BJP Protest; ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಅಭಿಯಾನ ಆರಂಭ: ಸುನೀಲ್ ಕುಮಾರ್

Team Udayavani, Jan 4, 2024, 12:29 PM IST

‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಅಭಿಯಾನ ಆರಂಭ: ಸುನೀಲ್ ಕುಮಾರ್

ಬೆಂಗಳೂರು: ಕಾಂಗ್ರೆಸ್ ಸರಕಾರದ ರಾಮವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಅಭಿಯಾನ ಇವತ್ತಿನಿಂದ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್‍ಕುಮಾರ್ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 1990 ಮತ್ತು 92ರ ಕರಸೇವೆಯಲ್ಲಿ ಕರ್ನಾಟಕದಿಂದಲೂ ಸಾವಿರಾರು ಜನರು ಅವತ್ತಿನ ಸರಕಾರದ ಬೆದರಿಕೆಗೂ ಬಗ್ಗದೆ ಭಾಗವಹಿಸಿದ್ದರು. ಅವತ್ತಿನ ಕಾಂಗ್ರೆಸ್ಸಿಗರು ಕರಸೇವೆಗೆ ಬೆದರಿಕೆ ಒಡ್ಡಿದ್ದರು. ಇವತ್ತು ಶ್ರೀರಾಮಮಂದಿರ ಉದ್ಘಾಟನೆ ಸಂದರ್ಭದಲ್ಲೂ ಕೂಡ ಕರಸೇವಕರು, ರಾಮಭಕ್ತರನ್ನು ಮತ್ತು ರಾಮಭಕ್ತರನ್ನು ಬೆದರಿಸುವ, ಭಯ ಪಡಿಸುವ ತಂತ್ರಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಆಕ್ಷೇಪಿಸಿದರು.

ನಾವೆಲ್ಲರೂ ಈ ಹೋರಾಟದಲ್ಲಿ ಭಾಗವಹಿಸಿದವರು. ರಾಮಮಂದಿರದ ನಿರ್ಮಾಣವು ಬಿಜೆಪಿಯ ಬದ್ಧತೆ. ನಮ್ಮ ಪ್ರಣಾಳಿಕೆಯಲ್ಲಿ ಹತ್ತಾರು ವರ್ಷಗಳಿಂದ ಹೇಳುತ್ತಲೇ ಬಂದಿದ್ದೇವೆ. ರಾಮಮಂದಿರವು ಒಂದು ರಾಜಕೀಯ ವಸ್ತುವಲ್ಲ. ಅದೊಂದು ಭಾವನೆಯ, ನಡವಳಿಕೆಯ ಹಾಗೂ ಬದ್ಧತೆಯ ಪ್ರಶ್ನೆ ಎಂದು ವಿಶ್ಲೇಷಿಸಿದರು.

ಈ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವಾಗ ರಾಮಭಕ್ತರನ್ನು ಕ್ರಿಮಿನಲ್‍ಗಳಿಗೆ ಹೋಲಿಸುವ ಕೆಲಸವನ್ನು ಸಿದ್ದರಾಮಯ್ಯನವರು ಇವತ್ತು ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಕಾರ್ಯಕರ್ತನನ್ನು ಕ್ರಿಮಿನಲ್ ಎಂದು ಹೇಳಿ ತನ್ನನ್ನು ಸಮರ್ಥಿಸಿಕೊಳ್ಳಲು ಸರಕಾರ ಹೊರಟಿದೆ. ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಕಾಂಗ್ರೆಸ್ಸಿಗರಿಗೆ ಅಮಾಯಕನಂತೆ ಕಾಣುತ್ತಾನೆ. ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಕೆ.ಜೆ.ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಹಾಕಿದವರು ಕಾಂಗ್ರೆಸ್ ಪಕ್ಷಕ್ಕೆ ಬ್ರದರ್ಸ್ ಆಗಿ ಕಾಣುತ್ತಾರೆ. ಆದರೆ, ಕರಸೇವೆಯಲ್ಲಿ ಭಾಗವಹಿಸಿದ ರಾಮಭಕ್ತರು ಮಾತ್ರ ಕಾಂಗ್ರೆಸ್ಸಿಗರಿಗೆ ಕ್ರಿಮಿನಲ್ ರೂಪದಲ್ಲಿ ಕಾಣುತ್ತಾರೆ ಎಂದು ಆಕ್ಷೇಪಿಸಿದರು.

