ಹೈಕಮಾಂಡ್ ಸಿಎಂ ಸ್ಥಾನ ಕೊಟ್ಟರೆ ನಿಭಾಯಿಸಲು ಸಿದ್ದನಿದ್ದೇನೆ: ಪರಂ!
Team Udayavani, Nov 17, 2018, 3:11 PM IST
ಬೆಳಗಾವಿ: ನನಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ನೀಡಿದರೆ ನಿಭಾಯಿಸಲು ಸಿದ್ದನಿದ್ದೇನೆ ಎನ್ನುವ ಮೂಲಕ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಅಚ್ಚರಿ ಮೂಡಿಸಿದ್ದಾರೆ. ಈ ಹೇಳಿಕೆ ಕಾಂಗ್ರೆಸ್ನಲ್ಲಿ ಅಸಮಾಧಾನ ಇದೆ ಎನ್ನುವುದನ್ನು ಬಹಿರಂಗ ಪಡಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ‘ನಾನು ಪಕ್ಷದ ಕೆಲಸವನ್ನು ಪ್ರಮಾಣಿಕವಾಗಿ ನಿರ್ವಹಿಸಿದ್ದೇನೆ. ಚುನಾವಣೆ ವೇಳೆ 2 ಬಾರಿ ಪಕ್ಷ ಮುನ್ನೆಡೆಸಿದ್ದೇನೆ.8 ವರ್ಷ ಅಧ್ಯಕ್ಷ ನಾಗಿ ಕೆಲಸ ಮಾಡಿದ್ದೇನೆ. ನನಗೆ ನಮ್ಮ ಪಕ್ಷ ಮುಖ್ಯಮಂತ್ರಿಯಾಗಿ ಜವಾಬ್ದಾರಿ ಕೊಟ್ಟರೆ ಆ ಕೆಲಸ ಮಾಡ್ತೇನೆ.ಇಷ್ಟೇ ಸಾಕು ಅಂದರೆ ಅಷ್ಟೇ ಸಾಕು.ಹೈಕಮಾಂಡ್ ತೀರ್ಮಾನ ಅಂತಿಮ’ ಎಂದರು.
ಹೇಳಿಕೆ ಸಾಂದರ್ಭಿಕ ಅಷ್ಟೇ : ಸಿಎಂ!
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ ‘ಪರಮೇಶ್ವರ್ ಅವರು ನೀಡಿರುವ ಹೇಳಿಕೆಯಲ್ಲಿ ತಪ್ಪೇನಿಲ್ಲ, ಬೇರೆ ವ್ಯಾಖ್ಯಾನ ಮಾಡುವುದು ಬೇಡ.ಅವರು ಸಾಂದರ್ಭಿಕವಾಗಿ ಹೇಳಿದ್ದಾರೆ ಅಷ್ಟೇ. ತಪ್ಪು ಅರ್ಥ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಮಖ್ಯಮಂತ್ರಿಯಾಗುವ ಅರ್ಹತೆಯುಳ್ಳವರು ಹಲವು ಮಂದಿ ಇದ್ದಾರೆ. ಮುಖ್ಯಮಂತ್ರಿ ಸ್ಥಾನ ಯಾರಿಗೂ ಶಾಶ್ವತ ಅಲ್ಲ’ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.