ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಕೊಲೆ ಮಾಡುತ್ತಾರೆಂದು ಗೊತ್ತಿರಲಿಲ್ಲ, ಹೀಗೆ ಮಾಡುವ ಸಂಶಯ ಇದ್ದಿದ್ದರೆ ನಾವೇ ಪೊಲೀಸರಿಗೆ ತಿಳಿಸಿ ಬಗೆಹರಿಸುತ್ತಿದ್ದೆ: ಪವಿತ್ರಾ ಗೌಡ

Team Udayavani, Jun 15, 2024, 7:10 AM IST

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಖಾಕಿ ಖೆಡ್ಡಕ್ಕೆ ಬಿದ್ದಿರುವ ನಟ ದರ್ಶನ್‌ ಮತ್ತು ತಂಡವು ಕೃತ್ಯ ನಡೆದ ಘಟನೆಯನ್ನು ಎಳೆಎಳೆಯಾಗಿ ಪೊಲೀಸರ ಮುಂದೆ ಬಿಡಿಸಿಟ್ಟಿದೆ.

ಕೊಲೆಯಾಗುತ್ತಾರೆ ಎಂಬ ಕಲ್ಪನೆ ಇರಲಿಲ್ಲ ಎಂದು ಪವಿತ್ರಾ ಹೇಳಿದರೆ, ರೇಣುಕಾ ಸ್ವಾಮಿ ಕೊಲೆಗೂ ನನಗೂ ಸಂಬಂಧವಿಲ್ಲ ಎಂದು ದರ್ಶನ್‌ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ತನಿಖಾಧಿಕಾರಿಗಳು ಹೇಳಿಕೆ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಲು ನಿರಾಕರಿಸಿದ್ದಾರೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಮಾಡಿ ಬಂಧನಕ್ಕೊಳಗಾದವರ ವಿಚಾರಣೆ ನಡೆಯುತ್ತಿದೆ. ಖಾಕಿ ವಶಕ್ಕೆ ಪಡೆದಿರುವ 14 ಮಂದಿಯ ಹೇಳಿಕೆಗಳನ್ನು ಪ್ರತ್ಯೇಕವಾಗಿ ದಾಖಲಿಸಿಕೊಳ್ಳಲಾಗಿದೆ.

ನನಗೂ ಇದಕ್ಕೂ ಸಂಬಂಧವಿಲ್ಲ ಎಂದ ದರ್ಶನ್‌
ನಾನು ಕೊಲೆಯೇ ಮಾಡಿಲ್ಲ. ಆ ಉದ್ದೇಶ ನನಗೆ ಇರಲಿಲ್ಲ. ಪವಿತ್ರಾಗೆ ಅಶ್ಲೀಲ ಮೆಸೇಜ್‌ ಮಾಡಿದ ಸಂಗತಿ ಪವನ್‌ನಿಂದ ಗೊತ್ತಾಯಿತು. ಆತನಿಗೆ ಎಚ್ಚರಿಕೆ ಕೊಟ್ಟು ಕಳಿಸೋಣವೆಂದು ರೇಣುಕಾ ಸ್ವಾಮಿಯನ್ನು ಕರೆತರುವಂತೆ ರಾಘವೇಂದ್ರನಿಗೆ ಹೇಳಿದ್ದೆ. ಬಳಿಕ ಶನಿವಾರ ಸಂಜೆ ರೇಣುಕಾ ಸ್ವಾಮಿಯನ್ನು ಶೆಡ್‌ನ‌ಲ್ಲಿ ನೋಡಿದ್ದೆ. ಇನ್ನೊಂದು ಸಲ ಪವಿತ್ರಾಗೆ ಅಶ್ಲೀಲ ಮೆಸೇಜ್‌ ಮಾಡಿದರೆ ಸರಿ ಇರಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದೆ. ಅನಂತರ ದುಡ್ಡು ಕೊಟ್ಟು ಊಟ ಮಾಡ್ಕೊಂಡು ಊರಿಗೆ ಹೋಗುವಂತೆ ಹೇಳಿ ಹೊರಟು ಹೋದೆ. ನಾನು ಈ ಕೊಲೆ ಮಾಡಿಲ್ಲ. ನನಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ನಟ ದರ್ಶನ್‌ ಪೊಲೀಸರ ಮುಂದೆ ಹೇಳಿದ್ದಾರೆ ಎನ್ನಲಾಗಿದೆ.

