![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Nov 30, 2021, 1:32 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಉಲ್ಬಣಿಸಿದರೆ ಹಿಂದೆ ಇದ್ದಂತಹ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದು ಸಚಿವ ಆರ್.ಅಶೋಕ್ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಾಸ್ಕ್ ಬಳಸುದು ಕಡ್ಡಾಯವಾಗಿ ಮುಂದುವರೆಯಲಿದೆ. ರಾಜಕೀಯ ಸಮಾರಂಭ, ಮದುವೆ ನಿಯಮ ಎಲ್ಲರಿಗೂ ಅನ್ವಯವಾಗಲಿದೆ. ನಿಯಮ ಪಾಲನೆಯು ಬಿಜೆಪಿ, ಕಾಂಗ್ರೆಸ್, ಜನತಾದಳ ಎಲ್ಲದಕ್ಕೂ ಅನ್ವಯವಾಗುತ್ತದೆ ಎಂದರು.
ಮೈಸೂರು, ಚಾಮರಾಜನಗರ ಗಡಿಗಳಲ್ಲಿ ಸ್ಟ್ರಿಕ್ಟ್ ಮಾಡಲಾಗಿದೆ. ದಕ್ಷಿಣ ಆಫ್ರಿಕಾ ಸೇರಿದಂತೆ ಹಲವೆಡೆ ಕಾಣಿಸಿಕೊಂಡಿದೆ. ದೇಶಾದ್ಯಂತ ಹರಡಿಕೊಂಡಿದೆ. ವಿದೇಶದಿಂದ ಬರುವವರ ಮೇಲೆ ಕಣ್ಣಿಡಲಾಗಿದೆ. ಸ್ವತಃ ಜಿಲ್ಲಾಧಿಕಾರಿಗಳು ಗಡಿಯಲ್ಲಿ ಕಾಯುವಂತೆ ಸೂಚನೆ ನೀಡಲಾಗಿದೆ. ಕೇರಳದಿಂದ ಬರುವ ನರ್ಸಿಂಗ್ ವಿದ್ಯಾರ್ಥಿಗಳ ಮೇಲೆ ನಿಗಾ ಇಡಲಾಗಿದೆ. ಲಾಕ್ ಡೌನ್ ಮಾಡುವ ಪ್ರಸಂಗ ಬಂದಿಲ್ಲ ಎಂದರು.
ಇದನ್ನೂ ಓದಿ:ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ
ಮುರುಗೇಶ್ ನಿರಾಣಿ ಸಿಎಂ ಆಗಲಿದ್ದಾರೆ ಎಂಬ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರೂ ತಿರುಕನ ಕನಸು ಕಾಣುವುದು ಬೇಡ. ನಮ್ಮ ಕೇಂದ್ರದ ನಾಯಕ ಮೋದಿ, ಅಮಿತ್ ಶಾ ಅವರು ತೀರ್ಮಾನದಂತೆ ಸಿಎಂ ಆಗಿ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇದನ್ನು ನಮ್ಮ ವರಿಷ್ಠರೇ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.
ಜನ ಸಂಕಷ್ಟ ಸಂದರ್ಭದಲ್ಲಿ ಜನರ ಧ್ವನಿಯಾಗಿ ಸ್ಪಂದನೆ ಮಾಡಬೇಕು. ಬೊಮ್ಮಾಯಿಗೆ ಕಾಮನ್ ಸಿಎಂ ಅಂತ ಹೆಸರಿದೆ. ಈಗ ಬಂದಿರೋ ಎಲ್ಲಾ ಸಂಕಷ್ಟಗಳನ್ನ ಒಳ್ಳೆಯ ರೀತಿ ಕೆಲಸ ಮಾಡಿದ್ದಾರೆ. ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗುವುದು. ಈಶ್ವರಪ್ಪ ತಮಾಷೆಯಾಗಿ ಹೇಳಿದ್ದಾರೆ ಎಂದರು.
ಅಶೋಕ್ ಸಿಎಂ ಆಗುವುದಿಲ್ಲವೇ ಎಂಬ ವಿಚಾರಕ್ಕೆ ಮಾತನಾಡಿದ ಅವರು, ರಾಜ್ಯದ ಚುಕ್ಕಾಣಿ ಯಾರು ಹಿಡಿಬೇಕೆಂದು ಜನ ತೀರ್ಮಾನ ಮಾಡುತ್ತಾರೆ. ನಾಯಕರು, ಹಣೆ ಬರಹ ತೀರ್ಮಾನ ಆಗಲಿದೆ. ಈಗ ಬೊಮ್ಮಾಯಿ ಅವರಿಗೆ ಒಲಿದು ಬಂದಿದೆ. ಬಿಸಿಲಿನ ಕುದುರೆ ಮೇಲೆ ಹೋಗಬಾರದು ಎಂದರು
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.