H. D. Kumaraswamy ಮುಡಾದಲ್ಲಿ ನನಗೆ ಇನ್ನೂ ನಿವೇಶನ ಕೊಟ್ಟಿಲ್ಲ
Team Udayavani, Jul 27, 2024, 12:17 AM IST
ಬೆಂಗಳೂರು: ಮೈಸೂರಿನಲ್ಲಿ ನನಗೆ ನಿವೇಶನ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.
ಆದರೆ ನನಗೆ ಈವರೆಗೂ ಆ ನಿವೇಶನವನ್ನೇ ಕೊಟ್ಟಿಲ್ಲ. ನಾನು 2006ರಲ್ಲಿಯೇ ಮುಖ್ಯಮಂತ್ರಿಯಾಗಿದ್ದೆ. ಅಧಿಕಾರ ದುರುಪಯೋಗ ಮಾಡಿಕೊಳ್ಳಬೇಕು ಎಂದು ನನಗೆ ಅನ್ನಿಸಿದಿದ್ದರೆ ಆಗಲೇ ಆ ನಿವೇಶನವನ್ನು ನನ್ನ ಹೆಸರಿಗೆ ಬರೆಸಿಕೊಳ್ಳಬಹುದಾಗಿತ್ತು. ಆದರೆ ಸಿದ್ದರಾಮಯ್ಯ ಅವರಂತೆ ನಾನು ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ’ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಮುಡಾದಲ್ಲಿ ಕುಮಾರಸ್ವಾಮಿ ಅವರಿಗೂ ನಿವೇಶನವಿದೆ ಎಂಬ ಸಿದ್ದರಾಮಯ್ಯ ಹಾಗೂ ಸಚಿವ ಭೈರತಿ ಸುರೇಶ್ ಆರೋಪಕ್ಕೆ ಅವರು ದಿಲ್ಲಿಯಲ್ಲಿ ಪ್ರತಿಕ್ರಿಯೆ ನೀಡಿದರು.
2012ನೇ ಇಸವಿಯಲ್ಲಿ ನಾನು ಮುಡಾಕ್ಕೆ ಪತ್ರ ಬರೆದು ಹಂಚಿಕೆ ಮಾಡಿರುವ ನಿವೇಶನ ಕೊಡಿ ಎಂದು ಮನವಿ ಮಾಡಿದ್ದೆ. 2017ರಲ್ಲಿ ಮತ್ತೂಂದು ಪತ್ರವನ್ನೂ ಬರೆದಿದ್ದೆ. ಈ ನಿವೇಶನವನ್ನು ಅವರು ನನಗೆ ಪುಕ್ಕಟೆಯಾಗಿ ಕೊಡುತ್ತಿಲ್ಲ. ನಾನು 34,000 ರೂ. ಹಣ ಕಟ್ಟಿದ್ದೇನೆ. ಆ ಹಣ ಕಟ್ಟಿ 40 ವರ್ಷಗಳೇ ಆಗಿದೆ. ಇದು ನಿಜವಾದ ಪರಿಸ್ಥಿತಿ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.