ಐಎಎಸ್‌ ಅಧಿಕಾರಿ ರಶ್ಮಿ ಮಹೇಶ್‌ ನಾಪತ್ತೆ?


Team Udayavani, Mar 14, 2018, 8:15 AM IST

31.jpg

ಬೆಂಗಳೂರು: ಐಎಎಸ್‌ ಅಧಿಕಾರಿ ರಶ್ಮಿ ಮಹೇಶ್‌ ಅವರು 2017ರ ಏಪ್ರಿಲ್‌ 16ರಿಂದ ರಜೆ ಮೇಲಿದ್ದು, 2017ರ ಜುಲೈ ನಂತರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಯನ್ನೂ ಸಂಪರ್ಕಿಸಿಲ್ಲ. ಬಳಿಕ ಅವರು ಸಾರ್ವಜನಿಕ ವಾಗಿಯೂ ಕಾಣಿಸಿಕೊಂಡಿಲ್ಲ.
ಹೀಗಾಗಿ ಅವರು 10 ತಿಂಗಳಿನಿಂದ ನಾಪತ್ತೆಯಾಗಿದ್ದು, ಎಲ್ಲಿದ್ದಾರೆ ಎಂಬುದನ್ನು ಬಹಿರಂಗಪಡಿಸುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಶ್ಮಿ ಮಹೇಶ್‌ ತಾವು ಕೆಲಸ ಮಾಡಿದ ಇಲಾಖೆಗಳಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ಬಯಲಿಗೆಳೆದಿದ್ದರು. ಈ ಕಾರಣಕ್ಕೆ ಪದೇಪದೆ ಅವರನ್ನು ವರ್ಗಾವಣೆ ಮಾಡಲಾಗುತ್ತಿತ್ತು. ಇದರಿಂದ ಬೇಸತ್ತಿದ್ದ ರಶ್ಮಿ ಮಹೇಶ್‌ 2017ರ ಏಪ್ರಿಲ್‌ 16ರಿಂದ ರಜೆ ಮೇಲಿದ್ದಾರೆ. ಅವರ ಸ್ನೇಹಿತರು ಮಾತ್ರವಲ್ಲದೆ ನಾನು ಕೂಡ ಸಂಪರ್ಕಕ್ಕೆ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ ಮತ್ತು ಅವರು ಎಲ್ಲಿ ಹೋಗಿದ್ದಾರೆ ಎಂಬುದನ್ನು ಪತ್ತೆಹಚ್ಚಲೂ ಸಾಧ್ಯವಾಗಿಲ್ಲ. ಆದ್ದರಿಂದ ಅವರಿಗೆ ಏನಾಗಿದೆ? ಏಕೆ ಯಾರಿಗೂ ಸಿಗುತ್ತಿಲ್ಲ? ಯಾರು ಅಡಗಿಸಿಟ್ಟಿದ್ದಾರೆ ಎಂಬುದನ್ನು ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರ ಪತ್ತೆಹಚ್ಚಿ ಬಹಿರಂಗಪಡಿಸಬೇಕೆಂದು ಆಗ್ರಹಿಸಿದರು.

ನಿರಂತರ ಕಿರುಕುಳ: 2014ರಲ್ಲಿ ದನಗಳ್ಳ ಕಬೀರ್‌ ಎನ್‌ಕೌಂಟರ್‌ ಪ್ರಕರಣದಲ್ಲಿ ನಕ್ಸಲ್‌ ನಿಗ್ರಹ ಪಡೆಯ ಸಿಬ್ಬಂದಿ ನವೀನ್‌ ನಾಯಕ್‌ ಅಮಾನತಿನಿಂದ ಹಿಡಿದು ಕಾಂಗ್ರೆಸ್‌ ಸರ್ಕಾರದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಇದರಿಂದ ಕೆಲವು ಅಧಿಕಾರಿಗಳು ನಿಗೂಢವಾಗಿ ಮೃತಪಟ್ಟರೆ, ಇನ್ನೂ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಲವು ದಕ್ಷ
ಅಧಿಕಾರಿಗಳ ಮೇಲೆ ಹಲ್ಲೆ, ಕೊಲೆ ಯತ್ನ ಪ್ರಕರಣಗಳೂ ನಡೆದಿವೆ. ಆದರೆ, ಸರ್ಕಾರ ಅಂತಹ ದಕ್ಷ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆಯೇ ವಿನಃ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ. ಪ್ರಾಮಾಣಿಕ ಐಎಎಸ್‌ ಅಧಿಕಾರಿ ವಿಜಯಕುಮಾರ್‌ ಅವರು ನಿವೃತ್ತಿಯಾಗಲು 2 ತಿಂಗಳಿರುವಾಗ ಅವರನ್ನು ಕಡ್ಡಾಯ ನಿವೃತ್ತಿ ಪಡೆಯುವಂತೆ ಮಾಡಲಾಗಿದೆ. ಕೆಎಎಸ್‌ ಅಧಿಕಾರಿ
ಮಥಾಯಿ ಅವರಿಗೆ ಸರಿಯಾಗಿ ವೇತನವನ್ನೂ ನೀಡದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿದರು.

