![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 10, 2019, 3:00 AM IST
ರಾಯಚೂರು: ಪ್ರೀತಿಸಿ ಮದುವೆಯಾದ ಹೆಂಡತಿಯನ್ನು ತನ್ನಿಂದ ದೂರ ಮಾಡಲಾಗಿದೆ ಎಂದು ಆರೋಪಿಸಿ ಯುವಕನೊಬ್ಬ ಟವರ್ ಏರಿ ಪ್ರತಿಭಟನೆ ನಡೆಸಿದ ಪ್ರಸಂಗ ನಗರದಲ್ಲಿ ಮಂಗಳವಾರ ನಡೆದಿದ್ದು, ಯುವಕನನ್ನು ಕೆಳಗಿಳಿಸಲು ಪೊಲೀಸರು ಆರು ಗಂಟೆಗಳ ಪ್ರಹಸನ ನಡೆಸಿದ್ದಾರೆ.
ನಗರದ ನಿವಾಸಿ ಶಾಂತಕುಮಾರ ನಿಜಲಿಂಗಪ್ಪ ಕಾಲೋನಿಯಲ್ಲಿರುವ ಬಿಎಸ್ಸೆನ್ನೆಲ್ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ. ಬೆಳಗ್ಗೆ 12 ಗಂಟೆ ಸುಮಾರಿಗೆ ಟವರ್ ಹತ್ತಿದ ಯುವಕ ಯಾರು ಮನವೊಲಿಸಿದರೂ ಕೆಳಗೆ ಇಳಿಯಲಿಲ್ಲ. ಆರು ವರ್ಷದಿಂದ ಪ್ರೀತಿಸಿ ರಿಜಿಸ್ಟರ್ ಮದುವೆಯಾಗಿದ್ದೇನೆ. ಹೆಂಡತಿ ಮನೆಯವರಿಗೆ ಈ ಮದುವೆ ಇಷ್ಟವಿಲ್ಲ.
ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿ ನನ್ನ ಪತ್ನಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿದ್ದಾರೆ. ಆಕೆಯನ್ನು ಕರೆ ತರುವವರೆಗೂ ಕೆಳಗಿಳಿಯವುದಿಲ್ಲ ಎಂದು ಪಟ್ಟು ಹಿಡಿದ. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಯುವಕನ ಮೊಬೈಲ್‌ಗೆ ಕರೆ ಮಾಡಿ ಮನವೊಲಿಸಲು ಯತ್ನಿಸಿದರೂ ಫಲ ಸಿಗಲಿಲ್ಲ. ಹೆಂಡತಿಯನ್ನು ಕರೆ ತರದಿದ್ದಲ್ಲಿ ಟವರ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮೊಬೈಲ್ ಮೂಲಕ ಪೊಲೀಸರಿಗೆ ತಿಳಿಸಿದ.
ಯುವಕನ ತಾಯಿ ಬಂದು ಮನವಿ ಮಾಡಿದರೂ ಯುವಕ ಜಗ್ಗಲಿಲ್ಲ. ಕೊನೆಗೆ ಪೊಲೀಸರು ಕಾನ್ಫರೆನ್ಸ್ ಕರೆ ಮೂಲಕ ಪತ್ನಿ ಜತೆ ಮಾತನಾಡಿಸಿದರು. ನಾನು ಊರಲ್ಲಿಲ್ಲ. ಬಂದ ಕೂಡಲೇ ಬರುವುದಾಗಿ ಹೆಂಡತಿ ಒಪ್ಪಿಗೆ ನೀಡಿದ ಬಳಿಕ ಟವರ್‌ನಿಂದ ಕೆಳಗಿಳಿದ. ತರಚಿದ ಗಾಯಗಳಾಗಿದ್ದ ಕಾರಣ ಶಾಂತಕುಮಾರನನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.