ಮಾನನಷ್ಟ ಮೊಕದ್ದಮೆ ಹೂಡಲುಯತೀಂದ್ರಗೆ ಸೂಚಿಸಿದ್ದೇನೆ: ಸಿದ್ದು
Team Udayavani, Oct 8, 2017, 12:06 PM IST
ಮೈಸೂರು: ಬಿಜೆಪಿ ನಾಯಕರು ತಮ್ಮ ಪುತ್ರನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು. ಇದು ರಾಜಕೀಯ ಪ್ರೇರಿತ ಆರೋಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಮುಖಂಡರು ಸುಳ್ಳು ಹೇಳಿಕೆಗಳನ್ನು ನೀಡಿ ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಶಾಂತಾ ಇಂಡಸ್ಟ್ರೀಸ್ಗೆ ಜಮೀನು ಮಂಜೂರಾಗಿರುವ ಪ್ರಕರಣಕ್ಕೂ, ತಮ್ಮ ಪುತ್ರನಿಗೂ ಏನು ಸಂಬಂಧ ಎಂದು ಅವರು ಪ್ರಶ್ನಿಸಿದರು. ಈ ವಿಷಯದಲ್ಲಿ ಡಾ.ಯತೀಂದ್ರ ಅವರಿಗೆ ಸಂಬಂಧವಿಲ್ಲದಿದ್ದರೂ ಸುಳ್ಳು ಆರೋಪಗಳ ಮೂಲಕ ಬಿಜೆಪಿ ನಾಯಕರು ಹುಡುಗಾಟವಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಮಾನನಷ್ಟ ಮೊಕದ್ದಮೆ: ಚುನಾವಣೆ ಸಮೀಪಿಸುತ್ತಿರುವ ಕಾರಣದಿಂದ ಬಿಜೆಪಿ ನಾಯಕರು ಈ ರೀತಿಯ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಇತ್ತೀಚೆಗೆ ಸಂಸದೆ ಶೋಭಾ ಕರಂದ್ಲಾಜೆ ಸುಳ್ಳು ಆರೋಪ ಮಾಡಿದ್ದು, ಇದೀಗ ವಿಧಾನಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಸುಳ್ಳು ಆರೋಪ ಮಾಡಿದ್ದಾರೆ. ಬಿಜೆಪಿ ನಾಯಕರಲ್ಲಿ ಯಾವ ದಾಖಲೆಗಳು, ಮಾಹಿತಿ ಇಲ್ಲದಿದ್ದರೂ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಹೀಗಾಗಿ, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವಂತೆ ಯತೀಂದ್ರಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಶಾಂತಾ ಇಂಡಸ್ಟ್ರೀಸ್ಗೂ, ನನಗೂ ಯಾವುದೇ ಸಂಬಂಧವಿಲ್ಲ. ನಾನು ಅದರ ಪಾಲುದಾರ ಕೂಡ ಅಲ್ಲ.
ಹೀಗಾಗಿ, ಬಿಜೆಪಿಯವರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಕಳೆದ ವರ್ಷ ಕೂಡ ಬಿಜೆಪಿಯವರು ಈ ಆರೋಪ ಮಾಡಿದ್ದರು. ಆಗಲೇ ದಾಖಲೆ ಸಹಿತ ಉತ್ತರ ಕೊಟ್ಟಿದ್ದೇನೆ. ಆದರೂ ಚುನಾವಣೆ ಹತ್ತಿರವಾದಂತೆ ಪದೇಪದೇ ಅದೇ ವಿಚಾರ ಪ್ರಸ್ತಾಪ ಮಾಡುತ್ತಿದ್ದಾರೆ.
●ಡಾ.ಯತೀಂದ್ರ ಸಿದ್ದರಾಮಯ್ಯ, ಸಿಎಂ ಪುತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.