BJP: ಕುಮಾರಸ್ವಾಮಿ-ಅಮಿತ್ ಶಾ ಭೇಟಿ ವಿಚಾರ ನನಗೆ ಗೊತ್ತಿಲ್ಲ: ವಿಜಯೇಂದ್ರ
ಅರುಣ್ ಪುತ್ತಿಲ ನನ್ನನ್ನು ಭೇಟಿ ಮಾಡಿದ್ದು ಸತ್ಯ
Team Udayavani, Feb 23, 2024, 7:10 AM IST
ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ದಿಲ್ಲಿಗೆ ಹೋಗಿ ಅಮಿತ್ ಶಾ ಅವ ರನ್ನು ಭೇಟಿ ಮಾಡುತ್ತಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿಯಿಂದ ಕೆಲವರನ್ನು ಕಾಂಗ್ರೆಸ್ಗೆ ಸೆಳೆಯುವ ವಿಚಾರವೂ ನನಗೆ ಗೊತ್ತಿಲ್ಲ. ಇಂತಹ ಊಹಾಪೋಹಕ್ಕೆ ಉತ್ತರ ಕೊಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ಮತ್ತು ಬಿಜೆಪಿ ನಡುವೆ ಸೀಟು ಹಂಚಿಕೆಯಲ್ಲಿ ಗೊಂದಲಗಳಿಲ್ಲ. ಮುಂದೆಯೂ ಅದು ಉದ್ಭವ ಆಗುವುದಿಲ್ಲ. ಕುಮಾರಸ್ವಾಮಿ ಅಮಿತ್ ಶಾ ಅವರನ್ನು ಯಾಕೆ ಭೇಟಿ ಮಾಡುತ್ತಿದ್ದಾರೆ ಅಂತ ನನಗೆ ಗೊತ್ತಿಲ್ಲ. ಮುಂದಿನ ತಿಂಗಳ ಮೊದಲ ವಾರದಲ್ಲಿ ದಿಲ್ಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುತ್ತೇನೆ ಎಂದರು.
ಅರುಣ್ ಪುತ್ತಿಲ ಭೇಟಿ ನಿಜ:
ಮಂಗಳೂರು ಭಾಗದ ಹಿಂದೂ ಪರ ಹೋರಾಟಗಾರ ಅರುಣ್ ಕುಮಾರ್ ಪುತ್ತಿಲ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ, ಪುತ್ತಿಲ ನನ್ನನ್ನು ಭೇಟಿ ಮಾಡಿದ್ದು ಸತ್ಯ. ಈ ವೇಳೆ ಯಾವುದೇ ಷರತ್ತುಗಳಿಲ್ಲದೆ ಬಿಜೆಪಿ ಸೇರ್ಪಡೆಯಾಗಿ. ಮೋದಿ ನಾಯಕತ್ವಕ್ಕಾಗಿ ಎಲ್ಲರೂ ಒಂದಾಗಬೇಕು ಎಂದು ಹೇಳಿದ್ದೇನೆ. ನಾನು ಕೂಡ ಅಲ್ಲಿನ ಸ್ಥಳೀಯ ಮುಖಂಡರ ಜತೆ ಚರ್ಚೆ ಮಾಡುತ್ತೇನೆಂದು ಹೇಳಿ ದರು.
ಲೋಕ ಸಭಾ ಚುನಾವಣೆಗೆ ದಿಕ್ಸೂಚಿಯಲ್ಲ :
ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಮುಂದಿನ ಲೋಕ ಸಭಾ ಚುನಾವಣೆಗೆ ದಿಕ್ಸೂಚಿಯಲ್ಲ. ಈ ಹಿಂದೆ ನಂಜನಗೂಡು ಉಪ ಚುನಾವಣೆ ನಡೆದಾಗ ಸಿದ್ದರಾಮಯ್ಯ ಅವರ ಸರಕಾರವೇ ಇತ್ತು. ಬಳಿಕ ನಡೆದ ಚುನಾ ವ ಣೆ ಯಲ್ಲಿ ಸಿದ್ದರಾಮಯ್ಯ ಸರಕಾರ ಹೇಗೆ ಸೋತಿದೆ ಎಂಬು ದು ಜನರಿಗೆ ಗೊತ್ತಿದೆ. ಸರಕಾರ ಇದ್ದಾಗ ಉಪ ಚುನಾವಣೆಗಳು ಹೇಗೆ ನಡೆಯುತ್ತೆ ಎಂಬುದು ಜನರಿಗೆ ಗೊತ್ತಿದೆ. – ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
Contracter Case: ಸಚಿನ್ ಪಾಂಚಾಳ್ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.