ಏಕಚಕ್ರಾಧಿಪತ್ಯದ ರಾಜ್ಯಭಾರ ಎಷ್ಟು ದಿನ?
Team Udayavani, Aug 4, 2019, 3:03 AM IST
ಬೆಂಗಳೂರು: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ 8 ದಿನ ಆಗಿದೆ. ಇನ್ನೂ ಮಂತ್ರಿಮಂಡಲ ರಚನೆಯಾಗಿಲ್ಲ. ರಚಿಸುವ ಸಾಧ್ಯತೆಯೂ ಕಾಣಿಸುತ್ತಿಲ್ಲ. ಬಿ.ಎಸ್.ಯಡಿಯೂರಪ್ಪನವರು ಏಕಚಕ್ರಾಧಿಪತ್ಯದ ರಾಜ್ಯಭಾರವನ್ನು ಇನ್ನಷ್ಟು ದಿನ ನಡೆಸುವ ಮೂಡಲ್ಲಿ ಇದ್ದ ಹಾಗೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಆಡಳಿತ ಪ್ರಾರಂಭವೇ ಆಗಿಲ್ಲ. ರಾಜ್ಯದ ಜನತೆ ಇನ್ನೂ ಎಷ್ಟು ದಿನ ಏಕಚಕ್ರಾಧಿಪತ್ಯದ ಅಧಿಕಾರ ನೋಡಬೇಕು ಎಂದು ಟ್ವೀಟ್ ಮಾಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಕೂಡ ಸಂಪುಟ ವಿಸ್ತರಣೆ ಮಾಡದಿರುವ ಬಗ್ಗೆ ಟ್ವೀಟ್ ಮಾಡಿದ್ದು, ಅಧಿಕಾರ ಪಡೆಯಲು ತೋರಿದ್ದ ಅವಸರವನ್ನು ಯಡಿಯೂರಪ್ಪ ಈಗ ಸಂಪುಟ ವಿಸ್ತರಣೆ ಮಾಡುವಲ್ಲಿ ತೋರುತ್ತಿಲ್ಲ. ಎಲ್ಲಿದೆ ಸಂಪುಟ. ಕುದುರೆ ವ್ಯಾಪಾರದ ಮುಖ್ಯಮಂತ್ರಿಗಳು ಒಬ್ಬರೇ ಎಲ್ಲ ಸಚಿವರ ಅಧಿಕಾರ ನಡೆಸುವ ಯೋಚನೆಯಲ್ಲಿದ್ದಾರೆಯೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’
Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್
ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್
Officers Promotion: ಹೊಸ ವರ್ಷಕ್ಕೆ 153 ಅಧಿಕಾರಿಗಳಿಗೆ ಭಡ್ತಿ ಭಾಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.