ಹುಟ್ಟೂರಲ್ಲಿ ತಂದೆ,ತಾಯಿ ಸಮಾಧಿ ಸಮೀಪವೇ ಮಹದೇವ ಪ್ರಸಾದ್ ಅಂತ್ಯಕ್ರಿಯೆ
Team Udayavani, Jan 4, 2017, 6:58 PM IST
ಚಾಮರಾಜನಗರ:ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದ ಸಜ್ಜನ ರಾಜಕಾರಣಿ, ಸಹಕಾರಿ ಹಾಗೂ ಸಕ್ಕರೆ ಸಚಿವ ಎಚ್.ಎಸ್.ಮಹದೇವ ಪ್ರಸಾದ್(58) ಅವರ ಅಂತ್ಯಕ್ರಿಯೆ ಬುಧವಾರ ಸಂಜೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಸ್ವಗ್ರಾಮ ಹಾಲಹಳ್ಳಿಯ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಮಾದಾಪಟ್ಟಣದ ವಿರಕ್ತ ಮಠದ ಶ್ರೀಸದಾನಂದ ಸ್ವಾಮೀಜಿ ನೇತೃತ್ವದಲ್ಲಿ ವೀರಶೈವ ಸಂಪ್ರದಾಯದ ವಿಧಿವಿಧಾನಗಳ ಮೂಲಕ ತಂದೆ, ತಾಯಿ(ಶ್ರೀಕಂಠ ಶೆಟ್ಟಿ, ವೀರಮ್ಮ) ಸಮಾಧಿ ಸಮೀಪವೇ ಅಂತ್ಯಕ್ರಿಯೆ ನೆರವೇರಿಸಲಾಯಿತು. ವಿಭೂತಿ, ಉಪ್ಪು ಹಾಕಿದ ಬಳಿಕ ಮಣ್ಣು ಮುಚ್ಚಿ ಸಮಾಧಿ ಮಾಡಲಾಯಿತು ಎಂದು ವರದಿ ತಿಳಿಸಿದೆ.
ಅಂತ್ಯಕ್ರಿಯೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದರು.
ಚಿಕ್ಕಮಗಳೂರಿನ ಹೊರವಲಯದಲ್ಲಿರುವ ಸೆರಾಯ್ ರೆಸಾರ್ಟ್ ನಲ್ಲಿ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಅವರು ಮಂಗಳವಾರ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.