Hubli; ದತ್ತಮೂರ್ತಿ 4 ಕೈ ಭಗ್ನ ಮಾಡಿದ ದುಷ್ಕರ್ಮಿಗಳು
Team Udayavani, Oct 7, 2024, 1:15 AM IST
ಹುಬ್ಬಳ್ಳಿ: ದೇಶಪಾಂಡೆ ನಗರದ ಹಳೆಯ ದೇಸಾಯಿ ಗ್ಯಾಸ್ ಗೋದಾಮು ಬಳಿಯ ಅಪರ್ಣಾ ಅಪಾರ್ಟ್‌ಮೆಂಟ್ ಆವರಣದಲ್ಲಿನ ಶ್ರೀ ಗುರು ದತ್ತಾತ್ರೇಯ ದೇವಸ್ಥಾನದಲ್ಲಿ ಪ್ರತಿಷ್ಠಿಸಲಾಗಿದ್ದ ದತ್ತಾತ್ರೇಯ ಮೂರ್ತಿಯ 4 ಕೈಗಳನ್ನು ದುಷ್ಕರ್ಮಿಗಳು ಹಾನಿಗೊಳಿಸಿದ್ದಾರೆ. ರವಿವಾರ ಬೆಳಗಿನ ಜಾವ ಎಂದಿನಂತೆ ಮಂದಿರದ ಪೂಜಾರಿ ಪೂಜೆ ಮಾಡಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ನವರಾತ್ರಿ ಉತ್ಸವ ಅಂಗವಾಗಿ ಅಪಾರ್ಟ್‌ಮೆಂಟ್ ಮತ್ತು ಸ್ಥಳೀಯ ನಿವಾಸಿಗಳು ರಾತ್ರಿ ಒಂದು ಗಂಟೆವರೆಗೂ ದಾಂಡಿಯಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ ಬೆಳಗಿನ ಜಾವದೊಳಗೆ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ.
ಅಪಾರ್ಟ್‌ಮೆಂಟ್ ಆವರಣದಲ್ಲಿ 2011ರಲ್ಲೇ ದತ್ತಾತ್ರೇಯ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯಿಂದ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಹಾಗೂ ಸ್ಥಳೀಯರು ತೀವ್ರ ಆಕ್ರೋಶಗೊಂಡಿದ್ದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳು ಯಾರೇ ಇರಲಿ ಅವರನ್ನು ಕೂಡಲೇ ಬಂಧಿಸಬೇಕು. ಪೊಲೀಸರು ಅಂಥವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.