿ ಭೇಟಿ ಮಾಡಬೇಕಿದ್ದು, ನಾಳೆ ಸಮಯ ನೀಡಿದ್ದಾರೆ. ನಾಳೆ ಭೇಟಿ ಮಾಡಿ ನಮ್ಮ ದೂರು ನೀಡುತ್ತೇವೆ. ಈ ಪ್ರಕರಣದಲ್ಲಿ ಸಾಕಷ್ಟು ಕಾನೂನು ಅಂಶಗಳಿವೆ. ಮತದಾರರ ಮಾಹಿತಿ ತೆಗೆದುಕೊಳ್ಳುವ ಅವಕಾಶ ಯಾರಿಗೂ ಇಲ್ಲ. ರಾಜ್ಯದಲ್ಲಿ 8250 ಬೂತ್ ಗಳಿವೆ. ಪ್ರತಿ ಬೂತ್ ಗೆ ಒಬ್ಬರನ್ನು ನೇಮಕ ಮಾಡಬೇಕು. ಕೇವಲ ಚಿಲುಮೆ ಸಂಸ್ಥೆ ಮಾತ್ರವಲ್ಲ, ಏಳು ಸಾವಿರಕ್ಕೂ ಹೆಚ್ಚು ಜನರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಎಲ್ಲಾ 28 ಕ್ಷೇತ್ರ ಚುನಾವಣಾಧಿಕಾರಿ ಮೇಲೂ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಶಾರೀಕ್ ಜತೆ ಮಂಗಳೂರಿಗೆ ಮತ್ತೊಬ್ಬ ಬಂದಿದ್ದನಾ..? ವೈರಲ್ ಆಗುತ್ತಿದೆ ಸಿಸಿಟಿವಿ ಫುಟೇಜ್
ಒತ್ತಡದ ಮೇಲೆ ಈ ಕೆಲಸ ಮಾಡಿದ್ದೇವೆ ಎಂದು ಕೆಲವು ಬಂಧಿತ ಆರೋಪಿಗಳು ಹೇಳಿಕೆ ನೀಡಿರುವ ಸುದ್ದಿ ಬಗ್ಗೆ ಕೇಳಿದಾಗ, ‘ಈ ವಿಚಾರ ನನಗೆ ಗೊತ್ತಿಲ್ಲ. ಆತ ಕಳ್ಳತನ ಮಾಡಿದ್ದರೆ, ಅದನ್ನು ಮಾಡಿಸಿದವರು ಯಾರು? ಹೀಗೆ ಮಾಡಬೇಕು ಎಂದು ಹೇಳಿಕೊಟ್ಟವರು ಯಾರು? ಅಧಿಕಾರಿಯೊಬ್ಬರು ಮೇಲಾಧಿಕಾರಿಗಳ ಆದೇಶದ ಮೇರೆಗೆ ನಾವು ಈ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದು, ಈ ಮೇಲಾಧಿಕಾರಿಗಳು ಯಾರು? ನಾನಾ, ಸಿದ್ದರಾಮಯ್ಯನವರಾ, ಯಡಿಯರಪ್ಪನವರಾ, ಬೊಮ್ಮಾಯಿಯವರಾ? ಈ ವಿಚಾರ ತನಿಖೆಯಾಗಬೇಕು. ಆದರೆ ಇದು ಇವರಿಂದ ಸಾಧ್ಯವಿಲ್ಲ. ನಾವು ಎಲ್ಲವನ್ನೂ ಈಗಲೇ ಬಹಿರಂಗ ಮಾಡುವುದಿಲ್ಲ. ದೂರು ಕೊಟ್ಟ ನಂತರ ಏನು ದೂರು ಕೊಟ್ಟಿದ್ದೇವೆ ಎಂದು ತಿಳಿಸುತ್ತೇವೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.