ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ ಪ್ರಶ್ನೆ
Team Udayavani, Oct 13, 2024, 1:24 PM IST
ಹುಬ್ಬಳ್ಳಿ: ರಾಜ್ಯ ಸರ್ಕಾರ ಹುಬ್ಬಳ್ಳಿಯ ಪೊಲೀಸ್ ಸ್ಟೇಷನ್ ಮೇಲೆ ದಾಳಿ ಮಾಡಿರುವ ಪ್ರಕರಣವನ್ನು ಎನ್‌ಐಎ ತನಿಖೆ ನಡೆಸುತ್ತಿರುವ ಹಂತದಲ್ಲಿ ಪ್ರಕರಣ ಹಿಂಪಡೆಯುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅ. 13ರ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಸ್ಟೇಷನ್ ಮೇಲೆ ದಾಳಿ ಮಾಡಿದ್ದು, ರಾಜ್ಯದ ಮೇಲಿನ ದಾಳಿಯಾಗಿದೆ. ಇದು ಗಂಭೀರವಾದ ಪ್ರಕರಣ, ಇದನ್ನು ಎನ್‌ಐಎಗೆ ನೀಡಲಾಗಿದ್ದು, ಚಾರ್ಜ್ ಶೀಟ್ ಆಗಿದೆ. ಯುಎಪಿಐ ಅಡಿ ಎನ್‌ಐಎಗೆ ತನಿಖೆಗೆ ನೀಡುವಂತಹ ಪ್ರಕರಣವನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿರುವುದು ತುಷ್ಠೀಕರಣ ಹಾಗೂ ಒಂದು ಸಮುದಾಯವನ್ನು ಸಂತುಷ್ಟಿ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಎನ್‌ಐಎಗೆ ನೀಡಿರುವ ಪ್ರಕರಣವನ್ನು ವಾಪಸ್ ಪಡೆಯಲು ಬರುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೂ ಗೊತ್ತಿದೆ. ಆದರೂ, ತುಷ್ಠೀಕರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯಸರ್ಕಾರ ದೊಡ್ಡ ತಪ್ಪು ಸಂದೇಶ ರವಾನೆ ಮಾಡುತ್ತಿದೆ. ರಾಜ್ಯದಲ್ಲಿ ಡಿಜೆ ಹಳ್ಳಿ ಕೆಜೆ ಹಳ್ಳಿ ಪ್ರಕರಣ, ಮಂಗಳೂರಿನಲ್ಲಿ ಗಲಭೆ, ಹುಬ್ಬಳ್ಳಿಯಲ್ಲಿ ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಲಾಗಿದೆ. ಹಾಗಿದ್ದರೆ ಇನ್ನು ಮುಂದೆ ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರ ತಮ್ಮ ರಕ್ಷಣೆ ಮಾಡಿಕೊಳ್ಳದಂತಹ ಪರಿಸ್ಥಿತಿಗೆ ಬಂದಿದೆ. ನನ್ನ ಪ್ರಕಾರ ಕಾನೂನು ಸುವ್ಯವಸ್ಥೆ ಕಿತ್ತು ಹೋಗಿದೆ. ಈ ಥರ ಒಂದು ಕಾನೂನಾತ್ಮಕ ಚಿಂತನೆಯನ್ನೂ ರಾಜ್ಯ ಸರ್ಕಾರ ಕಳೆದುಕೊಂಡಿದೆಯಲ್ಲ ಎಂದು ಖೇದ ಅನಿಸುತ್ತಿದೆ. ತಮ್ಮ ತಪ್ಪು ಹಾಗೂ ಹಗರಣಗಳನ್ನು ಮುಚ್ಚಿಕೊಳ್ಳಲು ಈ ರೀತಿಯ ಆತುರದ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ರಾಜ್ಯ ಸರ್ಕಾರ ಹುಬ್ಬಳ್ಳಿ ಕೇಸ್ ವಾಪಸ್ ಪಡೆದಿರುವುದನ್ನು ವಿರೋಧಿಸಿ ಬಿಜೆಪಿಯವರು ಶಾಂತಿಯುತವಾಗಿ ಮನವಿ ಸಲ್ಲಿಸಲು ತೀರ್ಮಾನಿಸಿದ್ದರೂ, ಪೊಲೀಸರು ಅನುಮತಿ ನೀಡದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು. ಇದು ಪೊಲೀಸ್ ರಾಜ್ಯವಾಗಿದೆ. ಇಲ್ಲಿ ಪಜಾಪಭುತ್ವ ಇಲ್ಲದಾಗಿದೆ ಎಂದರು.
ರಾಜ್ಯ ಸರ್ಕಾರ ದುಷ್ಟರ ಸಂಹಾರ ಮಾಡುವ ಬಗ್ಗೆ ಜಾಹೀರಾತು ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಅಪರಾಧಿ ಮನೋಭಾವ. ತಾವು ಏನೂ ತಪ್ಪು ಮಾಡಿಲ್ಲ ಎಂಬ ಭಾವನೆ ಮೂಡಿಸುವ ಸಲುವಾಗಿ ಇತರರನ್ನು ದುಷ್ಟರು ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ರೀತಿ ಹಿಂದೆ ಆಗಿರಲಿಲ್ಲ. ಸರ್ಕಾರಿ ಜಾಹೀರಾತನ್ನು ತಮ್ಮ ಸ್ವಂತ ರಾಜಕಾರಣಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದು ಇದೇ ಪಥಮ ಇದು ಅತ್ಯಂತ ಖಂಡನೀಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
Mandya: ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.