ವಾಲ್ಮೀಕಿ ಅಕ್ರಮದಲ್ಲಿ ಸೋನಿಯಾ ಪಾಲೆಷ್ಟು?: ಆರ್.ಅಶೋಕ್ ಆರೋಪ
ಸಿದ್ದರಾಮಯ್ಯ ಸಮ್ಮುಖದಲ್ಲೇ ಕೋಟ್ಯಂತರ ರೂ. ಹಗರಣ
Team Udayavani, Jun 2, 2024, 6:42 AM IST
ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರ ಕಣ್ಣಿನ ಕೆಳಗೆಯೇ ಕೋಟ್ಯಂತರ ರೂಪಾಯಿ ಹಗರಣ ನಡೆದರೂ ಅವರಿಗೆ ತಿಳಿದಿಲ್ಲವೆಂದರೆ ಹೇಗೆ? ಈ ಹಗರಣದಲ್ಲಿ ಸೋನಿಯಾ ಗಾಂಧಿಯವರಿಗೆ ಕೊಟ್ಟಿರುವ ಪಾಲು ಎಷ್ಟು? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದರೂ, ತಮ್ಮ ಬಳಿಯೇ ಹಣಕಾಸು ಇಲಾಖೆ ಇಟ್ಟುಕೊಂಡಿರುವ ಸಿದ್ದರಾಮಯ್ಯ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಮಾತ್ರ ಪಡೆಯುತ್ತಿಲ್ಲ? ಸರ್ಕಾರದ ಹಣವನ್ನು ಯಾರು ಹೇಗೆ ಬೇಕಾದರೂ ವರ್ಗಾವಣೆ ಮಾಡಬಹುದು ಎಂಬುದು ಇದರ ಅರ್ಥವೇ ? ಈ ಪ್ರಕರಣದಲ್ಲಿ ಸಿದ್ದರಾಮಯ್ಯನವರೇ ರಾಜೀನಾಮೆ ನಿಡಬೇಕು ಎಂದು ಒತ್ತಾಯಿಸಿದ್ದಾರೆ.
ಆಂಧ್ರಪ್ರದೇಶದ ಜ್ಯುಬಿಲಿ ಹಿಲ್ಸ್ ಬ್ಯಾಂಕ್‌ಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಜತೆಗೆ 9 ಐಟಿ ಕಂಪನಿಗಳಿಗೆ ವರ್ಗಾಯಿಸಲಾಗಿದೆ. ಈ ಹಣವನ್ನು ದಲಿತರ ಶ್ರೇಯಸ್ಸಿಗಾಗಿ ಇಡಲಾಗಿತ್ತು. ಇಂತಹ ಹಣವನ್ನೇ ಕಾಂಗ್ರೆಸ್‌ನವರು ಲೂಟಿ ಮಾಡುತ್ತಿದ್ದಾರೆ. ಇಲ್ಲಿ ಯಾರು ಮುಖ್ಯಮಂತ್ರಿ ಎಂಬುದೇ ಅರ್ಥವಾಗುತ್ತಿಲ್ಲ. ಈ ಹಗರಣದಲ್ಲಿ ಇಬ್ಬರು ಮುಖ್ಯಮಂತ್ರಿ ಹಾಗೂ ಸೂಪರ್ ಸಿಎಂ ಇದ್ದಾರೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಸರ್ಕಾರದಲ್ಲಿ ಲೂಟಿಯನ್ನು ತಡೆದವರು ನಿವೃತ್ತರಾಗಬೇಕು ಅಥವಾ ಆತ್ಮಹತ್ಯೆ ಮಾಡಿಕೊಳ್ಳಬೇಕು. ಈ ಹಗರಣ ದೆಹಲಿಯನ್ನು ತಲುಪಿದ್ದು ಮುಂದೆ ದೆಹಲಿ ನಾಯಕರ ವಿಚಾರವೂ ಬಹಿರಂಗವಾಗಲಿದೆ. ದಲಿತರಿಗೆ ಮೀಸಲಿಟ್ಟ ಹಣ ಎಲ್ಲಿಗೆ ಹೋಗಿದೆ ಎಂಬುದು ಪತ್ತೆಯಾಗಬೇಕು. ಮಹಿಳೆಯರ ಅಕೌಂಟ್‌ಗೆ ಟಕಾಟಕ್ ಎಂದು ಹಣ ವರ್ಗಾವಣೆಯಾಗಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ ಇಲ್ಲಿ ಐಟಿ ಕಂಪನಿಗಳ ಖಾತೆಗೆ ಟಕಾಟಕ್ ಎಂದು ವರ್ಗಾವಣೆಯಾಗಿದೆ ಎಂದು ವ್ಯಂಗ್ಯವಾಡಿದರು.
