ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ನ ಭ್ರಷ್ಟಾಚಾರಗಳ ಮರು ತನಿಖೆ
Team Udayavani, Dec 16, 2017, 8:57 AM IST
ಲಿಂಗಸುಗೂರು /ಕಾರಟಗಿ: ಕಾಂಗ್ರೆಸ್ ಅವಧಿಯಲ್ಲಿನ ಭ್ರಷ್ಟಾಚಾರಗಳನ್ನು ಎಸಿಬಿ, ಸಿಒಡಿ ಮೂಲಕ ತನಿಖೆ ನಡೆಸಿ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಕ್ಲೀನ್ ಚಿಟ್ ನೀಡಿ ರಕ್ಷಿಸಲಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ಕಾಂಗ್ರೆಸ್ ಸರ್ಕಾರದ
ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ ಮರು ತನಿಖೆಗೆ ಆದೇಶಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಹೇಳಿದರು.
ರಾಯಚೂರು ಜಿಲ್ಲೆ ಲಿಂಗಸುಗೂರಿನಲ್ಲಿ ನಡೆದ ಬಿಜೆಪಿ ನವಕರ್ನಾಟಕ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚೇ ದಿನ್ ಯಾವಾಗ ಬರುತ್ತೆ ಅಂತಾ ಕೇಳುತ್ತಿದ್ದಾರೆ. ಅವರ ತುಘಲಕ್ ದರ್ಬಾರ್ ಕೊನೆ ಆಗಲು ಇನ್ನು ನೂರು ದಿನ ಮಾತ್ರ ಬಾಕಿ ಇದೆ. ನಂತರ ಜನತೆ ಅವರನ್ನು ಮನೆಗೆ ಕಳುಹಿಸಲಿದ್ದಾರೆ. ಆಗ ರಾಜ್ಯದ ಜನತೆಗೆ ಅಚ್ಚೆ ದಿನ್ ಅರಿವಿಗೆ ಬರಲಿದೆ ಎಂದರು.
ನಂತರ ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ಮಾತನಾಡಿ, “ಸಿದ್ದರಾಮಯ್ಯನವರು ಅಧಿಕಾರದ ಮದದಿಂದ ಮೋದಿಯವರು ನನ್ನನ್ನು ಕಂಡು ಹೆದರುತ್ತಾರೆ’ ಎಂದು ಹೇಳುತ್ತಾರೆ. “ಮೋದಿಯವರ ಮುಂದೆ ನೀನೊಬ್ಬ ಬಚ್ಚಾ’ ಎಂದು ಕಿಡಿಕಾರಿದರು. ಸರ್ಕಾರದ ಪ್ರಚಾರಕ್ಕಾಗಿ 600 ಕೋಟಿ ರೂ.ಹಣ ಖರ್ಚು ಮಾಡುತ್ತಿದ್ದಾರೆ. ಇದು ಜನರ ದುಡ್ಡು. ಈ ರೀತಿ ಜನರ ದುಡ್ಡನ್ನು ಪೋಲು
ಮಾಡುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಕಳಸಾ-ಬಂಡೂರಿ ಯೋಜನೆ ಜಾರಿ ಕುರಿತಂತೆ ಕಾಂಗ್ರೆಸ್‌ನವರು ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಇನ್ನು 8ರಿಂದ 10 ದಿನಗಳಲ್ಲಿ ಕಳಸಾ-ಬಂಡೂರಿ ಸಮಸ್ಯೆ ಇತ್ಯರ್ಥಗೊಳಿಸಿ ಜನರ ಬಹು ದಿನಗಳ ಬೇಡಿಕೆ ಈಡೇರಿಸುತ್ತೇನೆ.
●ಯಡಿಯೂರಪ್ಪ, ಮಾಜಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Winter session: ವರ್ಷದ ಕೊನೆಯ ಸಂಸತ್ ಅಧಿವೇಶನ ಫಲಪ್ರದವಾಗಲಿ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.