ಮೋದಿ ಅಲ್ಲ,2019 ಕ್ಕೆ ಪ್ರಧಾನಿಯಾಗುವುದು ನಾನೇ: ರಾಹುಲ್ ಗಾಂಧಿ
Team Udayavani, May 8, 2018, 11:57 AM IST
ಬೆಂಗಳೂರು: ‘2019 ರಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗುವುದಿಲ್ಲ,ನಾನೇ ಪ್ರಧಾನಿಯಾಗಿ ಆಯ್ಕೆಯಾಗುತ್ತೇನೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿ ಈ ಹೇಳಿಕೆ ನೀಡಿದ್ದಾರೆ.
‘ಬಿಜೆಪಿಯವರು ವ್ಯವಸ್ಥಿತವಾಗಿ ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುತ್ತಿದ್ದಾರೆ.ಪ್ರಧಾನಿ ಮೋದಿ ಅವರು ನಿರಂತರವಾಗಿ ಕರ್ನಾಟಕಕ್ಕೆ ಬರುತ್ತಿದ್ದಾರೆ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಅವರಿಗೆ ನನ್ನ ಪ್ರಶ್ನೆ ಏನೆಂದರೆ ಯಾಕೆ ಭ್ರಷ್ಟ, ಜೈಲು ಪಾಲಾಗಿದ್ದ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿಸಿದ್ದೀರಿ ? ಯಾಕೆ ಸ್ವಚ್ಛ ಚಾರಿತ್ರ್ಯ ಉಳ್ಳ ವ್ಯಕ್ತಿಯನ್ನು ಆಯ್ಕೆ ಮಾಡಿಲ್ಲ? 35,000 ಕೋಟಿ ರಾಜ್ಯದ ಹಣ ಲೂಟಿ ಹೊಡೆದ ಗಣಿ ಉದ್ಯಮಿಗಳನ್ನೇಕೆ ಪಕ್ಷದಲ್ಲಿ ಉಳಿಸಿಕೊಂಡಿದ್ದೀರಿ? ಯುವಜನರಿಗೆ 2 ಕೋಟಿ ಉದ್ಯೋಗ ನೀಡುತ್ತೇವೆ ಅಂದಿದ್ದೀರಲ್ಲ, ಸದ್ಯ ದೇಶದಲ್ಲಿ ಅತೀ ಹೆಚ್ಚಿನ ನಿರುದ್ಯೋಗ ಇರುವ ದಾಖಲೆ ನಿರ್ಮಾಣವಾಗಿದೆ. ಯಾಕೆ ಉದ್ಯೋಗ ಕೊಡುತ್ತಿಲ್ಲ’ ಎಂದು ಪ್ರಶ್ನಿಸಿದರು,ಪ್ರಧಾನಿ ಉತ್ತರ ನೀಡಲಿ ಎಂದರು.
ರಾಫೇಲ್ ಡೀಲ್ ಬಗ್ಗೆಯೂ ಪ್ರಶ್ನಿಸಿ ‘ಎಚ್‌ಎಎಲ್ ಕರ್ನಾಟಕದ್ದು, ಈ ಹಗರಣದ ಮೂಲಕ ಕನ್ನಡಿಗರಿಗೆ ಪ್ರಧಾನಿ ಮೋಸ ಮಾಡಿದ್ದಾರೆ’ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್: ವಸಂತ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.