ನಾನು ರಾಜೀನಾಮೆ ನೀಡಿ ಚಿರತೆ ಸೆರೆಯಾಗುವುದಾದರೆ ಈಗಲೇ ರಾಜೀನಾಮೆ ನೀಡುತ್ತೇನೆ: ಸಚಿವ ಕತ್ತಿ
ಮುರುಘಾ ಶ್ರೀಗಳ ವಿರುದ್ಧ ಆರೋಪ ಮಠದೊಳಗಿನ ಸಂಘರ್ಷದಿಂದ ಆದದ್ದು
Team Udayavani, Aug 29, 2022, 10:03 AM IST
ವಿಜಯಪುರ: ಬೆಳಗಾವಿ ಪಟ್ಟಣದಲ್ಲಿ ಪತ್ತೆಯಾಗಿರುವ ಚಿರತೆಯನ್ನು ಸೆರೆ ಹಿಡಿಯಲಾಗದ ಕಾರಣಕ್ಕೆ ವಿರೋಧಿಗಳು ನನ್ನ ರಾಜೀನಾಮೆ ಕೇಳುತ್ತಾರೆ. ನಾನು ರಾಜೀನಾಮೆ ನೀಡಿದರೆ ಚಿರತೆ ಸೆರೆ ಆಗುತ್ತದೆ ಎಂದಾದರೆ ಈಗಲೇ ರಾಜಿನಾಮೆ ನೀಡುತ್ತೇನೆ ಎಂದು ಅರಣ್ಯ ಸಚಿವ ಉಮೇಶ ಕತ್ತಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿರತೆ ಸೆರೆ ಹಿಡಿಯಲು ಉತ್ತರ ಕರ್ನಾಟಕ ಭಾಗದ ಸಿಬ್ಬಂದಿಯನ್ನು ಹಾಕಿದ್ದೇವೆ. ಪಳಗಿದ ಆನೆಗಳನ್ನು ತಂದಿದ್ದೇವೆ, ಆದರೂ ಚಿರತೆ ಸೆರೆ ಸಾಧ್ಯವಾಗಿಲ್ಲ. ಎರಡು ದಿನಗಳಿಂದ ಚಿರತೆ ಬೆಳಗಾವಿ ಪಟ್ಟಣದಲ್ಲಿ ಎಲ್ಲೂ ಕಂಡು ಬಂದಿಲ್ಲ. ಬೆಟ್ಟಕ್ಕೆ ಹೋಗಿರುವ ಸಾಧ್ಯತೆ ಇದೆ. ಸುದೈವಶಾತ್ ಈ ವರೆಗೆ ಯಾರಿಗೂ ಅಪಾಯ ಮಾಡಿಲ್ಲ ಎಂಬುದೇ ಸಮಾಧಾನದ ಸಂಗತಿ ಎಂದರು.
ಚಿರತೆ ಗೋಲ್ಫ್ ಕೋರ್ಟ್ ಸುತ್ತಮುತ್ತ ತಿರುಗಾಡುತ್ತಿದೆ ಎನ್ನಲಾಗಿದೆ. ಆದರೆ ಮೂರು ದಿನಗಳಿಂದ ಚಿರತೆ ಕಂಡು ಬಂದಿಲ್ಲ. ನಿಮಗೆ ಕಂಡರೆ ನಿಮ್ಮನ್ನೂ ಚಿರತೆ ಹಿಡಿಯಲು ಹಚ್ಚೋಣ ಎಂದು ಪತ್ರಕರ್ತರನ್ನು ಕಿಚಾಯಿಸಿದರು.
ಮುರುಘಾ ಶ್ರೀಗಳ ವಿರುದ್ಧ ಆರೋಪ ಮಠದೊಳಗಿನ ಸಂಘರ್ಷದಿಂದ ಆದದ್ದು
ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಚಿತ್ರದುರ್ಗ ಮುರುಘಾ ಶ್ರೀಗಳ ಲೈಂಗಿಕ ಕಿರುಕುಳ ಆರೋಪ ಪ್ರಕರಣದ ಕುರಿತು ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ನನಗೆ ನಿಖರ ಮಾಹಿತಿ ಇಲ್ಲ. ಆದರೆ ಶ್ರೀಗಳು ಹಾಗೂ ಮಾಜಿ ಶಾಸಕ ಬಸವರಾಜ ಮಧ್ಯದ ಆಂತರಿಕ ಸಂಘರ್ಷದ ಪ್ರತಿಷ್ಠೆ, ದ್ವೇಷ ಇಲ್ಲಿಗೆ ಬಂದು ತಲುಪಿದೆ ಎಂದರು.
ಇದನ್ನೂ ಓದಿ:ಮುರುಘಾ ಶರಣರ ವಿರುದ್ಧದ ದೂರಿನ ವಿಚಾರಣೆ ಆರಂಭ
ಸಂತ್ರಸ್ಥರೆನ್ನಲಾದ ಅಪ್ರಾಪ್ತ ವಿದ್ಯಾರ್ಥಿನಿಯರು ಬಾಲಕಿಯರು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ. ನ್ಯಾಯಾಲಯ ಏನು ತೀರ್ಮಾನ ಮಾಡುತ್ತದೆ ಎಂದು ನೋಡೋಣ. ಈ ಬಗ್ಗೆ ನನ್ನಲ್ಲಿ ಹೆಚ್ಚಿನ ಮಾಹಿತಿ ಇಲ್ಲ ಎಂದರು.
ಸ್ವಾಮೀಜಿ ವಿರುದ್ಧ ಆರೋಪ ಮಾಡಿದ್ದು ತಪ್ಪು, ರಾಜ್ಯದಲ್ಲಿ ನೈತಿಕ ಮೌಲ್ಯಗಳೊಂದಿಗೆ ಸಮಾಜ ತಿದ್ದಲು ಒಂದಿಬ್ಬರು ಸ್ವಾಮೀಜಿಗಳು ಉಳಿದುಕೊಂಡಿದ್ದಾರೆ. ಅವರ ಪ್ರಯತ್ನಗಳಿಗೆ ಇಂತಹ ಸಲ್ಲದ ಆರೋಪ ಮಾಡಿ ತೊಂದರೆಗೆ ಸಿಲುಕಿಸುವ ಕೆಲಸ ಆಗ ಬಾರದು. ಇದು ಸಮಾಜವನ್ನು ಬೇರೆ ದಿಕ್ಕಿನಲ್ಲಿ ಒಯ್ಯುವ ಕೆಲಸವಷ್ಟೇ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.