ಬೇಸತ್ತು ರಜೆ ಮೇಲೆ ಹೋಗಿದ್ದಾರೆ 
ಐಎಎಸ್‌ ಅಧಿಕಾರಿ ರಶ್ಮಿ ಮಹೇಶ್‌ 2017ರ ಜು.16ರಿಂದ ರಜೆ ಮೇಲೆ ಇರುವುದನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ
ಇಲಾಖೆ ಖಚಿತ ಪಡಿಸಿದೆ. 2017ರ ಜುಲೈ ನಂತರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯನ್ನೂ ಅವರು ಸಂಪರ್ಕಿಸಿಲ್ಲ
ಎನ್ನಲಾಗಿದೆ. ಈ ಕುರಿತು ಅವರನ್ನು ಉದಯವಾಣಿ ಸಂಪರ್ಕಿಸಲು ಪ್ರಯತ್ನಿಸಿದರಾದರೂ ಸಂಪರ್ಕಕ್ಕೆ ಸಿಗಲಿಲ್ಲ. ಇಲಾಖೆಯ
ವೆಬ್‌ಸೈಟ್‌ನಲ್ಲಿ ಕೂಡ ರಜೆಯ ಮೇಲಿದ್ದಾರೆ ಎಂದು ನಮೂದಾಗಿದೆ. ರಜೆ ತೆಗೆದುಕೊಳ್ಳಲು ಕಾರಣ ಸ್ಪಷ್ಟವಾಗಿಲ್ಲವಾದರೂ,
ಹಲವು ಬಾರಿ ಮೇಲಿಂದ ಮೇಲೆ ವರ್ಗವಣೆ ಆಗಿರುವುದರಿಂದಲೇ ರಜೆ ಹಾಕಿದ್ದರೆ ಎನ್ನಲಾಗಿದೆ.

ತಾವು ಕೆಲಸ ಮಾಡಿದ ಇಲಾಖೆಗಳಲ್ಲಿ ನಡೆಯುತ್ತಿದ್ದ ಒಂದಲ್ಲಾ ಒಂದು ಅಕ್ರಮಗಳನ್ನು ಬಯಲಿಗೆಳೆದಿದ್ದರು. ಈ ಕಾರಣಕ್ಕೆ ಪದೇಪದೆ ಅವರನ್ನು ವರ್ಗಾವಣೆ ಮಾಡಲಾಗುತ್ತಿತ್ತು. ಪಿಯು ಮಂಡಳಿಯಲ್ಲಿ ನಿರ್ದೇಶಕರಾಗಿದ್ದಾಗ ಮಂಡಳಿಯ ಅಕ್ರಮಗಳನ್ನು
ಬಹಿರಂಗಪಡಿಸಿದ್ದರು. ನಂತರ ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿಯಾಗಿ ಖಾಸಗಿ ವೈದ್ಯಕೀಯ ಮತ್ತು ದಂತ
ವೈದ್ಯಕೀಯ ಕಾಲೇಜುಗಳ ಮೇಲೆ ತಿರುಗಿಬಿದ್ದಿದ್ದರು. ಈ ಕಾರಣಕ್ಕಾಗಿ ಅವರನ್ನು ರಜೆ ಮೇಲೆ ಕಳುಹಿಸಿ ನಂತರ ಮೈಸೂರಿನ ಆಡಳಿತ ಮತ್ತು ತರಬೇತಿ ಕೇಂದ್ರದ ಆಯಕ್ತರಾಗಿ ವರ್ಗ ಮಾಡಲಾಗಿತ್ತು. ಅಲ್ಲಿಯೂ ತರಬೇತಿ ಕೇಂದ್ರದಲ್ಲಿ ಸುಮಾರು 100 ಕೋಟಿ ರೂ. ಹಗರಣ ಬೆಳಕಿಗೆ ತಂದಿದ್ದರು. ಈ ಕಾರಣಕ್ಕಾಗಿ ಅವರ ಮೇಲೆ ಹಲ್ಲೆಯೂ ನಡೆದಿತ್ತು. ಅದಾದ ಬಳಿಕ ಅವರನ್ನು ಆಹಾರ ಸಂಸ್ಕರಣೆ ಮತ್ತು ಕೊಯ್ಲೋತ್ತರ ತಂತ್ರಜ್ಞಾನ ಇಲಾಖೆಗೆ ವರ್ಗಾಯಿಸಲಾಯಿತು. ಕೆಲವೇ ದಿನಗಳಲ್ಲಿ ಬಿಬಿಎಂಪಿ ಹಣಕಾಸು ಮತ್ತು ಜಾಹೀರಾತು ವಿಭಾಗದ ಮುಖ್ಯಾಧಿಕಾರಿಯಾಗಿ ಮತ್ತೆ ವರ್ಗ ಮಾಡಲಾಗಿತ್ತು.

