Congress ಸೋತರೆ ಸಚಿವರ ತಲೆ ದಂಡ ಎನ್ನುವುದು ಸುಳ್ಳು: ಸತೀಶ್ ಜಾರಕಿಹೊಳಿ
28ಕ್ಕೆ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ...
Team Udayavani, Jan 20, 2024, 4:29 PM IST
ಬೆಳಗಾವಿ: ”ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಸಚಿವರ ತಲೆ ದಂಡವಾಗುತ್ತದೆ ಎನ್ನುವುದು ಸುಳ್ಳು” ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಗಳ ಅರ್ಜಿ ಹೈಕಮಾಂಡ್ ಗೆ ಸಲ್ಲಿಸಲಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 10 ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ 6 ಆಕಾಂಕ್ಷಿಗಳ ಅರ್ಜಿ ಸಲ್ಲಿಕೆಯಾಗಿವೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಸಚಿವರಿಗೆ ಯಾವುದೇ ಮಾನದಂಡ ಇಲ್ಲ. ಶಕ್ತಿ ಮೀರಿ ಪ್ರಯತ್ನ ಮಾಡುತ್ತೇವೆ. 28 ಲೋಕಸಭಾ ಕ್ಷೇತ್ರಗಳಲ್ಲಿ ಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ. ಹೀಗಿರುವಾಗ ಸಚಿವರ ತಲೆದಂಡ ಎಂಬುದು ಸುಳ್ಳು. ಅಂತಹ ವಿಚಾರ ಪಕ್ಷದ ಹೈಕಮಾಂಡ್ ಮುಂದಿಲ್ಲ ಎಂದರು.
ಈಗಾಗಲೇ ಕಳೆದ ಆರು ತಿಂಗಳಿನಿಂದ ರಾಜ್ಯದ ಲೋಕಸಭಾ ಕ್ಷೇತ್ರಗಳಲ್ಲಿ ಆಂತರಿಕ ಸಮೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.