Hubballi ಈದ್ಗಾ ಮೈದಾನ ಗಣೇಶೋತ್ಸವ: ಸೆ.15 ಕ್ಕೆ ಮುಂದೂಡಿದ ಧಾರವಾಡ ಹೈಕೋಟ್೯
Team Udayavani, Sep 14, 2023, 9:46 PM IST
ಧಾರವಾಡ: ಹುಬ್ಬಳ್ಳಿಯ ಈದ್ಗಾ ಮೈದಾನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಅಂಜುಮನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠ, ಸೆ.15ಕ್ಕೆ ಮುಂದೂಡಿದೆ.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂದು ಹುಬ್ಬಳ್ಳಿಯ ಹಲವು ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು. ಅವುಗಳನ್ನು ಪರಿಶೀಲನೆ ಮಾಡಿದ್ದ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಅವರು, ಆ. 31ರಂದು ಜರುಗಿದ ಸಾಮಾನ್ಯ ಸಭೆಯಲ್ಲಿ ಪ್ರಸ್ತಾವನೆ ಮಾಡಿ, ಮುಂದಿನ ಐದು ವರ್ಷಗಳ ಅವಧಿಗೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವ ನಿರ್ಧಾರ ಕೈಗೊಂಡು ಠರಾವ ಪಾಸ್ ಮಾಡಿ, ಅದನ್ನು ಜಾರಿಗೊಳಿಸಲು ಪಾಲಿಕೆ ಆಯುಕ್ತರಿಗೆ ಸೂಚಿಸಲಾಗಿತ್ತು.
ಪಾಲಿಕೆಯ ಈ ನಿರ್ಧಾರವನ್ನು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮನ್ ಸಂಸ್ಥೆಯ ಆಡಳಿತ ಮಂಡಳಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಗುರುವಾರ ನ್ಯಾ. ಸಚಿನ್ ಮಗದುಮ್ ಅವರಿಂದ ಏಕಸದಸ್ಯ ಪೀಠದ ಎದುರು ವಿಚಾರಣೆ ನಡೆಯಿತು. ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.