Siddaramaiah ಎಷ್ಟು ದಿನ ಸಿಎಂ ಆಗಿರ್ತಾರೋ? ಬಿ.ವೈ. ವಿಜಯೇಂದ್ರ ವ್ಯಂಗ್ಯ
ಡಿಕೆಶಿ ನಿಯಂತ್ರಿಸಲು ಹೆಚ್ಚುವರಿ ಡಿಸಿಎಂ ಬೇಡಿಕೆ ಸೃಷ್ಟಿ
Team Udayavani, Jun 28, 2024, 11:36 PM IST
ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಲು ಹೆಚ್ಚುವರಿ ಡಿಸಿಎಂ ಬೇಡಿಕೆ ಸೃಷ್ಟಿಸಿದ್ದ ಸಿದ್ದರಾಮಯ್ಯ ಬುಡಕ್ಕೆ ಈಗ ಸಮಸ್ಯೆ ಬಂದಿದೆ. ಸಿದ್ದರಾಮಯ್ಯ ಎಷ್ಟು ದಿನಗಳ ಕಾಲ ಮುಖ್ಯಮಂತ್ರಿಯಾಗಿರುತ್ತಾರೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ಈಗ ಒಬ್ಬರಿಗೊಬ್ಬರು ಬುಡ ಕುಯ್ದುಕೊಳ್ಳುವ ಕೆಲಸ ಮಾಡಿಕೊಳ್ಳು
ತ್ತಿದ್ದಾರೆ. ರಸ್ತೆಯಲ್ಲಿ ನಿಂತುಕೊಂಡು ಹೊಡೆದಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಬರುವ ದಿನಗಳಲ್ಲಿ ಇನ್ನೂ ಏನೇನು ಆಗುತ್ತೆ. ಇದರ ಜತೆಗೆ ಮೂರು ಡಿಸಿಎಂ ಚರ್ಚೆ ನಡೆಯುತ್ತಿದೆ. ಡಿ.ಕೆ. ಶಿವಕುಮಾರ್ ಬಲಿಯಾಗಬೇಕೆಂದು ಸಚಿವರ ಮೂಲಕ ಸಿದ್ದರಾಮಯ್ಯನವರೇ ಹೆಚ್ಚುವರಿ ಡಿಸಿಎಂ ಹೇಳಿಕೆ ಕೊಡಿಸುತ್ತಿದ್ದಾರೆ ಎಂದು ಟೀಕಿಸಿದರು.
ಸರಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ
ಬೆಲೆ ಏರಿಕೆ ಬಗ್ಗೆ ಮಾತನಾಡಿದರೆ ಸಿದ್ದರಾಮಯ್ಯ ಉಡಾಫೆ ಉತ್ತರ ಕೊಡುತ್ತಾರೆ. ರಾಜ್ಯದ ಜನರ ಸಮಸ್ಯೆ ಮತ್ತು ಅಭಿವೃದ್ಧಿ ಬಗ್ಗೆ ಮಾತ್ರ ಯಾರೂ ಮಾತನಾಡುತ್ತಿಲ್ಲ. ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಹಾದಿ ಬೀದಿಯಲ್ಲಿ ಸಿಎಂ, ಡಿಸಿಎಂ ಸಚಿವರು ಹೊಡೆದಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ನಮ್ಮ ಮುಂದೆ ಇನ್ನು ಹೋರಾಟದ ದಿನಗಳು ಮಾತ್ರ ಉಳಿದಿವೆ. ಮುಂದೆ ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸರಕಾರಕ್ಕೆ ಕೋರ್ಟ್ ಛೀಮಾರಿ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿರಬಹುದು. ಆದರೆ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿ¨ªಾರೆ. ಎಸ್ಐಟಿ ಮಾಜಿ ಮಂತ್ರಿಗೆ ನೋಟಿಸ್ ಕೊಟ್ಟು ತನಿಖೆ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಕೋರ್ಟ್ ಕೂಡ ಸರಕಾರಕ್ಕೆ ಛೀಮಾರಿ ಹಾಕಿದೆ ಎಂದರು.
ಕೋರ್ ಕಮಿಟಿ ಸಭೆಯಲ್ಲಿ
ಅಭ್ಯರ್ಥಿಗಳ ಅಂತಿಮ ಆಯ್ಕೆ
ಚನ್ನಪಟ್ಟಣದಿಂದ ತಮ್ಮ ಕುಟುಂಬದವರ ಸ್ಪರ್ಧೆ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಮಾಡಿರುವ ಟ್ವೀಟ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದು ನಮಗೆ ಮುಖ್ಯ ಅಲ್ಲ. ಯಾರೇ ಅಭ್ಯರ್ಥಿಯಾದರೂ ಜೆಡಿಎಸ್ ನಾವು ಒಟ್ಟಾಗಿ ಚುನಾವಣೆ ಎದುರಿಸಿ ಗೆಲ್ಲುತ್ತೇವೆ. ಬೆಂಗಳೂರು ಗ್ರಾಮಾಂತರದಲ್ಲಿ ಯಾವ ಫಲಿತಾಂಶ ಬಂದಿದೆ ಎಂದು ಗೊತ್ತಿದೆ.
ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿನಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಬಗ್ಗೆ ನಾವು ಶೀಘ್ರದಲ್ಲೇ ಕೋರ್ ಕಮಿಟಿ ಸಭೆ ಕರೆದು ಚರ್ಚೆ ನಡೆಸುತ್ತೇವೆ. ಅಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತು ಸರಕಾರದ ವಿರುದ್ಧ ಹೋರಾಟದ ಬಗ್ಗೆ ಚರ್ಚೆ ಮಾಡುತ್ತೇವೆ. ಹಾಲಿನ ಬೆಲೆ ಏರಿಕೆ ವಿರುದ್ಧವೂ ಹೋರಾಟ ನಡೆಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.