ಜನರ ಸಮಾಧಿ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಸುಮ್ಮನೆ ಬಿಡಲ್ಲ: ಎಚ್ ಡಿಕೆ ಕಟು ಟೀಕೆ
Team Udayavani, Oct 15, 2023, 3:06 PM IST
ಬೆಂಗಳೂರು: ರಾಮನಗರ ಜಿಲ್ಲೆ ಸೇರಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ರಾಜಧಾನಿಯ ಕಸ ಸುರಿಯುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು; ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಸರಕಾರ ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಇಳಿದಾರು ಎಂದು ನೇರ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ‘ಪರ್ಸಂಟೇಜ್ ಪಟಾಲಂ’ ಈಗ ಕಸಕ್ಕೂ ಬಾಯಿ ಹಾಕಿದೆ! ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ! ಅದರ ಒಳಗುಟ್ಟು ರಟ್ಟಾಗಿದೆ! ‘ಬ್ರ್ಯಾಂಡ್’ ಹೆಸರಿನಲ್ಲಿ ಕೊಳ್ಳೆ ಹೊಡೆಯಲು, ಕಂಡ ಕಂಡ ಕಡೆ ಬೇಲಿ ಹಾಕಲು ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿಯೂ ಕಸದ ಡಂಪಿಂಗ್ ಯಾರ್ಡ್ʼಗಳನ್ನು ಸೃಷ್ಟಿ ಮಾಡುತ್ತಿರುವುದು ದಿಟ. ದಿನವೊಂದಕ್ಕೆ 1,630 ಟನ್ ಕಸ ಸುರಿದರೆ ಅಲ್ಲಿನ ಜನರ ಪಾಡೇನು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡೂರು ಜನ ಎದುರಿಸಿದ ಕಷ್ಟ ಅಷ್ಟಿಷ್ಟಲ್ಲ. ಯಶವಂತಪುರ ಕ್ಷೇತ್ರದ ಜನ ಈ ನರಕದಲ್ಲೇ ಬೇಯುತ್ತಿದ್ದಾರೆ. ದೊಡ್ಡಬಳ್ಳಾಪುರದ ಜನರೂ ಕಸದ ಕಷ್ಟಕ್ಕೆ ಸಿಲುಕಿದ್ದಾರೆ. ಈಗ ರಾಮನಗರದ ಸರದಿ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳನ್ನು ʼಕಸದ ತೊಟ್ಟಿʼಗಳನ್ನಾಗಿ ಮಾಡಿ ʼಸಾವಿನ ದಿಬ್ಬʼಗಳನ್ನು ನಿರ್ಮಿಸಲು ʼಬ್ರ್ಯಾಂಡ್ ಬೆಂಗಳೂರುʼ ಹೆಸರಿನಲ್ಲಿ ಹುನ್ನಾರ ಹೂಡಲಾಗಿದೆ. ಇದು ಘೋರ ಅಕ್ಷಮ್ಯ ಹಾಗೂ ರಾಜಧಾನಿಯ ಆಸುಪಾಸಿನಲ್ಲಿ ಈಗಾಗಲೇ ಕಟ್ಟಿರುವ ಪರಿಸರವನ್ನು ಮತ್ತಷ್ಟು ಹಾಳು ಮಾಡುವ ದುಷ್ಟ ತಂತ್ರವಷ್ಟೇ ಎಂದು ಕುಮಾರಸ್ವಾಮಿ ಅವರು ದೂರಿದ್ದಾರೆ.
ಬೆಂಗಳೂರು ಅಕ್ಕಪಕ್ಕದ ಜಿಲ್ಲೆಗಳು ಕೃಷಿ, ತೋಟಗಾರಿಕೆ, ಹೈನುಗಾರಿಕೆಯಲ್ಲಿ ಸಮೃದ್ಧವಾಗಿವೆ. ಅಲ್ಲಿನ ಪರಿಸರ, ಜೀವ ವೈವಿಧ್ಯಕ್ಕೆ ಹಾನಿ ಮಾಡಿ, ಜನಜೀವನವನ್ನು ಸರ್ವನಾಶ ಮಾಡುವುದು ಒಂದೆಡೆಯಾದರೆ; ಹೊಸ ಡಂಪಿಂಗ್ ಯಾರ್ಡ್ʼಗಳ ಮೂಲಕ ಕೋಟಿಗಟ್ಟಲೇ ಹಣವನ್ನು ಜೇಬಿಗೆ ಡಂಪ್ ಮಾಡಿಕೊಳ್ಳುವ ಖತರ್ನಾಕ್ ಐಡಿಯಾ ಇನ್ನೊಂದೆಡೆ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.
ಜಗತ್ತಿನಲ್ಲಿಯೇ ಉತ್ಕೃಷ್ಟ ಮಾವು, ರೇಷ್ಮೆ, ಹಣ್ಣು, ತರಕಾರಿ ಬೆಳೆಯುತ್ತಿರುವ ರಾಮನಗರ, ಬಿಡದಿ ಬಳಿ ನೂರು ಎಕರೆ ಪ್ರದೇಶದಲ್ಲಿ ಕಸ ಸುರಿಯಲು ಉಪ ಮುಖ್ಯಮಂತ್ರಿಗಳ ದೊಡ್ಡ ಹುನ್ನಾರದ ಒಳ ಉದ್ದೇಶ ಸ್ಪಷ್ಟ. ಈಗಾಗಲೇ ವೃಷಭಾವತಿ ಸೇರಿ ರಾಮನಗರ ಜಿಲ್ಲೆಯ ಜಲಮೂಲಗಳು ಪೂರ್ಣ ಹಾಳಾಗಿ ಅಂತರ್ಜಲವೂ ಕಲುಷಿತವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ನೂರು ಎಕರೆ ಸರಕಾರಿ ಭೂಮಿಯನ್ನು ಅನಾಮತ್ತಾಗಿ ಎಗರಿಬಿಡುವ ರಿಯಲ್ ಎಸ್ಟೇಟ್ ಬ್ರ್ಯಾಂಡೆಡ್ ಪರಿಕಲ್ಪನೆ ಇದಲ್ಲದೆ ಮತ್ತೇನು? ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿಯ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಕಾಂಗ್ರೆಸ್ ಸರಕಾರವು ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಇಳಿದಾರು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಮೈಕ್ರೋಫೈನಾನ್ಸ್ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.