ಮನೆ ಕೆಲಸದವನಿಗೆ ವಿಚಾರ ತಿಳಿಸಿದ್ದೆ
ಪವಿತ್ರಾ ಗೌಡ ವಿಚಾರಣೆ ವೇಳೆ, ನನಗೆ ರೇಣುಕಾ ಸ್ವಾಮಿ ಅಶ್ಲೀಲ ಫೋಟೋ ಹಾಗೂ ಸಂದೇಶ ಕಳುಹಿಸುತ್ತಿದ್ದ. ಈ ವಿಚಾರವನ್ನು ಮನೆ ಕೆಲಸಕ್ಕಿದ್ದ ಪವನ್‌ಗೆ ಹೇಳಿದ್ದೆ. ಈ ವಿಷಯ ಯಾವುದೇ ಕಾರಣಕ್ಕೂ ದರ್ಶನ್‌ಗೆ ಗೊತ್ತಾಗ
ಬಾರದು ಎಂದೂ ಹೇಳಿದ್ದೆ. ಕೊಲೆ ಮಾಡುತ್ತಾರೆ ಎಂದು ಕಲ್ಪಿಸಿಯೂ ಇರಲಿಲ್ಲ. ಹೀಗಾಗುತ್ತಿದೆ ಎಂದು ಗೊತ್ತಿದ್ದರೆ ನಾನೇ ಪೊಲೀಸರಿಗೆ ದೂರು ಕೊಟ್ಟು ಬಗೆಹರಿಸಿಕೊಳ್ಳುತ್ತಿದ್ದೆ. ಅಶ್ಲೀಲ ಮೆಸೇಜ್‌ ಮಾಡಿದ್ದನಲ್ಲ ಎಂದು ಪಟ್ಟಣಗೆರೆಯ ಶೆಡ್‌ನ‌ಲ್ಲಿ ಆತನಿಗೆ ಚಪ್ಪಲಿಯಲ್ಲಿ ಹೊಡೆದು ಬಂದಿದ್ದೆ ಎಂದು ಪೊಲೀಸರ ಮುಂದೆ ಭಾವುಕರಾಗಿ ತಿಳಿಸಿದ್ದಾರೆ.

ಇನ್ನು ಚಿತ್ರದುರ್ಗದ ತೂಗುದೀಪ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರ ವಿಚಾರಣೆ ಸಂದರ್ಭದಲ್ಲಿ, ದರ್ಶನ್‌ ಸರ್‌ ನಂಬರ್‌ ಕೊಟ್ಟು ಆ ವ್ಯಕ್ತಿಯನ್ನು ಪತ್ತೆ ಮಾಡುವಂತೆ ಹೇಳಿದರು. ನಂಬರ್‌ ಸಿಕ್ಕಿದ್ದರಿಂದ ರೇಣುಕಾ ಸ್ವಾಮಿಯನ್ನು ಪತ್ತೆ ಮಾಡಿದೆ ಎಂದಿದ್ದಾನೆ ಎಂದು ತಿಳಿದು ಬಂದಿದೆ.

ಮೂರ್ಚೆ ಹೋಗಿರಬಹುದು ಎಂದುಕೊಂಡಿದ್ದೆ
ರೇಣುಕಾ ಸ್ವಾಮಿ ಪವಿತ್ರಾ ಅಕ್ಕನಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡುತ್ತಿದ್ದ. ಈ ವಿಷಯ ತಿಳಿಸಿದ ಪವಿತ್ರಾ ಅಕ್ಕ, ಇದ್ಯಾರು ಪತ್ತೆ ಮಾಡು ಎಂದು ಹೇಳಿದ್ದರು. ಈ ಬಗ್ಗೆ ದರ್ಶನ್‌ಗೂ ತಿಳಿಸಿದ್ದೆ. ಹಲ್ಲೆ ನಡೆಸಿದ ಬಳಿಕ ಆತ ಮೂಛೆì ಹೋಗಿರಬಹುದು ಎಂದುಕೊಂಡಿದ್ದೆವು ಎಂದು ಪವಿತ್ರಾ ಮನೆಯಲ್ಲಿ ಕೆಲಸಕ್ಕಿದ್ದ ಪವನ್‌ ವಿಚಾರಣೆ ವೇಳೆ ತಿಳಿಸಿದ್ದಾನೆ.

ಟಾಪ್ ನ್ಯೂಸ್

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ ಪೊಲೀಸ್ ವಶಕ್ಕೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

1-sulakshana

AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

BYV-yathnal

BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ

CM–Suvarna-Soudha

Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ

Kannada ಸಾಹಿತ್ಯ ಸಮ್ಮೇಳನ 2 – 3 ವರ್ಷಕ್ಕೊಮ್ಮೆ ನಡೆಯಲಿ

Kannada ಸಾಹಿತ್ಯ ಸಮ್ಮೇಳನ 2 – 3 ವರ್ಷಕ್ಕೊಮ್ಮೆ ನಡೆಯಲಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ ಪೊಲೀಸ್ ವಶಕ್ಕೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.