ಅಧಿಕಾರಿಗಳಿಗೆ ಸ್ವಾತಂತ್ರ್ಯವಿಲ್ಲ
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳು ಯಾರಧ್ದೋ ಹಿಡಿತ ಹಾಗೂ ಮರ್ಜಿಯಲ್ಲಿ ಕೆಲಸ
ಮಾಡಬೇಕಾದ ಸ್ಥಿತಿ ನಿರ್ಮಾಣ  ವಾಗಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಆರೋಪಿಸಿದ್ದಾರೆ. ಅಧಿಕಾರಿಗಳು
ಮುಖ್ಯಮಂತ್ರಿಯ ಹಿಡಿತದಲ್ಲಿಯೂ ಇಲ್ಲ. ಬೇರೆ ವ್ಯಕ್ತಿಯ ಅಣತಿ ಪ್ರಕಾರ ಕೆಲಸ ಮಾಡುವಂತಾಗಿದೆ. ಹಿರಿಯ ಐಪಿಎಸ್‌ ಅಧಿಕಾರಿ ಆರ್‌.ಪಿ.ಶರ್ಮಾ ಅಸಮಾಧಾನ ವ್ಯಕ್ತಪಡಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.

ಚೇತರಿಕೆ: ಸುದ್ದಿಗಾರರ ಜತೆ ಮಾತನಾಡಿದ ಮಲ್ಯ ಆಸ್ಪತ್ರೆ ವೈದ್ಯ ಡಾ.ದಿವಾಕರ ಶೆಟ್ಟಿ, ನ್ಯಾ. ವಿಶ್ವನಾಥ ಶೆಟ್ಟಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಬುಧವಾರ ವಿಶ್ವನಾಥ ಶೆಟ್ಟಿ ಅವರನ್ನು ಆಸ್ಪತ್ರೆಯಿಂದ ಕಳುಹಿಸಲಾಗುವುದು. ಸಂಪೂರ್ಣ 
ಗುಣಮುಖರಾಗಲು ಒಂದು ತಿಂಗಳ ಕಾಲಾವಕಾಶ ಬೇಕೆಂದು ತಿಳಿಸಿದರು. 

ಮುಖ್ಯಮಂತ್ರಿಗೆ ಸಿಕ್ಕ ಬಹುಮಾನವೇನು? 
ಬೆಂಗಳೂರು: ತಮಿಳುನಾಡಿನ ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ನಟರಾಜನ್‌ಗೆ ಜೈಲಿನಲ್ಲಿ ಸೌಲಭ್ಯ ಒದಗಿಸಿದ್ದಕ್ಕೆ ಏನು ಬಹುಮಾನ ಸಿಕ್ಕಿದೆ ಎಂಬುದನ್ನು ಬಹಿ ರಂಗಪಡಿಸುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು. ಶಶಿಕಲಾಗೆ ಸೌಲಭ್ಯ ಗಳನ್ನು ಕಲ್ಪಿಸುವಂತೆ ಮುಖ್ಯಮಂತ್ರಿಗಳೇ ಆದೇಶಿಸಿದ್ದರು ಎಂದು ನಿವೃತ್ತ ಡಿಜಿಪಿ ಸತ್ಯನಾರಾಯಣ ರಾವ್‌, ವಿಚಾರಣಾ ಸಮಿತಿಗೆ ತಿಳಿಸಿದ್ದಾರೆ. ಈ ಕಾರಣಕ್ಕಾಗಿಯೇ ಸರ್ಕಾರ ಆದೇಶ ಹೊರಡಿಸಿ ಸತ್ಯನಾರಾಯಣ ರಾವ್‌ ವಿರುದ್ಧ ಎಫ್ಐಆರ್‌ ದಾಖಲಿಸಿದೆ. ಇದರಿಂದ ಸಿದ್ದರಾಮಯ್ಯ ಸತ್ಯ ಹೇಳಿದವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬುದು
ಸಾಬೀತಾಗಿದೆ ಎಂದರು.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.