ಸ್ವಾಭಿಮಾನವಿದ್ದರೆ ಬಿಜೆಪಿ ಬಿಟ್ಟು ಬನ್ನಿ
Team Udayavani, Oct 5, 2017, 10:12 AM IST
ಬೆಂಗಳೂರು: ಬಿಜೆಪಿಯಲ್ಲಿರುವ ಲಿಂಗಾಯತ ನಾಯಕರಿಗೆ ಸ್ವಾಭಿಮಾನ ಇದ್ದರೆ, ತಕ್ಷಣ ಬಿಜೆಪಿಯಿಂದ ಹೊರ ಬಂದು
ಲಿಂಗಾಯತ ಸಮಾಜದ ಘನತೆ ಕಾಪಾಡಬೇಕೆಂದು ಜಲ ಸಂಪನ್ಮೂಲ ಸಚಿವ ಎಂ.ಬಿ .ಪಾಟೀಲ್ ಆಗ್ರಹಿಸಿದ್ದಾರೆ.
ಬುಧವಾರ ಖಾಸಗಿ ಹೋಟೆಲ್ ವೊಂದರಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಸಚಿವರಾದ ವಿನಯ ಕುಲಕರ್ಣಿ, ಎಂ.ಬಿ. ಪಾಟೀಲ್ ಅವರು, ಆರ್‌ಎಸ್‌ಎಸ್ ದಕ್ಷಿಣ ಭಾರತ ಪ್ರಾಂತ ಪ್ರಚಾರಕ ಸು. ರಾಮಣ್ಣ ಲಿಂಗಾಯತರ ಕುರಿತು ನೀಡಿದ ವಿವಾದಿತ ಹೇಳಿಕೆಯನ್ನು ಕಟುವಾಗಿ ಖಂಡಿಸಿದರು. ಸು. ರಾಮಣ್ಣ ಲಿಂಗಾಯತರು ಶನಿ ಸಂತಾನ ಎಂದು ಹೇಳಿ ಲಿಂಗಾಯತರಿಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಎಂಬಿ ಪಾಟೀಲ್ ಮಾತನಾಡಿ, ಅಂತಹ ಹೇಳಿಕೆ ಕೇಳಿಯೂ ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಇರುವುದು
ಲಜ್ಜೆಗೇಡಿತನ. ಲಿಂಗಾಯತ ಧರ್ಮಕ್ಕೆ ಐತಿಹಾಸಿಕ ಪರಂಪರೆ ಇದೆ. ಸು. ರಾಮಣ್ಣ ಎನ್ನುವ ವ್ಯಕ್ತಿ ಇಡೀ ಲಿಂಗಾಯತ ಸಮುದಾಯಕ್ಕೆ ಹಾಗೂ ಸ್ವಾಮೀಜಿಗಳಿಗೆ ಅವಮಾನ ಮಾಡಿದ್ದಾರೆ. ಅವರ ಹೇಳಿಕೆಯನ್ನು ಬಿಜೆಪಿಯಲ್ಲಿರುವ ಲಿಂಗಾಯತ ನಾಯಕರಾದ ಯಡಿಯೂರಪ್ಪ, ಸೋಮಣ್ಣ, ಮುರುಗೇಶ್ ನಿರಾಣಿ, ಲಕ್ಷ್ಮಣ ಸವದಿ, ಉಮೇಶ್ ಕತ್ತಿಯಂತ ನಾಯಕರು ಖಂಡಿಸಬೇಕಿತ್ತು ಎಂದರು.
ಲಿಂಗಾಯತರದು ದಾಸೋಹ ಪರಂಪರೆ, ನಮ್ಮ ಮಠ ಹಾಗೂ ಸ್ವಾಮೀಜಿಗಳ ಬಗ್ಗೆ ಮಾತನಾಡಲು ಇವರಿಗೇನು ಅಧಿಕಾರ ಇದೆ. ಸು. ರಾಮಣ್ಣ ಕೂಡಲೇ ಲಿಂಗಾಯತ ಮಠಾಧೀಶರ ಹಾಗೂ ಸಮಾಜದ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ, ಆರ್‌ಎಸ್‌ಎಸ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸಚಿವ ವಿನಯ್ ಕುಲಕರ್ಣಿ ಮಾತನಾಡಿ, ಆರ್‌ಎಸ್‌ಎಸ್‌ನ್ನು ಲಿಂಗಾಯತ ಸಮುದಾಯವೇ ಪೋಷಿಸಿಕೊಂಡು ಬರುತ್ತಿದೆ. ನಮ್ಮದು ಶರಣ ಸಂತಾನ. ಸು. ರಾಮಣ್ಣ ಅವರದ್ದು ಗೋಡ್ಸೆ ಸಂತಾನ. ಅವರಿಂದ ನಾವು ಪಾಠ ಕಲಿಯುವ ಅಗತ್ಯವಿಲ್ಲ. ಆರ್‌ಎಸ್‌ಎಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಲಿಂಗಾಯತ ಯುವಕರು ತಕ್ಷಣ ಆ ಸಂಘಟನೆಯಿಂದ ಹೊರ ಬರಬೇಕು. ಇನ್ನು ಮುಂದೆ ಲಿಂಗಾಯತ ಯುವಕರು ಆರ್‌ಎಸ್‌ಎಸ್ ಸೇರದಂತೆ ಜಾಗೃತಿ ಮೂಡಿಸುತ್ತೇವೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಮಾತನಾಡಿ, ದೇಶದಲ್ಲಿ ಶನಿ ಸಂತಾನ ಯಾರದ್ದು ಎಂದು ಎಲ್ಲರಿಗೂ ಗೊತ್ತಿದೆ. ನಮ್ಮ ಧರ್ಮದ ವಿಷಯದಲ್ಲಿ ಮೂಗು ತೂರಿಸಲು ಸು. ರಾಮಣ್ಣ ಅವರಿಗೇನು ಕೆಲಸ. ನಮ್ಮಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇದೆ. ಅದನ್ನು ನಾವೇ ಸರಿಪಡಿಸಿಕೊಳ್ಳುತ್ತೇವೆ. ನಮ್ಮ ವಿಷಯದಲ್ಲಿ ಆರ್‌ಎಸ್‌ಎಸ್‌ನವರು ಮೂಗು ತೂರಿಸುವುದು ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ.
ಸು.ರಾಮಣ್ಣ ಕ್ಷಮೆಯಾಚನೆ
ಹಿಂದೂ ಸಮಾಜದ ಎಲ್ಲಾ ಜಾತಿ, ಮತ, ಪಂಥ, ಸಂಪ್ರದಾಯಗಳ ಬಗ್ಗೆ ಸಮಾನ ಗೌರವ ಹೊಂದಿ ಎಲ್ಲರನ್ನೂ
ಒಗ್ಗೂಡಿಸುವ ಕಾರ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಮಾಡುತ್ತಿದೆ. ಯಾವುದೇ ವ್ಯಕ್ತಿ, ಸಂಸ್ಥೆ ಅಥವಾ ಸಮಾಜವನ್ನು ನೋಯಿಸುವ ಉದ್ದೇಶ ನಮ್ಮದಲ್ಲ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಅದಕ್ಕಾಗಿ ಕ್ಷಮೆಯಾಚಿಸುತ್ತೇನೆ.
●ಸು. ರಾಮಣ್ಣ, ಆರ್‌ಎಸ್‌ಎಸ್ ಪ್ರಚಾರಕ, ಹುಬ್ಬಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.