ಹಸನಾಗಲಿ ಹಳ್ಳಿ: ಗ್ರಾಮ ಪಂಚಾಯಿತಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಹೇಗೆ?


Team Udayavani, Dec 7, 2020, 9:10 AM IST

ಹಸನಾಗಲಿ ಹಳ್ಳಿ: ಗ್ರಾಮ ಪಂಚಾಯಿತಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಹೇಗೆ?

ಲೋಕಸಭೆ, ವಿಧಾನಸಭೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಚುನಾವಣೆಗೆ ನಾಮಪತ್ರ ಸಲ್ಲಿಸುವಂತೆ ಆಕಾಂಕ್ಷಿಗಳು ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಬೇಕು. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ, ನಾಮಪತ್ರದ ಜೊತೆಗೆ ಸಲ್ಲಿಸಬೇಕಾದ ದಾಖಲೆಗಳು,ಚುನಾವಣಾ ಠೇವಣಿ ಹಾಗೂ ಚಿನ್ಹೆಗಳ ಹಂಚಿಕೆಯ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ.

ನಾಮಪತ್ರ ಸಲ್ಲಿಕೆಗೆ ರಾಜ್ಯ ಚುನಾವಣಾ ಆಯೋಗ ನಿಗದಿಪಡಿಸಿದ ದಿನ ಹಾಗೂ ಸಮಯದೊಳಗೆ ನಾಮಪತ್ರ ಸಲ್ಲಿಸಬೇಕು. ಅದರಂತೆ ರಜಾ ದಿನಗಳನ್ನು ಹೊರತುಪಡಿಸಿ ನಾಮಪತ್ರ ಸಲ್ಲಿಕೆಗೆ ನಿಗದಿಪಡಿಸಿದ ದಿನಾಂಕಗಳ ಎಲ್ಲಾ ಕೆಲಸದ ದಿನಗಳಲ್ಲಿ ಬೆ. 11ರಿಂದ ಮ. 3 ಗಂಟೆಯೊಳಗೆನಮೂನೆ-5ರಲ್ಲಿ ನಾಮಪತ್ರ ಸಲ್ಲಿಸಬಹುದು

ನಾಮಪತ್ರ ಸಲ್ಲಿಕೆಗೆ ಅಗತ್ಯವಿರುವ ದಾಖಲೆಗಳು

* ನಾಮಪತ್ರ ಸಲ್ಲಿಸುವ ಅಭ್ಯರ್ಥಿಯು ತಾನು ಪ್ರತಿನಿಧಿಸುವ ಗ್ರಾಮ ಪಂಚಾಯಿತಿಯ ಮತದಾರರ ಪಟ್ಟಿಯಲ್ಲಿರುವ ತನ್ನ ಹೆಸರು ಮತ್ತು ಗುರುತಿನ ಸಂಖ್ಯೆಯನ್ನು ನಾಮಪತ್ರದಲ್ಲಿ ನಮೂದಿಸಬೇಕು. ಅದೇ ಗ್ರಾ.ಪಂ. ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಒಬ್ಬ ಸೂಚಕರ ಹೆಸರನ್ನು ಅವರ ಮತದಾರಪಟ್ಟಿಯ ಸಂಖ್ಯೆಯನ್ನು ನಾಮಪತ್ರದಲ್ಲಿ ನಮೂದಿಸಬೇಕು.

* ಸಾಮಾನ್ಯ ಅಭ್ಯರ್ಥಿಗಳು 200 ರೂ. ಹಾಗೂ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಮಹಿಳೆಯರು 100 ಚುನಾವಣಾ ಠೇವಣಿ ಇಡಬೇಕು. ಇದನ್ನು ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾಧಿಕಾರಿಗಳಿಗೆ ನಗದು ರೂಪದಲ್ಲಿ ಪಾವತಿಸಬೇಕು. ಬ್ಯಾಂಕ್‌ ಮೂಲಕವೂ ಪಾವತಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ:ಆಂಧ್ರದ ಹಳ್ಳಿಯೊಂದರಲ್ಲಿ ಕಾಡುತ್ತಿದೆ ವಿಚಿತ್ರ ಕಾಯಿಲೆ: ಓರ್ವ ಸಾವು, 292 ಮಂದಿ ಅಸ್ವಸ್ಥ

* ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವವರು ಸಂಬಂಧಿಸಿದ ಜಾತಿ ಹಾಗೂ ಸಿಂಧುತ್ವ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

* ಹಿಂದೆ, ಜಿ.ಪಂ. ತಾ.ಪಂ. ಅಥವಾ ಗ್ರಾ.ಪಂ ಸದಸ್ಯರಾಗಿದ್ದಾಗ ಯಾವುದಾದರೂ ಬಾಕಿ ಇದ್ದರೆ ಅದಕ್ಕೆ ನಾಮಪತ್ರದ ಜೊತೆಗೆ “ನಬಾಕಿ’ (ಎನ್‌ಒಸಿ) ಪ್ರಮಾಣಪತ್ರ ಸಲ್ಲಿಸಬೇಕು.

