ಬಿಜೆಪಿಗೆ ಅವಕಾಶ ನೀಡಿದರೆ ಭಾರೀ ಪ್ರತಿಭಟನೆ; ರಾಜ್ಯಪಾಲರಿಗೆ ಒತ್ತಡ ?
Team Udayavani, May 16, 2018, 3:49 PM IST
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲೇಬೇಕು ಎನ್ನುವ ಉದ್ದೇಶದೊಂದಿಗೆ ಕಾಂಗ್ರೆಸ್ ಮತ್ತು ಇತರ ಸಮಾನ ಮನಸ್ಕ ಪಕ್ಷಗಳು ಒಂದಾಗಿವೆ. ಸರ್ಕಾರ ರಚನೆಗೆ ಬಹುಮತ ಇರದ ಬಿಜೆಪಿಗೆ ರಾಜ್ಯಪಾಲರು ಅವಕಾಶ ನೀಡಿದರೆ ಬೃಹತ್ ಪ್ರತಿಭಟನೆ ನಡೆಸುವ ಮುನ್ಸೂಚನೆ ನೀಡಿ ಒತ್ತಡ ಹೇರಲು ಮುಂದಾಗಿವೆ.
104 ಸ್ಥಾನ ಹೊಂದಿರುವ ಬಿಜೆಪಿಗೆ ಬಹುಮತ ಇಲ್ಲ. ಅವರಿಗೆ ಅವಕಾಶ ನೀಡುವುದು ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಸಾಧ್ಯವಿಲ್ಲ, ಇದು ಕಾನೂನು ಬಾಹಿರವಾಗುತ್ತದೆ ಎಂದು ಕಾಂಗ್ರೆಸ್ ಹೇಳಿದೆ.
ಎಲ್ಲಿಯಾದರೂ ರಾಜ್ಯಪಾಲರು ಬಿಜೆಪಿ ಅವಕಾಶ ನೀಡಿದರೆ ಕಾಂಗ್ರೆಸ್ ಶಾಸಕರು, ಸಂಸದರು, ರಾಷ್ಟ್ರೀಯ ನಾಯಕರು, ಜೆಡಿಎಸ್ ಶಾಸಕರು, ಮುಖಂಡರು , ಇತರ ಕೆಲ ಪ್ರಾದೇಶಿಕ ಪಕ್ಷಗಳ ನಾಯಕರು ಆಹೋರಾತ್ರಿ ಧರಣಿ ನಡೆಸುವ ಮುನ್ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.
ಈಗಾಗಲೇ ಬಿಜೆಪಿಯು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದೆ. ಇನ್ನೊಂದೆಡೆ ಕಾಂಗ್ರೆಸ್ ಮೂರನೇ ಮತ್ತು ಜೆಡಿಎಸ್ ಸರಕಾರ ರಚಿಸುವುದಕ್ಕೆ ಬೇಷರತ್ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ನೀಡಿದೆ. ಇದರ ಆಧಾರದ ಮೇಲೆ ಕಾಂಗ್ರೆಸ್ ಜತೆ ಮೈತ್ರಿ ಸರಕಾರ ರಚಿಸಲು ಅವಕಾಶ ಕೋರಿ ಜೆಡಿಎಸ್ ಕೂಡ ರಾಜ್ಯಪಾಲರ ಮುಂದೆ ಹಕ್ಕು ಪ್ರತಿಪಾದಿಸಿದೆ.
ಈಗ ಚೆಂಡು ರಾಜ್ಯಪಾಲರ ಅಂಗಣದಲ್ಲಿದ್ದು, ಬಿಜೆಪಿಗೆ ಅವಕಾಶ ನೀಡುತ್ತಾರೋ, ಜೆಡಿಎಸ್ -ಕಾಂಗ್ರೆಸ್ ಸರ್ಕಾರ ರಚಿಸಲು ಅವಕಾಶ ಮಾಡಿ ಕೊಡುತ್ತಾರೋ ಎನ್ನುವುದನ್ನು ಕಾದು ನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.