ಎಲ್ಲರೂ ಹಂಚಿದ್ದಾರೆ :
ಸಮಪಾಲು, ಸಮಬಾಳು ಎಂಬಂತೆ ಸಚಿವ ಸಂಪುಟದಲ್ಲಿರುವ ಎಲ್ಲರೂ ಹಣವನ್ನು ಸಮಪಾಲು ಮಾಡಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿ, 187 ಕೋಟಿ ರೂ. ಲೂಟಿ ಮಾಡಲಾಗಿದೆ. ತಮ್ಮ ಕಣ್ಣಿನ ಕೆಳಗೆ ಇವೆಲ್ಲ ನಡೆಯುತ್ತಿದ್ದರೂ ಸಿದ್ದರಾಮಯ್ಯ ಮೂಕ ಪ್ರೇಕ್ಷಕರಂತೆ ನಿಂತಿದ್ದಾರೆ ಎಂದರು.
ಹಣ ವರ್ಗಾವಣೆಯಾಗಿರುವ ಐಟಿ ಕಂಪನಿಗಳು ಕಾಂಗ್ರೆಸಿಗರ ಹಿಂಬಾಲಕರದ್ದಾಗಿದೆ. ಹೈದರಾಬಾದಿನ ಜ್ಯೂಬ್ಲಿ ಹಿಲ್ಸ್ ವರೆಗೆ ಯಾರೂ ಹೋಗುವುದಿಲ್ಲ ಎಂಬ ಕಾರಣಕ್ಕೆ ಅಲ್ಲಿಗೆ ವರ್ಗಾವಣೆ ಮಾಡಲಾಗಿದೆ. ಕಾನೂನು ಪ್ರಕಾರ ಎಲ್ಲ ಅವಕಾಶ ಬಳಸಿಕೊಂಡು ಬಿಜೆಪಿ ಹೋರಾಟ ಮಾಡಲಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ದಾಖಲೆ ಸಮೇತ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ತಪ್ಪಿಸಿಕೊಳ್ಳಲು ಎಸ್‌ಐಟಿ :
ಈ ಹಗರಣದ ತನಿಖೆ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಸಿಐಡಿ ಬದಲು ಎಸ್‌ಐಟಿ ರಚಿಸಿದರೆ ಈ ಪ್ರಕರಣ ಮುಚ್ಚಿಹಾಕಬಹುದೆಂಬ ಉಪಾಯವನ್ನು ಸರ್ಕಾರ ಮಾಡಿದೆ. ಪದೇಪದೆ ತನಿಖಾ ಏಜೆನ್ಸಿ ಬದಲಿಸಲಾಗುತ್ತಿದೆ. ಆದ್ದರಿಂದ ಇದನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಸಿಂಪಥಿ ಸೃಷ್ಟಿಸಲು ಹಾಗೂ ದೇವೇಗೌಡರೇ ಇದನ್ನು ಮಾಡುತ್ತಿ¨ªಾರೆ ಎಂದು ಬಿಂಬಿಸಲು ಮಾಟ ಮಂತ್ರದ ಹೇಳಿಕೆ ನೀಡಿದ್ದಾರೆ. ಕೇರಳ ಸರ್ಕಾರ ಅದಕ್ಕಾಗಿ ಸ್ಪಷ್ಟನೆ ನೀಡಿ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಇಷ್ಟು ಕಳಪೆಯಾಗಿ¨ªಾರೆ. ಇವರ ಗುಪ್ತಚರ ಸಂಸ್ಥೆ ವಿಫಲವಾಗಿದೆ. ಇದು ಜನರಿಗೆ ಮಾಡಿದ ಅಪಮಾನ. ಮುಖ್ಯಮಂತ್ರಿ ಈಗ ಕೇರಳ ಸರ್ಕಾರಕ್ಕೆ ಪತ್ರ ಬರೆಯಲಿ, ಇಲ್ಲವೆಂದರೆ ಜನರ ಕ್ಷಮೆ ಕೋರಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.