ನನ್ನ ಬಳಿ ಯಾವುದೇ ಪೆನ್ಡ್ರೈವ್ ಇಲ್ಲ: ನಿರಾಣಿ
Team Udayavani, Jul 9, 2020, 7:02 AM IST
ಬೆಂಗಳೂರು: ಕೋವಿಡ್ 19 ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನಲಾದ ದಾಖಲೆಗಳಿಗೆ ಸಂಬಂಧಿಸಿದಂತೆ ತಮ್ಮ ಬಳಿ ಯಾವುದೇ ಪೆನ್ ಡ್ರೈವ್ ಇಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ 19 ಸೋಂಕಿಗೆ ಚಿಕಿತ್ಸೆ ನೀಡಲು ಖರೀದಿ ಮಾಡಿರುವ ವೈದ್ಯಕೀಯ ಸಲಕರಣೆಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಲಾದ ಹಾಗೂ ಅದಕ್ಕೆ ಸಂಬಂಧಿಸಿದ 125 ಪುಟಗಳ ದಾಖಲೆಗಳ ಪೆನ್ಡ್ರೈವ್ ನನ್ನ ಬಳಿ ಇದೆ ಎಂದು ಕೆಲವು ಸಾಮಾಜಿಕ ಜಾಲತಾಣಗಳು, ವೆಬ್ ಪೋರ್ಟಲ್ಗಳು ಹಾಗೂ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದ್ದು ನಿರಾಧಾರ ಎಂದು ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜಾಪುರದಿಂದ ಬರುವಾಗ ನನ್ನೊಂದಿಗೆ ಒಬ್ಬರು ಅಧಿಕಾರಿ ಬಂದಿದ್ದರು. ಸುಮಾರು 125 ಪುಟಗಳ ದಾಖಲೆಗಳ ಪೆನ್ ಡ್ರೈವ್ ತಂದಿದ್ದು, ಅದನ್ನು ನನಗೆ ಕಳುಹಿಸಿಕೊಡುತ್ತೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾದ ಸಂಗತಿ.
ಕೋವಿಡ್ 19 ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಖರೀದಿಸಿರುವ ವೆಂಟಿಲೇಟರ್, ಪಿಪಿಇ ಕಿಟ್, ಮುಖಗವಸು, ಸರ್ಜಿಕಲ್ ಕೈಗವಸು, ಪರೀಕ್ಷೆ ಕೈಗವಸು, ಆಮ್ಲಜನಕ ಸಿಲೆಂಡರ್, ಕೋವಿಡ್ ಪರೀಕ್ಷೆ , ಸೋಂಕಿತರ ದಿನದ ಖರ್ಚು ಸೇರಿದಂತೆ ಇತರೆ ವೆಚ್ಚಳ ದಾಖಲೆ ಎಂದು ಹೇಳಲಾದ ಯಾವುದೇ ಪೆನ್ ಡ್ರೈವ್ ನನ್ನಬಳಿ ಇಲ್ಲ ಎಂದು ಸ್ಪಷ್ಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.