* ಒಬ್ಬ ಅಭ್ಯರ್ಥಿ ಗರಿಷ್ಠ 4 ನಾಮಪತ್ರಗಳನ್ನು ಸಲ್ಲಿಸಬಹುದು. ಆದರೆ, ಚುನಾವಣಾ ಠೇವಣಿ ಮಾತ್ರ ಒಂದು ನಾಮಪತ್ರಕ್ಕೆ ಅನ್ವಯವಾಗುತ್ತದೆ. ನಾಮಪತ್ರ ಸಲ್ಲಿಸಿದ ದಿನಾಂಕ ಮತ್ತು ಸಮಯದ ಸ್ವೀಕೃತಿಯನ್ನು ಚುನಾವಣಾಧಿಕಾರಿಯಿಂದ ಪಡೆದುಕೊಳ್ಳಬೇಕು.

ನಾಮಪತ್ರ ಪರಿಶೀಲನೆ ವೇಳೆ ಪರಿಗಣಿಸುವ ಅಂಶಗಳು

* ಸಾಮಾನ್ಯವಾಗಿ ಕಾಗುಣಿತ ದೋಷ, ಮುದ್ರ ದೋಷಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದಿಲ್ಲ. ನಾಮಪತ್ರದಲ್ಲಿ ಅಭ್ಯರ್ಥಿ ಹೆಸರು ಇಲ್ಲದೇ ಇದ್ದರೆ ಅಥವಾ ಸೂಚಕ ಬೇರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯವರಾಗಿದ್ದರೆ ನಾಮಪತ್ರ ತಿರಸ್ಕೃತಗೊಳ್ಳುತ್ತದೆ. ನಾಲ್ಕು ನಾಮಪತ್ರಗಳ ಪೈಕಿ ಒಂದು ತಿರಸ್ಕಾರಗೊಂಡು ಒಂದು ಅಂಗೀಕೃತಗೊಂಡರೆ ಉಮೇದುವಾರಿಕೆ ಊರ್ಜಿತಗೊಳ್ಳುತ್ತದೆ.

* ಜಾತಿ ಪ್ರಮಾಣಪತ್ರ ಮತ್ತಿತರ ಸೂಕ್ಷ್ಮ ವಿಚಾರಗಳ ಬಗ್ಗೆ ಆಕ್ಷೇಪಗಳು ಬಂದಾಗ ಅಂತಹ ಸಂದರ್ಭದಲ್ಲಿ ನಾಮಪತ್ರ ಪರಿಶೀಲನೆಯನ್ನು ಒಂದು ದಿನಕ್ಕೆ ಮುಂದೂಡಿ ವಾದ-ಪ್ರತಿವಾದ ಆಲಿಸಿದ ಬಳಿಕ ಚುನಾವಣಾಧಿಕಾರಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾಮಪತ್ರ ತಿರಸ್ಕರಿಸಿ ಅಥವಾ ಅಂಗೀಕರಿಸಿ ಒಮ್ಮೆ ಚುನಾವಣಾಧಿಕಾರಿ ತೀರ್ಮಾನ ತೆಗೆದುಕೊಂಡರೆ ಅದು ಅಂತಿಮ. ಆದನ್ನು ಚುನಾವಣೆ ಮುಗಿದ ಬಳಿಕವಷ್ಟೇ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು.

ಚಿಹ್ನೆ ಹಂಚಿಕೆ

* ರಾಷ್ಟ್ರೀಯ, ಪ್ರಾದೇಶಿಕ ಹಾಗೂ ಇತರೆ ನೋಂದಾಯಿತ ಮಾನ್ಯತೆ ಪಡೆದ ಪಕ್ಷಗಳಿಗೆ ಈಗಾಗಲೇ ಹಂಚಿಕೆಯಾಗಿರುವ ಚಿಹ್ನೆಗಳನ್ನು ಹೊರತುಪಡಿಸಿ ಹಂಚಿಕೆಗೆ ಮುಕ್ತವಾಗಿರುವ 94 ಚಿಹ್ನೆಗಳ ಪೈಕಿ ಯಾವುದಾದರೂ ಒಂದು ಚಿಹ್ನೆಯನ್ನು ಅಭ್ಯರ್ಥಿಗಳು ನಾಮಪತ್ರದಲ್ಲಿ ನಮೂದಿಸಬೇಕು. ಒಂದೇ ಚಿಹ್ನೆಯನ್ನು ಇಬ್ಬರು ಕೇಳಿ ಅದೇ ಚಿಹ್ನೆ ಬೇಕು ಎಂದು ಇಬ್ಬರು ಪಟ್ಟು ಹಿಡಿದಾಗ ಚೀಟಿ ಎತ್ತುವ ಮೂಲಕ ಚಿಹ್ನೆ ಹಂಚಿಕೆ ಮಾಡಲಾಗುತ್ತದೆ.

* ನಾಮಪತ್ರ ವಾಪಸ್‌ ಪಡೆಯುವ ದಿನಾಂಕ ಮುಗಿದ ಬಳಿಕ ಅಭ್ಯರ್ಥಿಗಳ ಹೆಸರನ್ನು ಕನ್ನಡ ವರ್ಣಮಾಲೆಯ ಅಕಾರಾದಿಯಾಗಿ ಪ್ರಕಟಿಸಲಾಗುತ್ತದೆ.

 ಎಂ.ಕೆ.ಕೆಂಪೇಗೌಡ

ನಿವೃತ್ತ ನಿರ್ದೇಶಕರು, ಪಂಚಾಯತ್‌ರಾಜ್‌ ಇಲಾಖೆ

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.