![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 22, 2022, 7:10 PM IST
ಬೆಂಗಳೂರು: ನನ್ನ ಆರೋಗ್ಯ ಉತ್ತಮವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಮಂತ್ರಿಗಳು; ” ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು. ಆದ ಕಾರಣ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು. ಇನ್ನು ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ಮಾಡಿದ್ದಾರೆ ” ಎಂದು ಹೇಳಿದ್ದಾರೆ.
ಮನೆಯಿಂದಲೇ ನನ್ನೆಲ್ಲಾ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಲಿದ್ದೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಇಮಾಮ್ ಸಂಘಟನೆಗಳ ಮುಖ್ಯಸ್ಥರ ಭೇಟಿಯಾದ ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್
ಇನ್ನು ಕೆಲ ದಿನಗಳ ನಂತರ ನಾನೇ ಖುದ್ದು ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜತೆಗೆ, ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗಲಿದ್ದೆನೆ. ಯಾವುದೇ ಕಾರಣಕ್ಕೂ ಮುಖಂಡರು, ಕಾರ್ಯಕರ್ತರು ಅನ್ಯತಾ ಭಾವಿಸಬಾರದು ಎಂದು ಕೋರುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಲ್ಲದೆ, ನನ್ನ ನಿವಾಸಕ್ಕೆ ಭೇಟಿ ನೀಡಿ ನನ್ನ ಆರೋಗ್ಯ ವಿಚಾರಿಸಿದ ಪ್ರತಿಪಕ್ಷ ನಾಯಕರಾದ ಶ್ರೀ ಸಿದ್ದರಾಮಯ್ಯ, ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪ, ಕಂದಾಯ ಸಚಿವ ಶ್ರೀ ಅಶೋಕ್ ಸೇರಿದಂತೆ ಇತರೆ ಎಲ್ಲಾ ಸಚಿವರು, ಮುಖಂಡರಿಗೆ ನಾನು ಆಭಾರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.
ಹಾಗೆಯೇ, ನನ್ನ ಆರೋಗ್ಯಕ್ಕಾಗಿ ನಾಡಿನ ದೇವಾಲಯಗಳಲ್ಲಿ ಪೂಜೆ, ಹರಕೆ ಮಾಡಿಕೊಂಡು ಅನ್ನದಾನ ಇತ್ಯಾದಿಗಳನ್ನು ಮಾಡಿದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಪ್ರೀತಿ ವಿಶ್ವಾಸಕ್ಕೆ ನನ್ನ ಹೃದಯ ತುಂಬಿ ಬಂದಿದೆ. ಅವರೆಲ್ಲರಿಗೂ ನನ್ನ ಶುಭ ಹಾರೈಕೆಗಳು ಎಂದು ಮಾಜಿ ಪ್ರಧಾನಮಂತ್ರಿಗಳು ಹೇಳಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.