ನಾನು ಜನರ ಕ್ಲರ್ಕ್,ಯಡಿಯೂರಪ್ಪ ಏನು?
Team Udayavani, Feb 16, 2019, 12:10 AM IST
ಹಾಸನ: ನಾನು ಯಾವುದೇ ಪಕ್ಷದ ಕ್ಲರ್ಕ್ ಅಲ್ಲ. ರಾಜ್ಯದ ಆರೂವರೆ ಕೋಟಿ ಜನರ ಕ್ಲರ್ಕ್‌ನಂತೆ ಕೆಲಸ ಮಾಡುತ್ತಿದ್ದೇನೆ. ಜನರ ಕೆಲಸವನ್ನು ಒಬ್ಬ ಕ್ಲರ್ಕ್‌ನಂತೆ ಮಾಡಲು ನನಗೆ ಹೆಮ್ಮೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಆಳುವ ಪಕ್ಷದ ಅಧ್ಯಕ್ಷನಾಗಿ ಅಮಿತ್ ಶಾ ಅವರು
ಇಷ್ಟು ಹಗುರವಾಗಿ ಮಾತನಾಡಬಾರದು. ಅಮಿತ್ ಶಾ ಅವರು ಒಬ್ಬ ಮುಖ್ಯಮಂತ್ರಿಯನ್ನು ಕ್ಲರ್ಕ್ ಎಂದು ಟೀಕಿಸುವುದಾದರೆ ಅವರ ಪಕ್ಷದ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಏನು ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲವೇ?ಅಪರೇಷನ್ ಕಮಲ, ಶಾಸಕರ ಖರೀದಿ ಮಾಡುತ್ತಿರುವ ಅವರ ಪಕ್ಷದ ರಾಜ್ಯಾಧ್ಯಕ್ಷರ ಬಗ್ಗೆ ಏಕೆ ಮಾತನಾಡುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಅಮಿತ್‌ಶಾ ಅವರಿಗೆ ನೈತಿಕತೆ ಇದ್ದರೆ ಆಪರೇಷನ್ ಕಮಲದ ಬಗ್ಗೆ ಮಾತನಾಡಬೇಕಾಗಿತ್ತು. ಆ ಬಗ್ಗೆ ಮಾತನಾಡಲಾರದಷ್ಟು ಮುಜುಗರದ ಸ್ಥಿತಿಯಲ್ಲಿದ್ದಾರೆ ಎಂದು ಚುಚ್ಚಿದ ಕುಮಾರ ಸ್ವಾಮಿ, ಅಭಿವೃದ್ಧಿ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಮುಂದಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
Basavaraj Horatti: ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ
ಲಾಕಪ್‌ಡೆತ್: ಹೆಡ್ ಕಾನ್‌ಸ್ಟೆಬಲ್ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್ ಕರೆ ಬಂದಿದೆ: ಸರಕಾರ
Chennai: ಐಶ್ವರ್ಯ ರಜನಿಕಾಂತ್, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್
information Technology Appointment: ಬೆಂಗಳೂರಲ್ಲೇ ಹೆಚ್ಚಿನ ಉದ್ಯೋಗ ನಿರೀಕ್ಷೆ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.