ಈ ಎಲ್ಲ ನಡವಳಿಕೆಯ ಮೂಲಕ ರಾಜ್ಯದ ಹಿಂದುಗಳಿಗೆ ಈ ಸರಕಾರ ಸತ್ತು ಹೋದಂತೆ ಕಾಣುತ್ತದೆ. ಈ ಸರಕಾರ ರೈತರ ಪರವಾಗಿಯೂ ಇಲ್ಲ. ಹಿಂದೂಗಳ ಪರವಾಗಿಯೂ ಇಲ್ಲ. ಈ ಸರಕಾರ ಕನ್ನಡ ಪರವಾಗಿಯೂ ಇಲ್ಲ. ಕೇವಲ ಅಲ್ಪಸಂಖ್ಯಾತರನ್ನು ವೈಭವೀಕರಿಸುವುದರಲ್ಲಿ, ತುಷ್ಟೀಕರಿಸುವುದರಲ್ಲಿ ಈ ಸರಕಾರ ಇವತ್ತು ಮುಂದುವರೆಯುತ್ತಿದೆ ಎಂದು ಸುನೀಲ್‍ಕುಮಾರ್ ಅವರು ಟೀಕಿಸಿದರು.

ಈ ಅಭಿಯಾನ ಮುಂದುವರೆಯಲಿದೆ. ರಾಮಭಕ್ತರನ್ನು ಬೆದರಿಸುವ ಕಾರ್ಯವನ್ನು ಸರಕಾರ ಕೈಬಿಡಬೇಕು. ಮಂದಿರ ನಿರ್ಮಾಣ ಕಾರ್ಯದಲ್ಲಿ ಸರಕಾರವೂ ಸಹಕರಿಸಬೇಕು ಎಂದು ಆಗ್ರಹಿಸಿದರು. ನಾನು ಕೂಡ ಹತ್ತಾರು ಹೋರಾಟಗಳಲ್ಲಿ ಭಾಗವಹಿಸಿದ್ದೇನೆ. ಹೋರಾಟದಲ್ಲಿ ಭಾಗವಹಿಸಿದಾಗ ಪೊಲೀಸರು ಕೇಸುಗಳನ್ನು ಹಾಕಿಯೇ ಹಾಕುತ್ತಾರೆ. ಹಾಗಿದ್ದರೆ ನಾನೂ ಕೂಡ ಕ್ರಿಮಿನಲ್ ಆಗುತ್ತಾನೆಯೇ ಎಂದು ಪತ್ರಕರ್ತರ ಪ್ರಶ್ನೆಗೆ ಅವರು ಮರುಪ್ರಶ್ನೆ ಹಾಕಿದರು.

ರಾಜಕಾರಣಿಗಳೆಲ್ಲರೂ ಒಂದಲ್ಲ ಒಂದು ಹೋರಾಟದಲ್ಲಿ ಪಾಲ್ಗೊಂಡವರು. ಕೇಸು ಹಾಕಿದ ತಕ್ಷಣ ಕ್ರಿಮಿನಲ್ ಎನ್ನುವುದಾದರೆ ಎಲ್ಲ ರಾಜಕಾರಣಿಗಳೂ ಕೂಡ ಕ್ರಿಮಿನಲ್ ಆಗುತ್ತಾರೆ. ನನ್ನ ಮೇಲೆ 27 ಕೇಸಿತ್ತು. ಹಾಗಿದ್ದರೆ ನಾನು ಕೂಡ ಕ್ರಿಮಿನಲ್ಲಾ ಎಂದು ಕೇಳಿದರು. ಇದನ್ನು ಇವತ್ತು ಸರಕಾರ ಅರ್ಥ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.