ಪಕ್ಷ ವಹಿಸುವ ಜವಾಬ್ದಾರಿ ನಿರ್ವಹಿಸುವೆ
Team Udayavani, Nov 18, 2019, 3:03 AM IST
ಬೆಂಗಳೂರು: ವೈಯಕ್ತಿಕ ಕಾರಣಗಳಿಂದ ಪಕ್ಷದ ಸಭೆಗಳಿಗೆ ಹಾಜರಾಗಲು ಆಗುತ್ತಿಲ್ಲ. ಉಪ ಚುನಾವಣೆ ಯಲ್ಲಿ ಪಕ್ಷ ವಹಿ ಸುವ ಜವಾ ಬ್ದಾರಿಯನ್ನು ನಿರ್ವ ಹಿಸುವೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಭಾನುವಾರ ಮಾಧ್ಯಮ ಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರಿಗೆ ನನ್ನ ಪರಿಸ್ಥಿತಿ ಗೊತ್ತಿದೆ. ಕಾರ್ಯಕರ್ತನಾಗಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಏನೆಲ್ಲ ಸಾಧ್ಯವೋ ನನ್ನ ಶಕ್ತಿ ಮೀರಿ ಮಾಡುತ್ತೇನೆ.
ನನ್ನ ಪರಿಸ್ಥಿತಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ ಎಂದರು. ಇದೇ ವೇಳೆ, ಬೆಳಗಾವಿ ರಾಜ ಕಾರಣದಲ್ಲಿ ಹಸ್ತಕ್ಷೇಪ ಮಾಡಿದ್ದರು ಎಂದು ರಮೇಶ್ ಜಾರಕಿಹೊಳಿ ಮಾಡಿದ್ದ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಅವರೆಲ್ಲ ದೊಡ್ಡವರು. ಅವರ ಸುದ್ದಿ ನನಗೆ ಬೇಡ ಎಂದು ಹೇಳಿದರು.
ಉಪ ಚುನಾವಣೆಗೆ “ಕೈ’ವೀಕ್ಷಕರ ನೇಮಕ
ಬೆಂಗಳೂರು: 15 ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ವೀಕ್ಷಕರನ್ನು ನೇಮಕ ಮಾಡಿದೆ. ಅಥಣಿ, ಕಾಗವಾಡ-ಎಐಸಿಸಿ ಕಾರ್ಯದರ್ಶಿ, ಎಸ್.ಎ.ಸಂಪತ್‌ಕುಮಾರ್, ಗೋಕಾಕ್, ಯಲ್ಲಾಪುರ-ಎಐಸಿಸಿ ಕಾರ್ಯದರ್ಶಿ, ವಂಶಿಚಂದ ರೆಡ್ಡಿ, ಹಿರೆಕೆರೂರ, ರಾಣೆಬೆನ್ನೂರು-ಪೊನ್ನಂ ಪ್ರಭಾಕರ, ಮಾಜಿ ಸಂಸದ, ಚಿಕ್ಕಬಳ್ಳಾಪುರ, ಹೊಸಕೋಟೆ-ಎಂ.ಎಂ. ಪಲ್ಲಂರಾಜು-ಮಾಜಿ ಸಂಸದ, ಕೆ.ಆರ್.ಪುರ,
ಶಿವಾಜಿನಗರ-ಮಯೂರ ಜಯಕುಮಾರ್, ತಮಿಳುನಾಡು ಪಿಸಿಸಿ ಕಾರ್ಯಾಧ್ಯಕ್ಷ, ಕೆ.ಆರ್.ಪೇಟೆ, ಹುಣಸೂರು-ವಿಶ್ವನಾಥನ್, ಮಾಜಿ ಸಂಸದ, ಮಹಾಲಕ್ಷ್ಮೀ ಲೇಔಟ್, ಯಶವಂತಪುರ-ಸಂಜೀವ್ ಜೋಸೆಫ್, ಪ್ರಧಾನ ಕಾರ್ಯದರ್ಶಿ, ಕೇರಳ ಪಿಸಿಸಿ, ವಿಜಯನಗರ-ಎನ್. ತುಳಿಸಿ ರೆಡ್ಡಿ, ಮಾಜಿ ಸಂಸದ, ಹಾಗೂ ಎಐಸಿಸಿ ಕಾರ್ಯದರ್ಶಿ ಜೆ.ಡಿ. ಶೀಲಂ ಅವರನ್ನು ಸಂಯೋಜಕರಾಗಿ ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.