ನನಗೆ ಸಿದ್ದರಾಮಯ್ಯ ಸರ್ಟಿಫಿಕೆಟ್ ಬೇಕಿಲ್ಲ: ಆರಗ ಜ್ಞಾನೇಂದ್ರ
Team Udayavani, Apr 10, 2022, 10:00 PM IST
ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮರ್ಥವಾಗಿ ಗೃಹ ಇಲಾಖೆ ನಿಭಾಯಿಸುತ್ತಿದ್ದೇನೆ. ಪಕ್ಷ ಹಾಗೂ ಮುಖ್ಯಮಂತ್ರಿ ಮೆಚ್ಚುವ ಕೆಲಸ ಮಾಡುತ್ತಿದ್ದೇನೆ. ನನಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸರ್ಟಿಫಿಕೆಟ್ ಬೇಕಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಉಲ್ಲಂ ಸುವವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ಏನಾಗಿದೆ, ಎಷ್ಟು ಸಾವಾಗಿದೆ ಎಂಬುದರ ಬಗ್ಗೆ ಸದನದಲ್ಲಿ ಹೇಳಿದ್ದೇನೆ. ಅವರು ಪಿಎಫ್ಐ, ಎಸ್‌ಡಿಪಿಐ ವಿರುದ್ಧದ ಪ್ರಕರಣ ವಾಪಾಸ್ ಪಡೆದವರು. ಅವರಿಂದ ನನಗೆ ಸರ್ಟಿಫಿಕೆಟ್ ಬೇಕಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ಕಾಂಗ್ರೆಸ್‌ನವರು ಅಧಿಕಾರದಲ್ಲಿ ಇಲ್ಲ. ಹೀಗಾಗಿ ರಾಜ್ಯ ಜಂಗಲ್ ರಾಜ್ ಆಗಿದೆ ಎಂದು ಆರೋಪಿಸುತ್ತಾರೆ. ಅವರ ಸರ್ಟಿಫಿಕೆಟ್‌ನಿಂದ ನಮ್ಮ ಸಾಮರ್ಥ್ಯ ಅಳೆಯಲಾಗಲ್ಲ. ಕೆಲವು ಘಟನೆ ಆಧರಿಸಿ ಅಸಮರ್ಥ ಎಂದು ಕರೆಯೋದು ಸರಿಯಲ್ಲ. ಬದ್ಧತೆಯಿಂದ ಕೆಲಸ ಮಾಡುತ್ತಿದ್ದು, ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ. ಚಂದ್ರು ಹತ್ಯೆ ಘಟನೆ ಬಳಿಕ ವಿಳಂಬ ಮಾಡದೆ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಕಾಲದಲ್ಲಿ ಗೃಹ ಇಲಾಖೆಯನ್ನು ಡಮ್ಮಿ ಮಾಡಿದ್ದರು. ಇಬ್ಬರು ಗೃಹ ಸಚಿವರನ್ನು ಡಮ್ಮಿ ಮಾಡಿದ್ದರು. ಒಬ್ಬ ನಿವೃತ್ತ ಪೊಲೀಸ್ ಆಧಿಕಾರಿ ಕೈಗೆ ಗೃಹ ಇಲಾಖೆ ಒಪ್ಪಿಸಿದ್ದರು. ವರ್ಗಾವಣೆಗೆ ಬ್ರೋಕರ್‌ಗಳನ್ನು ಇರಿಸಿಕೊಂಡಿದ್ದರು. ಈ ರೀತಿ ನಮ್ಮ ಅಧಿಕಾರದಲ್ಲಿ ಆಗಿದೆಯಾ? ಎಂದು ಪ್ರಶ್ನಿಸಿದರು.
ಚಂದ್ರು ಕೊಲೆ ಸಿಐಡಿಗೆ:
ನಗರದ ಹಳೇಗುಡ್ಡದಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಚಂದ್ರು ಎಂಬ ಯುವಕನ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಚಂದ್ರು ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಈ ಹತ್ಯೆಗೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಿ ಸತ್ಯವನ್ನು ಬಯಲಿಗೆ ಎಳೆಯಬೇಕು ಹಾಗೂ ಹಂತಕರನ್ನು ಶಿಕ್ಷೆಗೆ ಒಳಪಡಿಸಬೇಕು. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.
ಭಾಷೆ ವಿಚಾರಕ್ಕೆ ಚಂದ್ರು ಕೊಲೆಯಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಭಾಷೆ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ತನಿಖೆ ನಡೆಯುತ್ತಿರುವುದರಿಂದ ಈ ಹಂತದಲ್ಲಿ ನಾನು ಹೆಚ್ಚು ಮಾತನಾಡುವುದಿಲ್ಲ. ಅಮಾನುಷವಾಗಿ ಕೊಲೆ ಮಾಡಲಾಗಿದೆ. ನಮ್ಮ ಪೊಲೀಸ್ ವಿಭಾಗದ ಮೇಲೆ ನಂಬಿಕೆ ಅಥವಾ ಅಪನಂಬಿಕೆ ವಿಚಾರ ಇಲ್ಲಿ ಬರುವುದಿಲ್ಲ. ಸಿಐಡಿಯೂ ನಮ್ಮದೇ ಪೊಲೀಸರ ಮತ್ತೂಂದು ವಿಭಾಗವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.