BJP ಗೆ ಮೊದಲ ಸಲ ಅಧಿಕಾರ ಸಿಗಲು ನಾನೇ ಕಾರಣ: ಗಾಲಿ ಜನಾರ್ದನ ರೆಡ್ಡಿ
Team Udayavani, Jul 21, 2023, 7:08 AM IST
ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೆ ನಾನೇ ಕಾರಣನಾಗಿದ್ದೆ ಎಂದು ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.
ಬಜೆಟ್ ಚರ್ಚೆಯಲ್ಲಿ ಮಾತನಾಡಿದ ಅವರು, ಹಿಂದೂ-ಮುಸ್ಲಿಂ ಭಾಯಿ ಭಾಯಿ, ಭಾರತ ಮಾತೆ ನಮ್ಮೆಲ್ಲರ ತಾಯಿ ಎಂಬುದು ನನ್ನ ನಿಲುವು. ಈ ಹಿನ್ನೆಲೆಯಲ್ಲಿ ನಾನು ರಾಜಕಾರಣ ನಡೆಸಿದ್ದರಿಂದ 2013ರಲ್ಲಿ ಬಳ್ಳಾರಿ ಜಿಲ್ಲೆಯ 10 ಕ್ಷೇತ್ರಗಳ ಪೈಕಿ 9ರಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೆ ನಾನು ಕಾರಣನಾಗಿದ್ದೆ. ಈ ಬಾರಿಯೂ ನಮ್ಮ ಪಕ್ಷದಿಂದಲೇ ಬಿಜೆಪಿ ಹಲವು ಕ್ಷೇತ್ರದಲ್ಲಿ ಸೋತಿದೆ. ಮುಂಬರುವ ದಿನಗಳಲ್ಲಿ ನಾವೆಲ್ಲರೂ ಸೇರಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯೋಣ ಎಂದು ಹೇಳಿದರು.
ಈ ಬಜೆಟ್ನಲ್ಲಿ ನವಲಿ ಜಲಾಶಯಕ್ಕಾಗಿ ಸರ್ಕಾರ ಅನುದಾನ ಘೋಷಿಸಿದೆ. ಇದರಿಂದ ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಬೇಸಾಯಕ್ಕೆ ಅನುಕೂಲವಾಗುತ್ತದೆ. ಬಳ್ಳಾರಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಸರ್ಕಾರ ಆದಷ್ಟು ಬೇಗ ಅನುಮತಿ ನೀಡಬೇಕು. ರಾಯಚೂರು ವಿಶ್ವವಿದ್ಯಾನಿಲಯಕ್ಕೆ 200 ಕೋಟಿ ರೂ. ಮೀಸಲಿಡಬೇಕು ಎಂದು ಆಗ್ರಹಿಸಿದರು.
ಕರ್ನಾಟಕದಲ್ಲಿ ಹೆಲಿ ಟೂರಿಸಂನ್ನು ಪರಿಚಯಿಸಬೇಕು. ಇದರಿಂದ ಕಡಿಮೆ ಅವಧಿಯಲ್ಲಿ ನಮ್ಮ ಕರಾವಳಿ ತೀರಗಳು, ದೇವಸ್ಥಾನ, ಪಶ್ಚಿಮಘಟ್ಟಗಳ ದರ್ಶನ ಮಾಡುವುದಕ್ಕೆ ಸಾಧ್ಯವಿದೆ. ಅಂಜನಾದ್ರಿ ಪರ್ವತದಲ್ಲಿ ತಿರುಪತಿ ಮಾದರಿಯಲ್ಲಿ ಎಲ್ಲ ರಾಜ್ಯಗಳ ಯಾತ್ರಿ ನಿವಾಸ ಸ್ಥಾಪನೆ ಮಾಡುವಂತೆ ಆಯಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸರ್ಕಾರ ಪತ್ರ ಬರೆಯಬೇಕೆಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.